Udupi: ಎಂಜಿಎಂ ಕಾಲೇಜಿನಲ್ಲಿ ನ.29 ರಿಂದ ಡಿ.1ವರೆಗೆ ಅಮೃತ ಮಹೋತ್ಸವ ಸಂಭ್ರಮ
29ರಂದು ಟಿ.ಮೋಹನದಾಸ ಪೈ ಮೆಮೋರಿಯಲ್ "ಅಮೃತ ಸೌಧ'ದ ಉದ್ಘಾಟನೆ
Team Udayavani, Nov 21, 2024, 2:45 AM IST
ಉಡುಪಿ: ಮಹಾತ್ಮ ಗಾಂಧಿ ಮೆಮೋರಿಯಲ್ ಕಾಲೇಜಿನ ಅಮೃತ ಮಹೋತ್ಸವ ನ.29ರಿಂದ ಡಿ.1ರ ವರೆಗೆ ಕಾಲೇಜಿನಲ್ಲಿ ನಡೆಯಲಿದೆ ಎಂದು ಅಕಾಡೆಮಿ ಆಫ್ ಜನರಲ್ ಎಜುಕೇಶನ್ (ಎಜಿಇ) ಕಾರ್ಯದರ್ಶಿ ಬಿ.ಪಿ. ವರದರಾಯ ಪೈ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ನ.29ರಂದು ಬೆಳಗ್ಗೆ 9ಕ್ಕೆ ಟಿ. ಮೋಹನದಾಸ ಪೈ ಮೆಮೋರಿಯಲ್ “ಅಮೃತ ಸೌಧ’ದ ಉದ್ಘಾಟನೆಯನ್ನು ಕಾಲೇಜು ಟ್ರಸ್ಟ್ ಅಧ್ಯಕ್ಷ ಟಿ. ಸತೀಶ್ ಯು. ಪೈ ನೆರವೇರಿಸಲಿದ್ದಾರೆ. ಶ್ರೀ ಕೃಷ್ಣಾಪುರ ಮಠಾಧೀಶರಾದ ಶ್ರೀ ವಿದ್ಯಾಸಾಗರತೀರ್ಥ ಸ್ವಾಮೀಜಿ ಉಪಸ್ಥಿತರಿರುವರು. ಬೆಳಗ್ಗೆ 9.30ಕ್ಕೆ ಜಿಲ್ಲಾ ಧಿಕಾರಿ ಡಾ| ಕೆ. ವಿದ್ಯಾಕುಮಾರಿ ವಸ್ತು ಪ್ರದರ್ಶನವನ್ನು ಉದ್ಘಾಟಿಸುವರು. ಇದೇ ವೇಳೆ ಅಂಚೆ ಲಕೋಟೆ ಬಿಡುಗಡೆ ನಡೆಯಲಿದೆ.
ಶಾಸಕ ಯಶ್‌ಪಾಲ್ ಎ.ಸುವರ್ಣ, ಮಣಿಪಾಲ ಎಜಿಇ ರಿಜಿಸ್ಟ್ರಾರ್ ರಂಜನ್ ಆರ್. ಪೈ, ಟಿಎಂಎ ಪೈ ಫೌಂಡೇಶನ್ ಅಧ್ಯಕ್ಷ ಅಶೋಕ್ ಪೈ, ಎಂಜಿಎಂ ಕಾಲೇಜಿನ ಟ್ರಸ್ಟಿ ವಸಂತಿ ಆರ್. ಪೈ, ಎಜಿಇ ಅಧ್ಯಕ್ಷ, ಮಾಹೆ ಸಹ ಕುಲಾಧಿಪತಿ ಡಾ| ಎಚ್.ಎಸ್.ಬಲ್ಲಾಳ್, ಸಹ ಕುಲಪತಿ ಡಾ| ನಾರಾಯಣ ಸಭಾಹಿತ್, ಬೆಂಗಳೂರು ಉತ್ತರ ವಿ.ವಿ.ಯ ಕುಲಪತಿ ಡಾ| ನಿರಂಜನ ವಾನಳ್ಳಿ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಮಧ್ಯಾಹ್ನ 12ಕ್ಕೆ ಆಡಳಿತ ಮಂಡಳಿ ಸದಸ್ಯರಿಗೆ ಗೌರವಾರ್ಪಣೆ, 2 ಗಂಟೆಗೆ ವಿಶ್ರಾಂತ ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬಂದಿಗೆ ಗೌರವಾರ್ಪಣೆ ನಡೆಯಲಿದೆ ಎಂದರು.
