Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ
Team Udayavani, Nov 23, 2024, 12:14 AM IST
ನವದೆಹಲಿ: ದೇಶದಲ್ಲಿ ತುರ್ತು ಪರಿಸ್ಥಿತಿ ಸಮಯದಲ್ಲಿ ಸಂಸತ್ತು ತೆಗೆದುಕೊಂಡ ಎಲ್ಲಾ ನಿರ್ಧಾರಗಳು ಕಾನೂನುಬಾಹಿರ ಎಂದು ಹೇಳಲಾಗದು ಎಂದು ಸುಪ್ರೀಂಕೋರ್ಟ್ ಶುಕ್ರವಾರ ಅಭಿಪ್ರಾಯ ವ್ಯಕ್ತಪಡಿಸಿದೆ.
ಸಂವಿಧಾನದ ಪ್ರಸ್ತಾವನೆಗೆ ಸಮಾಜವಾದ, ಜಾತ್ಯತೀತ ಪದ ಸೇರಿಸಿದ್ದನ್ನು ಪ್ರಶ್ನಿಸಿದ ಅರ್ಜಿಯ ವಿಚಾರಣೆ ನಡೆಸುತ್ತಿರುವ ಸಿಜೆಐ ಅವರನ್ನೊಳಗೊಂಡ ಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿದ್ದು, ತೀರ್ಪು ಕಾಯ್ದಿರಿಸಿದೆ.
“42ನೇ ತಿದ್ದುಪಡಿಗೆ ಸಂಬಂಧಿಸಿ ಸುಪ್ರೀಂಕೋರ್ಟ್ ಹಲವು ಬಾರಿ ನ್ಯಾಯಿಕ ವಿಮರ್ಶೆ ನಡೆಸಿದೆ. ಇದರಲ್ಲಿ ಸಂಸತ್ತು ಮಧ್ಯಪ್ರವೇಶ ಮಾಡಿದೆ. ಹಾಗೆಂದ ಮಾತ್ರಕ್ಕೆ ತುರ್ತು ಪರಿಸ್ಥಿತಿ ಸಮಯದಲ್ಲಿ ಸಂಸತ್ತು ಮಾಡಿದ್ದೆಲ್ಲವನ್ನು ತಪ್ಪು ಎಂದು ಹೇಳಲಾಗುವುದಿಲ್ಲ’ ಎಂದು ಸಿಜೆಐ ಸಂಜೀವ್ ಖನ್ನಾ ಹೇಳಿದ್ದಾರೆ.
1976ರಲ್ಲಿ ಸಂವಿಧಾನಕ್ಕೆ 42ನೇ ತಿದ್ದುಪಡಿ ತರುವ ಮೂಲಕ ಪ್ರಸ್ತಾವನೆಗೆ ಸಮಾಜವಾದಿ ಮತ್ತು ಜಾತ್ಯತೀತ ಎಂಬ ಪದ ಸೇರ್ಪಡೆ ಮಾಡಲಾಗಿತ್ತು. ಇದರ ಮಾನ್ಯತೆ ಪ್ರಶ್ನಿಸಿ ಸುಬ್ರಮಣಿಯನ್ ಸ್ವಾಮಿ, ವಿಷ್ಣು ಶಂಕರ್ ಜೈನ್ ಮುಂತಾದವರು ಸುಪ್ರೀಂ ಮೆಟ್ಟಿಲೇರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Results: ಮಹಾರಾಷ್ಟ್ರ, ಝಾರ್ಖಂಡ್ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ
Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!
Winter Session: ಸಂಸತ್ ಅಧಿವೇಶನ ನಾಡಿದ್ದಿಂದ:”ವಕ್ಫ್’ ವಿಧೇಯಕ ಮಂಡನೆ?
Election Results: ಝಾರ್ಖಂಡ್, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?
Adani ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್?
MUST WATCH
ಹೊಸ ಸೇರ್ಪಡೆ
Election Results: ಮಹಾರಾಷ್ಟ್ರ, ಝಾರ್ಖಂಡ್ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.