Karnataka: ಅರ್ಹರಿಗಷ್ಟೇ ಬಿಪಿಎಲ್ ಕಾರ್ಡ್: ಸಿಎಂ ಸಿದ್ದರಾಮಯ್ಯ
Team Udayavani, Nov 21, 2024, 11:37 PM IST
ಬೆಂಗಳೂರು: ಸರಕಾರಿ ನೌಕರರು ಹಾಗೂ ಆದಾಯ ತೆರಿಗೆ ಪಾವತಿದಾರರಿಗೆ ಬಿಪಿಎಲ್ ಕಾರ್ಡ್ ಕೊಡಬೇಡಿ; ಅರ್ಹರಿಗೆ ಮಾತ್ರ ಕೊಡಿ ಎಂದಿದ್ದೇನೆ. ಬಿಜೆಪಿಯವರು ರಾಜಕೀಯಕ್ಕಾಗಿ ಈ ವಿಚಾರ ಪ್ರಸ್ತಾವಿಸು ತ್ತಿದ್ದಾರೆ. ಅವರಿಗೆ ಯಾವ ನೈತಿಕತೆಯೂ ಇಲ್ಲ, ಬಡವರ ಬಗ್ಗೆ ಕಾಳಜಿಯೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.
ಗುರುವಾರ ದಿಲ್ಲಿಯಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಆಹಾರ ಭದ್ರತಾ ಕಾಯ್ದೆ ತಂದಿದ್ದು ಮನಮೋಹನ್ ಸಿಂಗ್ ಸರಕಾರವೇ ಹೊರತು ಬಿಜೆಪಿಯವರಲ್ಲ. ಬಿಜೆಪಿ ಮುಖಂಡ ಮುರಳಿ ಮನೋಹರ ಜೋಶಿ ಅವರು ಮತ ಭದ್ರತಾ ಕಾಯ್ದೆ ಎಂದು ಟೀಕಿಸಿದ್ದರು. ರಾಜ್ಯದಲ್ಲಿ ನಮ್ಮ ಸರಕಾರ ಅಧಿಕಾರಕ್ಕೆ ಬಂದಾಗ 7 ಕೆ.ಜಿ. ಕೊಡುತ್ತಿದ್ದ ಅಕ್ಕಿಯ ಪ್ರಮಾಣವನ್ನು 5 ಕೆ.ಜಿ.ಗೆ ಇಳಿಸಿದ್ದು ಬಿಜೆಪಿ ಸರಕಾರ ಎಂದರು.
ಬಿಜೆಪಿ ಬಳಿ ಸಾಲ ಕೇಳಿದ್ದೇವಾ?: ಆಹಾರ ಭದ್ರತಾ ಕಾಯ್ದೆ ತಂದಿರುವುದೇ ಬಡವರಿಗಾಗಿ. ನಾವು 5 ಗ್ಯಾರಂಟಿ ಯೋಜನೆ ಜಾರಿಗೊಳಿಸಿ ದ್ದೇವೆ. ಬಿಜೆಪಿ ಅಧಿಕಾರದಲ್ಲಿ ಇರುವ ಯಾವ ರಾಜ್ಯ ದಲ್ಲಿ ಜಾರಿ ಮಾಡಿತ್ತಾ? ಗ್ಯಾರಂಟಿ ಯೋಜನೆಗಳಿಗೆ ದುಡ್ಡಿಲ್ಲ ಎಂದವರು ಯಾರು? ನಾವೇನಾದರೂ ಬಿಜೆಪಿಯವರ ಬಳಿ ಸಾಲ ಕೇಳಿದ್ದೇವಾ? ಎಂದು ಪ್ರಶ್ನೆ ಹಾಕಿದರು.
ಡಿಕೆಶಿ ಹೇಳಿದ್ದನ್ನು ಬಿಡಿ
ಶಕ್ತಿ ಯೋಜನೆ ಪರಿಷ್ಕರಣೆ ವಿಚಾರದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದನ್ನು ಬಿಡಿ. ನಾನೀಗ ಹೇಳುತ್ತಿದ್ದೇನಲ್ಲವೇ? ಅವರೂ ಈ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದಾರೆ. ಯಾವ ಪರಿಷ್ಕರಣೆಯೂ ಇಲ್ಲ. ನಾವು ಕೊಟ್ಟ ಎಲ್ಲ ಭರವಸೆಗಳನ್ನೂ ಈಡೇರಿಸಿದ್ದೇವೆ. ಬಿಜೆಪಿಯವರು ಶೇ. 10ರಷ್ಟು ಭರವಸೆಗಳನ್ನೂ ಈಡೇರಿಸಿರಲಿಲ್ಲ. ಮೊದಲ ಸಂಪುಟ ಸಭೆಯಲ್ಲೇ 1 ಲಕ್ಷ ರೂ. ವರೆಗೆ ಸಾಲ ಮನ್ನಾ ಮಾಡುತ್ತೇವೆ ಎಂದಿದ್ದರು. ಕೊನೆಗೂ ಸಾಲ ಮನ್ನಾ ಮಾಡಲಿಲ್ಲ. ನಾವು ಯಾವ ಅನುದಾನ ಕಡಿಮೆ ಮಾಡಿದ್ದೇವೆ ಹೇಳಿ? ಬಜೆಟ್ನಲ್ಲಿ 1.20 ಲಕ್ಷ ಕೋಟಿ ರೂ.ಗಳನ್ನು ಅಭಿವೃದ್ಧಿ ಕಾಮಗಾರಿಗಳಿಗೆ ಮೀಸಲಿಟ್ಟಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
IPL 2025-27: ಮುಂದಿನ ಮೂರು ಐಪಿಎಲ್ ಸೀಸನ್ ನ ದಿನಾಂಕ ಪ್ರಕಟಿಸಿದ ಬಿಸಿಸಿಐ
AI world: ಕ್ರಿಮಿನಲ್ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.