Bengaluru: ನಗರದಲ್ಲಿ ನಿಷೇಧಿತ ಕಲರ್ ಕಾಟನ್ ಕ್ಯಾಂಡಿ ತಯಾರಿಕಾ ಘಟಕ ಬಂದ್
Team Udayavani, Nov 21, 2024, 11:29 AM IST
ಬೆಂಗಳೂರು: ನಗರದಲ್ಲಿ ನಿಷೇಧಿತ ಕಲರ್ ಕಾಟನ್ ಕ್ಯಾಂಡಿ ಮಾರಾಟ ಮಾಡುತ್ತಿದ್ದವರನ್ನು ಸೋಮ ವಾರ ಆಹಾರ ಸುರಕ್ಷತಾ ಹಾಗೂ ಗುಣಮಟ್ಟದ ಇಲಾಖೆಯ ಅಧಿಕಾರಿಗಳು ವಶಕ್ಕೆ ಪಡೆದುಕೊಂಡು, ಅವರಿಂದ ನಿಷೇಧಿತ ಕಲರ್ ಕ್ಯಾಂಡಿ ತಯಾರಿಕ ಘಟಕದ ವಿವರ ಪಡೆದು ಬಂದ್ ಮಾಡಿಸಲಾಗಿದೆ.
ರಾಜ್ಯದಲ್ಲಿ ಕೃತಕ ಬಣ್ಣ ಬಳಸಿ ತಯಾರಿಸಲಾಗುವ ಕಲರ್ ಕಾಟನ್ ಕ್ಯಾಂಡಿ ಮಾರಾಟ ನಿಷೇಧವಾದ 8 ತಿಂಗಳ ಬಳಿಕ ಬೆಂಗಳೂರು ಸೇರಿದಂತೆ ವಿವಿಧೆಡೆಯಲ್ಲಿ ಕಲರ್ ಕಾಟನ್ ಮಾರಾಟ ಮತ್ತೆ ಗರಿಗೆದರಿತ್ತು. ಈ ಬಗ್ಗೆ ತಪಾಸಣೆ ನಡೆಸಿದ ಇಲಾಖೆಯು ಕಲರ್ ಕಾಟನ್ ಕ್ಯಾಂಡಿ ಮಾರಾಟ ಮಾಡುತ್ತಿದ್ದವರನ್ನು ಬುಧವಾರ ವಶಕ್ಕೆ ತೆಗೆದುಕೊಳ್ಳಲಾಗಿದೆ. ಅವರಿಂದ ಕಲರ್ ಕಾಟನ್ ಕ್ಯಾಂಡಿ ಯಾವ ಪ್ರದೇಶದಿಂದ ನಗರದ ವಿವಿಧ ಭಾಗಕ್ಕೆ ಬರುತ್ತಿದೆ ಎನ್ನುವು ಮಾಹಿತಿ ಪಡೆದು, ಯಲ ಹಂಕ ದ ಕಲರ್ ಕಾಟನ್ ಕ್ಯಾಂಡಿ ತಯಾರಕ ಘಟಕಕ್ಕೆ ತೆರಳಿ, ಮಾಲಿಕರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಇಲಾಖೆ ಅಧಿಕಾರಿಗಳು ಉದಯವಾಣಿಗೆ ಮಾಹಿತಿ ನೀಡಿದ್ದಾರೆ.
ಉದಯವಾಣಿ ಪತ್ರಿಕೆಯು ನ.19ರಂದು “ಗೋಬಿ, ಕಾಟನ್ ಕ್ಯಾಂಡಿಯಲ್ಲಿ ಮತ್ತೆ ಕೃತಕ ಬಣ್ಣ!’ ಶೀರ್ಷಿಕೆಯಡಿ ರಾಜ್ಯದಲ್ಲಿ ಮತ್ತೆ ನಿಷೇಧಿತ ಕಲರ್ ಕಾಟನ್ ಕ್ಯಾಂಡಿ ಗರಿಗೆದರಿರುವ ಕುರಿತು ವರದಿಯನ್ನು ಪ್ರಕಟಿಸಲಾಗಿತ್ತು. ವರದಿಯಲ್ಲಿ ನಿಷೇಧಿತ ಕಲರ್ ಕಾಟನ್ ಕ್ಯಾಂಡಿ ಮಾರಾಟ ಮಾಡುತ್ತಿರುವ ಪ್ರದೇಶ ಹಾಗೂ ವ್ಯಕ್ತಿಯ ಫೋಟೋವನ್ನು ಪ್ರಕಟಿಸಿತ್ತು. ವರದಿಯಿಂದ ಎಚ್ಚೆತ್ತುಕೊಂಡ ಇಲಾಖೆಯು ಕಾಟನ್ ಕ್ಯಾಂಡಿ ಮಾರಾಟ ಮಾಡುತ್ತಿದ್ದ ಸ್ಥಳಕ್ಕೆ ತೆರಳಿ, ವ್ಯಾಪಾರಿಯನ್ನು ವಶಪಡಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್ ಬಸ್ ನಿಲ್ದಾಣ!
Bengaluru: ಇವಿ ಬೈಕ್ ಶೋರೂಮ್‌ನಲ್ಲಿ ಬೆಂಕಿ ಅವಘಡ; ಮಾಲೀಕ, ಮ್ಯಾನೇಜರ್ ಬಂಧನ, ಬಿಡುಗಡೆ
Shobha Karandlaje: ಶೋಭಾ ಲೋಕಸಭಾ ಸದಸ್ಯತ್ವ ರದ್ದು ಕೋರಿ ಅರ್ಜಿ: ಡಿ.6ಕ್ಕೆ ವಿಚಾರಣೆ
Arrested: ನಕಲಿ ದಾಖಲೆ ನೀಡಿ ಟಿಡಿಎಸ್ ಪಡೆಯುತ್ತಿದ್ದ ಆರೋಪಿಯ ಬಂಧಿಸಿದ ಜಾರಿ ನಿರ್ದೇಶನಾಲಯ
Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್‌ಗೆ ಮೆಸೇಜ್!
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.