Election Results: ಝಾರ್ಖಂಡ್‌, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?

ಇಂದು ಬೆಳಗ್ಗೆ 8ಕ್ಕೆ ಎಣಿಕೆ ಶುರು;  ಮಹಾದಲ್ಲಿ ಅಧಿಕಾರ ಮಹಾಯುತಿಗೋ, ಅಘಾಡಿಗೋ: ಕುತೂಹಲ

Team Udayavani, Nov 23, 2024, 7:05 AM IST

el

ಮುಂಬಯಿ/ರಾಯ್ಪುರ: ತೀವ್ರ ಕುತೂಹಲ ಮೂಡಿಸಿರುವ ಮಹಾರಾಷ್ಟ್ರ, ಝಾರ್ಖಂಡ್‌ ವಿಧಾನಸಭೆ ಚುನಾವಣೆಯ ಫ‌ಲಿತಾಂಶ ಶನಿವಾರ ಪ್ರಕಟವಾಗಲಿದೆ. ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಶುರುವಾಗಲಿದ್ದು, ಮಧ್ಯಾಹ್ನ 12 ಗಂಟೆ ವೇಳೆಗೆ ಸ್ಪಷ್ಟ ಚಿತ್ರಣ ಹೊರಬೀಳಲಿದೆ.

ಚುನಾವಣೋತ್ತರ ಸಮೀಕ್ಷೆಗಳು ಎರಡೂ ರಾಜ್ಯಗಳಲ್ಲಿ ಎನ್‌ಡಿಎ ಮೈತ್ರಿಕೂಟವೇ ಅಧಿಕಾರಕ್ಕೇರಲಿವೆ ಎಂದು ಭವಿಷ್ಯ ನುಡಿದಿವೆ. ಮಹಾರಾಷ್ಟ್ರದಲ್ಲಿ ನ.20ರಂದು ನಡೆದಿದ್ದ ಒಂದೇ ಹಂತದ ಮತದಾನದಲ್ಲಿ ಶೇ.66.05 ರಷ್ಟು ಮತದಾನವಾಗಿತ್ತು.

ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ- ಏಕನಾಥ ಶಿಂಧೆ ನೇತೃತ್ವದ ಶಿವಸೇನೆ ಬಣ- ಅಜಿತ್‌ ಪವಾರ್‌ ನೇತೃ ತ್ವದ ಎನ್‌ಸಿಪಿ ಬಣವನ್ನು ಒಳಗೊಂಡ ಮಹಾಯುತಿ, ಕಾಂಗ್ರೆಸ್‌- ಉದ್ಧವ್‌ ಠಾಕ್ರೆ ಬಣದ ಶಿವಸೇನೆ- ಶರದ್‌ ಪವಾರ್‌ ಬಣ ಎನ್‌ಸಿಪಿಯನ್ನೊಳಗೊಂಡ ಮಹಾ ವಿಕಾಸ ಅಘಾಡಿ ನಡುವೆ ನೇರ ಹೋರಾಟ ಇದೆ. 150 ಕ್ಷೇತ್ರಗಳಲ್ಲಿ ಎಂವಿಎ, ಮಹಾಯುತಿಗೆ ಬಂಡಾಯ ಅಭ್ಯರ್ಥಿಗಳ ತಲೆನೋವು ಇದೆ.

ಸೊರೇನ್‌ ಕೆಳಕ್ಕಿಳಿಸಲು ಪಣ: 81 ಸದಸ್ಯ ಬಲದ ಝಾರ್ಖಂಡ್‌ ವಿಧಾನಸಭೆಗೆ ನ.13 ಮತ್ತು 20ರಂದು 2 ಹಂತದಲ್ಲಿ ಮತದಾನ ನಡೆದಿತ್ತು. ಮೊದಲ ಹಂತದಲ್ಲಿ ಶೇ.66.65, 2ನೇ ಹಂತದಲ್ಲಿ ಶೇ.68ರಷ್ಟು ಹಕ್ಕು ಚಲಾವಣೆಯಾಗಿತ್ತು. ಬುಡಕಟ್ಟು  ಸಮುದಾಯ  ಹೆಚ್ಚಿ ರುವ ಝಾರ್ಖಂಡಲ್ಲಿ ರಾಜಕೀಯ ಮಹತ್ವ ಪಡೆದಿದೆ.

