Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ
Team Udayavani, Nov 22, 2024, 1:23 AM IST
ಮುಂಬಯಿ: ಉಕ್ರೇನ್-ರಷ್ಯಾ ಸಂಘರ್ಷ ತೀವ್ರಗೊಂಡಿರುವುದು ಹಾಗೂ ಕಚ್ಚಾ ತೈಲ ಬೆಲೆ ಏರಿಕೆಯಾಗುತ್ತಿರುವುದರ ಪರಿಣಾಮವೆಂಬಂತೆ, ಡಾಲರ್ ಎದುರು ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ ದಾಖಲಿಸಿದೆ. ಗುರುವಾರ ರೂಪಾಯಿ ಮೌಲ್ಯ 8 ಪೈಸೆ ಕುಸಿದು, ದಿನದ ಅಂತ್ಯಕ್ಕೆ 84.50ಕ್ಕೆ ತಲುಪಿದೆ. ಈ ಹಿಂದೆ ನ.14ರಂದು 84.46 ರೂ.ಗೆ ತಲುಪಿದ್ದೇ ದಾಖಲೆ ಆಗಿತ್ತು. ಇದೇ ವೇಳೆ, ಅದಾನಿ ಗ್ರೂಪ್ ವಿರುದ್ಧ ಲಂಚ ಮತ್ತು ಷೇರು ವಂಚನೆ ಆರೋಪ ಕೇಳಿಬರುತ್ತಿದ್ದಂತೆಯೇ, ಷೇರುಪೇಟೆಯಲ್ಲಿ ಸಂಚಲನ ಮೂಡಿದೆ. ಹೂಡಿಕೆದಾರರು ಏಕಾಏಕಿ ಷೇರುಗಳ ಮಾರಾಟದಲ್ಲಿ ತೊಡಗಿದ ಪರಿಣಾಮ ಗುರುವಾರ ಸೆನ್ಸೆಕ್ಸ್ 422 ಅಂಕ ಕುಸಿತ ದಾಖಲಿಸಿ, ದಿನಾಂತ್ಯಕ್ಕೆ 77,155ನ್ನು ತಲುಪಿದೆ. ನಿಫ್ಟಿ ಕೂಡ 168 ಅಂಕ ಕುಸಿದು, 23,349ರಲ್ಲಿ ವಹಿವಾಟು ಅಂತ್ಯಗೊಳಿಸಿದೆ. ಅದಾನಿ ಗ್ರೂಪ್ನ 10 ಕಂಪೆನಿಯ ಷೇರುಗಳು ಕೂಡ ಪತನಗೊಂಡಿದ್ದರ ಪರಿಣಾಮ, ಹೂಡಿಕೆ ದಾರರು ಭಾರೀ ನಷ್ಟ ಅನುಭವಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ
Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು
Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ
Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್’ ಹೊಸ ವೆಬ್ಸೈಟ್ ಪ್ರತ್ಯಕ್ಷ!
Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್ ವ್ಯಾಲ್ಯು ಫಂಡ್
MUST WATCH
ಹೊಸ ಸೇರ್ಪಡೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.