ಪ್ರಾಂಶುಪಾಲ ಪ್ರೊ| ಲಕ್ಷ್ಮೀನಾರಾ ಯಣ ಕಾರಂತ ಮಾತನಾಡಿ, ನ.30ರಂದು ಬೆಳಗ್ಗೆ 8.15ಕ್ಕೆ ನಡೆಯುವ ಶೋಭಾಯಾತ್ರೆಗೆ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಶ್ರೀ ಕೃಷ್ಣಮಠದ ಆವರಣದಲ್ಲಿ ಜ್ಯೋತಿ ಹಸ್ತಾಂತರಿಸಲಿದ್ದು, 9ಕ್ಕೆ ಗಾಂಧಿ ಮೈನ್ ಸ್ಕೂಲಿನಿಂದ ಡಾ| ರಂಜನ್ ಆರ್. ಪೈ ಶೋಭಾಯಾತ್ರೆಗೆ ಚಾಲನೆ ನೀಡಲಿದ್ದಾರೆ. ಕಾಲೇಜಿನ ವರೆಗೆ ಶೋಭಾಯಾತ್ರೆ ನಡೆಯಲಿದೆ. ಬೆಳಗ್ಗೆ 11.30ಕ್ಕೆ “ಎಂಜಿಎಂ ನೆನಪು’ ಕಾರ್ಯಕ್ರಮ ನಡೆಯಲಿದೆ. ಮಧ್ಯಾಹ್ನ 12.30ರಿಂದ ಎಂಜಿಎಂ ಕಾಲೇಜು ನಡೆದು ಬಂದ ದಾರಿಯ ಕುರಿತು ಸಾಕ್ಷ್ಯಚಿತ್ರ ಪ್ರದರ್ಶನ ನಡೆಯಲಿದೆ ಎಂದರು.
ಡಿ.1ರಂದು ಬೆಳಗ್ಗೆ 9.30ರಿಂದ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯ ಕ್ರಮ, 11ಕ್ಕೆ ಹಳೆ ವಿದ್ಯಾರ್ಥಿಗಳ ಕಾರ್ಯಕ್ರಮ ನಡೆಯಲಿದ್ದು, ನೀತಿ ಆಯೋಗದ ಸದಸ್ಯ ಹಾಗೂ ಹೈದರಾಬಾದ್ ಪವರ್ ಫೈನಾನ್ಸ್ ಕಾರ್ಪೊರೇಷನ್‌ನ ಸಹ ಪ್ರಾಧ್ಯಾಪಕ ಪ್ರೊ| ಪ್ರಸನ್ನ ತಂತ್ರಿ ಮುಖ್ಯ ಅತಿಥಿ ಯಾಗಿರಲಿದ್ದಾರೆ. 3.30ರಿಂದ ಸಮಾ ರೋಪ ನಡೆಯಲಿದೆ. ಪೇಜಾವರ ಶ್ರೀಗಳು ಭಾಗವಹಿಸಲಿದ್ದು, ಎಂಜಿಎಂ ಕಾಲೇಜು ಟ್ರಸ್ಟ್ ಅಧ್ಯಕ್ಷ ಟಿ. ಸತೀಶ್ ಯು. ಪೈ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಟಾಳ್ಕರ್, ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಯಶ್‌ಪಾಲ್ ಸುವರ್ಣ, ಮಂಗಳೂರು ವಿ.ವಿ. ಕುಲಪತಿ ಪ್ರೊ| ಪಿ.ಎಲ್.ಧರ್ಮ, ಪ್ರಾದೇಶಿಕ ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕ ಪ್ರೊ| ರಾಮೇಗೌಡ, ಡಿಡಿಪಿಯು ಮಾರುತಿ ಮುಖ್ಯ ಅತಿಥಿ ಗಳಾಗಿರುವರು. ಸಂಜೆ 5.30ರಿಂದ ಶ್ರೀ ವಿದ್ಯಾಭೂಷಣ ಮತ್ತು ಮೇಧಾ ಹಿರಣ್ಯಯಿ ಬೆಂಗಳೂರು ಇವರಿಂದ ಸಂಗೀತ ನಡೆಯಲಿದೆ ಎಂದರು.
