Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ
Team Udayavani, Nov 21, 2024, 11:14 PM IST
ಬೆಳ್ತಂಗಡಿ:ಸ್ವಚ್ಛತೆಯ ಕೆಲಸ ನಿರ್ವಹಿಸುತ್ತಿದ್ದ ಕ್ಷೇತ್ರದ ಸಿಬಂದಿಗೆ ಯಾತ್ರಾರ್ಥಿ ಹಲ್ಲೆ ಮಾಡಿದ ಘಟನೆ ಕೊಕ್ಕಡ ಗ್ರಾಮದ ಶ್ರೀ ಕ್ಷೇತ್ರ ಸೌತಡ್ಕದಲ್ಲಿ ನ. 20ರಂದು ನಡೆದಿದೆ.
ಮಹೇಂದ್ರ ಕೊಲ್ಲಾಜೆಪಳಿಕೆ ಹಲ್ಲೆಗೊಳಗಾದ ಸಿಬಂದಿ. ಮಹೇಂದ್ರ ತಲೆಗೆ ಗಂಭೀರ ಏಟು ತಗಲಿದ ಪರಿಣಾಮ ಅವರು ಪ್ರಜ್ಞೆ ಕಳೆದುಕೊಂಡು ಸ್ಥಳದಲ್ಲೇ ಕುಸಿದು ಬಿದ್ದಿದ್ದು, ಕೂಡಲೇ ಅವರನ್ನು ಕೊಕ್ಕಡ ಸಮುದಾಯ ಆಸ್ಪತ್ರೆಗೆ ದಾಖಲಿಸಲಾಯಿತು. ಅನಂತರ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಮಹೇಂದ್ರ ಅವರು ಮೊಬೈಲ್ ಲೈಟ್ ಬಳಸಿ ಶೌಚಾಲಯವನ್ನು ಶುಚಿಗೊಳಿಸುತ್ತಿದ್ದರು. ಈ ಸಮಯ ಬೆಂಗಳೂರಿನಿಂದ ಬಂದ ಯಾತ್ರಾರ್ಥಿಗಳು ಶೌಚಾಲಯವನ್ನು ಬಳಸುತ್ತಿದ್ದರು. ಮಹೇಂದ್ರ ಅವರ ಮೊಬೈಲ್ ಲೈಟ್ ಉರಿಯುತ್ತಿದ್ದದ್ದನ್ನು ನೋಡಿ ಆತ ತಮ್ಮ ವೀಡಿಯೋ ಮಾಡುತ್ತಿದ್ದಾನೆ ಎಂದು ಅನುಮಾನಿಸಿ ಏಕಾಏಕಿ 20ಕ್ಕಿಂತಲೂ ಹೆಚ್ಚು ಯಾತ್ರಾರ್ಥಿಗಳು ಮಹೇಂದ್ರ ಅವರಿಗೆ ಹಲ್ಲೆ ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಸೌತಡ್ಕ ಕ್ಷೇತ್ರದ ಕಾರ್ಯನಿರ್ವಹಣಾಧಿಕಾರಿ ಕೆ.ವಿ. ಶ್ರೀನಿವಾಸ್ ಅವರು ನೀಡಿದ ದೂರಿನಂತೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.