ಮಹಾ ಕಾಂಗ್ರೆಸ್‌ ಶಾಸಕರು ಬೆಳಗಾವಿಗೆ ಸ್ಥಳಾಂತರ?
ಫ‌ಲಿತಾಂಶಕ್ಕೂ ಮುನ್ನವೇ  ಮಹಾರಾಷ್ಟ್ರದಲ್ಲಿ ತಮ್ಮ ಶಾಸಕರನ್ನು ಬಿಜೆಪಿ ಖರೀದಿಸದಂತೆ ತಡೆಯಲು ರೆಸಾರ್ಟ್‌, ಚಾರ್ಟರ್ಡ್‌ ವಿಮಾನಗಳನ್ನು ಅಘಾಡಿ ಸನ್ನದ್ಧ ಸ್ಥಿತಿಯಲ್ಲಿ ಇರಿಸಿದೆೆ. ಅಘಾಡಿಯು ಶಾಸಕರನ್ನು ಕರ್ನಾಟಕದ ಬೆಳಗಾವಿಯ ರೆಸಾರ್ಟ್‌ಗೆ ಕಳುಹಿಸಿಕೊಡಲು ಸಿದ್ಧತೆ ನಡೆಸಿದೆ ಎನ್ನಲಾಗಿದೆ. ಇದೇ ವೇಳೆ, ಸಿಎಂ ಚರ್ಚೆಯೂ ಶುರುವಾಗಿದ್ದು, ಮಹಾಯುತಿ ಮೈತ್ರಿ ಗೆದ್ದರೆ ಫ‌ಡ್ನವೀಸ್‌ ಅವರೇ ಸಿಎಂ ಆಗಬೇಕು ಎಂದು ಬಿಜೆಪಿ ಅಧ್ಯಕ್ಷ ಭಾವನ್‌ಕುಲೆ ಪ್ರತಿಪಾದಿಸಿದ್ದಾರೆ. ಆದರೆ ಶಿಂಧೆ ಮುಂದುವರಿಯಲಿ ಎಂದು ಅವರ ಬೆಂಬಲಿ ಗರು ಹೇಳಿದ್ದಾರೆ. ಮತ್ತೂಂದೆಡೆ ಕಾಂಗ್ರೆಸ್‌ನವರೇ ಸಿಎಂ ಆಗಲಿ ಎಂದು  ರಾಜ್ಯಾಧ್ಯಕ್ಷ  ಪಟೋಲೆ  ಹೇಳಿದ್ದಾರೆ.

ವಯನಾಡ್‌ ಸಂಸದರಾಗುವರೇ ಪ್ರಿಯಾಂಕಾ?
ಬಹು ನಿರೀಕ್ಷಿತ ವಯನಾಡ್‌ ಲೋಕಸಭಾ ಕ್ಷೇತ್ರದ ಫ‌ಲಿತಾಂಶ ಶನಿವಾರವೇ ಪ್ರಕಟವಾಗಲಿದೆ. ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಪ್ರಿಯಾಂಕಾ ವಾದ್ರಾ ಸಂಸದರಾಗಲಿದ್ದಾರೆಯೇ ಎಂಬ ಪ್ರಶ್ನೆಗೆ ಮಧ್ಯಾಹ್ನದ ಒಳಗಾಗಿ ಉತ್ತರ ಸಿಗಲಿದೆ. ಮೊದಲ ಬಾರಿಗೆ ಪ್ರಿಯಾಂಕಾ ಸ್ಪರ್ಧಿಸಿರುವುದರಿಂದ ದೇಶಾದ್ಯಂತ ಫ‌ಲಿತಾಂಶದ ಬಗ್ಗೆ ಕುತೂಹಲ ಇದೆ. ಲೋಕಸಭೆ ಚುನಾವಣೆಯಲ್ಲಿ ರಾಯ್‌ಬರೇಲಿ ಮತ್ತು ವಯನಾಡ್‌ನಿಂದ ಸ್ಪರ್ಧಿಸಿದ್ದ ರಾಹುಲ್‌ ಗಾಂಧಿ 2 ಕ್ಷೇತ್ರಗಳಲ್ಲಿಯೂ ಗೆದ್ದಿದ್ದರು. ಅಂತಿಮವಾಗಿ ಅವರು ರಾಯ್‌ಬರೇಲಿ ಕ್ಷೇತ್ರ ಉಳಿಸಿಕೊಂಡು ವಯನಾಡ್‌ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರಿಂದ ಉಪಚುನಾವಣೆ ನಡೆದಿದೆ. ಪ್ರಿಯಾಂಕಾ ಗೆದ್ದರೆ ದೇಶಕ್ಕೆ ಸ್ವಾತಂತ್ರ್ಯ ಬಂದ ಬಳಿಕ ಮೊದಲ ಬಾರಿಗೆ ಗಾಂಧಿ ಕುಟುಂಬದ ಮೂವರು ಸದಸ್ಯರು ಸಂಸತ್‌ನಲ್ಲಿ ಪ್ರಾತಿನಿಧ್ಯ ಹೊಂದಿದಂತೆ ಆಗುತ್ತದೆ. ತಾಯಿ ಸೋನಿಯಾ ಗಾಂಧಿ ರಾಜ್ಯಸಭೆ ಸದಸ್ಯೆ, ಸಹೋದರ ರಾಹುಲ್‌ ಗಾಂಧಿ ಲೋಕಸಭೆ ಸದಸ್ಯ.