ಪ.ಪೂ. ವಿಭಾಗದ ಪ್ರಾಂಶುಪಾಲೆ ಮಾಲತಿ ದೇವಿ ಎ., ಸಂಧ್ಯಾ ಕಾಲೇಜಿನ ಪ್ರಾಂಶುಪಾಲ ಡಾ| ದೇವಿದಾಸ ಎಸ್. ನಾಯ್ಕ, ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಅರುಣ್ ಕುಮಾರ್, ಕಂಪ್ಯೂ ಟರ್ ಸಯನ್ಸ್ ವಿಭಾಗದ ಮುಖ್ಯಸ್ಥ ಡಾ| ವಿಶ್ವನಾಥ ಪೈ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರೊ| ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ, ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಸುಚಿತ್ ಕೋಟ್ಯಾನ್, ಸಂಸ್ಕೃತ ಉಪನ್ಯಾಸಕ ಮುರಳೀಧರ್, ಉಪನ್ಯಾಸಕ ಮನೋಷ್ ಕುಮಾರ್ ಎನ್. ಉಪಸ್ಥಿತರಿದ್ದರು.
75 ವರ್ಷ ಪೂರ್ಣ
1949ರಲ್ಲಿ ಡಾ| ಟಿ.ಎಂ.ಎ.ಪೈಗಳ ಕನಸಾಗಿ ಆರಂಭವಾದ ಉಡುಪಿಯ ಮೊತ್ತ ಮೊದಲ ಕಾಲೇಜು ಎಂಜಿಎಂ 75 ವರ್ಷಗಳನ್ನು ಪೂರ್ತಿಗೊಳಿಸಿದೆ. ಉಡುಪಿಯ ಗಾಂಧಿ ಮೈನ್ ಶಾಲೆಯಲ್ಲಿ ಆರಂಭವಾದ ಈ ಕಾಲೇಜು ಮರುವರ್ಷವೇ ಈಗಿನ ಸುಂದರ ಕ್ಯಾಂಪಸ್‌ಗೆ ಸ್ಥಳಾಂತರಗೊಂಡು ತನ್ನ ಗುಣಮಟ್ಟದ ಶಿಕ್ಷಣ ಹಾಗೂ ಸಾಂಸ್ಕೃತಿಕ ಪರಂಪರೆಯಿಂದ ಜನಮನ ಗೆದ್ದಿದೆ ಎಂದು ಬಿ.ಪಿ. ವರದರಾಯ ಪೈ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಗೀತೆಯ ಸಂದೇಶ ಪ್ರತೀ ಮನೆಯನ್ನೂ ಪ್ರವೇಶಿಸಲಿ: ಕಾಂಚಿ ಶ್ರೀ
Udupi: ಗೀತಾರ್ಥ ಚಿಂತನೆ-100: ಸತ್ತಾಗ ದುಃಖ, ಸಾಯುತ್ತಿರುವಾಗಲ್ಲ!
Udupi: ಕಾಂಚೀ ಶ್ರೀಗಳಿಂದ ಶ್ರೀಕೃಷ್ಣ ಮುಖ್ಯಪ್ರಾಣ, ಅನಂತೇಶ್ವರ, ಚಂದ್ರೇಶ್ವರ ದರ್ಶನ
Karkala: ರಸ್ತೆ ಬದಿ ತೋಡಿಗೆ ಜಾರಿದ ವಿಕ್ರಂ ಗೌಡ ಮೃತದೇಹ ಸಾಗಿಸುತ್ತಿದ್ದ ಆ್ಯಂಬ್ಯುಲೆನ್ಸ್
Udupi: ನಮ್ಮ ಶೌಚಾಲಯ ನಮ್ಮ ಗೌರವ ತಿಂಗಳ ಆಂದೋಲನಕ್ಕೆ ಚಾಲನೆ
MUST WATCH
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಉಚ್ಚಿಲದ ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು
ಹೊಸ ಸೇರ್ಪಡೆ
BPL Card: ಪಡಿತರ ಚೀಟಿ ರದ್ದು ಮತ್ತು ಡಿಜಿಟಲೀಕರಣ “ಅಳಿಯ ಅಲ್ಲ ಮಗಳ ಗಂಡ..!
ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು
BPL: ತೆರಿಗೆದಾರರು, ಸರ್ಕಾರಿ ನೌಕರರ ಕಾರ್ಡ್ ಮಾತ್ರ ರದ್ದು: ಗೊಂದಲಕ್ಕೆ ಸಚಿವರ ಸ್ಪಷ್ಟನೆ
Drone Prathap: ಸಿನಿಮಾರಂಗಕ್ಕೆ ಡ್ರೋನ್ ಪ್ರತಾಪ್ ಎಂಟ್ರಿ; ಮೊದಲ ಚಿತ್ರದಲ್ಲೇ ಹೀರೋ
Baba Budan Dargah: ಗೋರಿಗಳ ಮೇಲೆ ಕುಂಕುಮ ಹಚ್ಚಿರುವ ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.