PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್
ಕೇಂದ್ರದಿಂದ 5.80 ಕೋಟಿ ಪಡಿತರ ಕಾರ್ಡ್ ರದ್ದು: ಎಂ.ಬಿ. ಪಾಟೀಲ್
Team Udayavani, Nov 21, 2024, 11:50 PM IST
ಬೆಂಗಳೂರು: ರಾಜ್ಯದಲ್ಲಿ ಅನರ್ಹರ ಬಿಪಿಎಲ್ ಪಡಿತರ ಚೀಟಿ ರದ್ದು ಪ್ರಶ್ನಿಸುತ್ತಿರುವ ಬಿಜೆಪಿ ನಾಯಕರು, ಕೇಂದ್ರವು ಡಿಜಿಟಲೀಕರಣದ ಹೆಸರಿನಲ್ಲಿ 5.80 ಕೋಟಿ ಪಡಿತರ ಕಾರ್ಡ್ ರದ್ಧತಿಗೆ ಯಾಕೆ ಮೌನ ಎಂದು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಅವರು ಪ್ರಶ್ನಿಸಿದ್ದಾರೆ.
ಸಾಮಾಜಿಕ ಜಾಲತಾಣ “ಎಕ್ಸ್’ ನಲ್ಲಿ ಪ್ರಶ್ನಿಸಿರುವ ಅವರು, ರಾಜ್ಯ ಬಿಜೆಪಿ ವಿಜಯೇಂದ್ರ, ಅಶೋಕ್, ಬಸನಗೌಡ ಪಾಟೀಲ ಯತ್ನಾಳ್ ಮತ್ತು ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ ಹಾಗೂ ಶೋಭಾ ಕರಂದ್ಲಾಜೆ ಅವರನ್ನು ಟ್ಯಾಗ್ ಮಾಡಿದ್ದಾರೆ. ಅಷ್ಟೇ ಅಲ್ಲ ಈ ಸಂಬಂಧ ಪ್ರಧಾನಿ ಮನೆ ಮುಂದೆ ಧರಣಿ ನಡೆಸುತ್ತೀರಾ ಎಂದು ಸವಾಲು ಹಾಕಿದ್ದಾರೆ.
ಬಿಪಿಎಲ್ ಪಡಿತರ ಚೀಟಿಯು ನಿಜವಾದ ಬಡವರಿಗೆ ಸಿಗಬೇಕು. ಹೀಗಾಗಿಯೇ ರಾಜ್ಯ ಸರಕಾರ ಶ್ರೀಮಂತರು, ತೆರಿಗೆ ಪಾವತಿದಾರರು ಮತ್ತು ಸರ್ಕಾರಿ ಅಧಿಕಾರಿಗಳ ಬಳಿ ಇರುವ ಬಿಪಿಎಲ್ ಕಾರ್ಡುಗಳನ್ನು ರದ್ದುಪಡಿಸುತ್ತಿದೆ. ರಾಜ್ಯ ಬಿಜೆಪಿ ನಾಯಕರು ಇದರ ವಿರುದ್ಧ ಮಾತನಾಡುವುದರಲ್ಲಿ ಯಾವುದೇ ಅರ್ಥವಿಲ್ಲ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. ನಮ್ಮ ವಿರುದ್ಧ ಆರೋಪ ಮಾಡುತ್ತಿರುವವಿಜಯೇಂದ್ರ, ಅಶೋಕ, ಯತ್ನಾಳ ಅವರಿಗೆ ದೆಹಲಿಗೆ ಹೋಗಿ ಪ್ರಧಾನಿ ಮನೆಯ ಎದುರು ಧರಣಿ ಕೂರುವ ಧೈರ್ಯ ಇದೆಯೇ ಎಂದು ಕೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
AI world: ಕ್ರಿಮಿನಲ್ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.