ಮಹಾಗೆ ಕರ್ನಾಟಕ ಸಚಿವ ಪರಂ ಕಾಂಗ್ರೆಸ್‌ ವೀಕ್ಷಕ
ಮಹಾರಾಷ್ಟ್ರ ಹಾಗೂ ಝಾರ್ಖಂಡ್‌ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಶುಕ್ರವಾರ ಒಟ್ಟು 6 ಹಿರಿಯ ನಾಯಕರನ್ನು ವೀಕ್ಷಕರನ್ನಾಗಿ ನೇಮಿಸಿದೆ. ಆ ಪೈಕಿ ಮಹಾರಾಷ್ಟ್ರಕ್ಕೆ ಕರ್ನಾಟಕದ ಗೃಹ ಸಚಿವ ಡಾ| ಜಿ. ಪರಮೇಶ್ವರ, ಅಶೋಕ್‌ ಗೆಹೊÉàಟ್‌, ಭೂಪೇಶ್‌ ಬಘೇಲ್‌ರನ್ನು ನೇಮಿಸಿದ್ದರೆ, ಝಾರ್ಖಂಡ್‌ಗೆ ತಾರೀಖ್‌ ಅನ್ವರ್‌, ಮಲ್ಲು ಭಟ್ಟಿ ವಿಕ್ರಮಾರ್ಕ, ಕೃಷ್ಣ ಅಲ್ಲಾವುರು ಅವರನ್ನು ನೇಮಿಸಲಾಗಿದೆ.

48 ವಿಧಾನಸಭಾ ಕ್ಷೇತ್ರಗಳ ಉಪಸಮರ ರಿಸಲ್ಟ್ ಇಂದು
ಕರ್ನಾಟಕದ 3 ಸೇರಿ 14 ರಾಜ್ಯಗಳ 48 ಉಪಚು ನಾವಣೆ ಫ‌ಲಿತಾಂಶವೂ ಶನಿವಾರ ಪ್ರಕಟವಾಗ ಲಿದೆ. ಈ ಪೈಕಿ ಉ.ಪ್ರದೇಶದ 9, ರಾಜಸ್ಥಾನದ 7, ಪ.ಬಂಗಾಲದ 6, ಅಸ್ಸಾಂನ 5, ಪಂಜಾಬ್‌, ಬಿಹಾರದ ತಲಾ 4, ಕೇರಳ, ಸಿಕ್ಕಿಂ, ಮಧ್ಯಪ್ರದೇಶದ ತಲಾ 2, ಗುಜರಾತ್‌, ಛತ್ತೀಸ್‌ಗಢ, ಉತ್ತರಾಖಂಡದ ತಲಾ 1 ಕ್ಷೇತ್ರ ಸೇರಿವೆ.

ಟಾಪ್ ನ್ಯೂಸ್

Wayanad Results 2024:ವಯನಾಡ್‌ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!

Wayanad Results 2024:ವಯನಾಡ್‌ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!

Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ

Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ

Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್:‌ ಇಲ್ಲಿದೆ ಮತಎಣಿಕೆಯ ಪೂರ್ಣವಿವರ

Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್:‌ ಇಲ್ಲಿದೆ ಮತಎಣಿಕೆಯ ಪೂರ್ಣವಿವರ

Karnataka By Poll Results: ಜೆಡಿಎಸ್‌ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್‌

Karnataka By Poll Results: ಜೆಡಿಎಸ್‌ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್‌

By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?

By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?

Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ

Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ

ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್‌ ವಶ

ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್‌ ವಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Wayanad Results 2024:ವಯನಾಡ್‌ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!

Wayanad Results 2024:ವಯನಾಡ್‌ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!

Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ

Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ

ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್‌ ವಶ

ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್‌ ವಶ

7-

Panaji: ಮಣಿರತ್ನಂರ ಕ್ಯಾಮೆರಾ ಕಣ್ಣು ಹಂಪಿ ಕಡೆಗೆ ?

Jharkhand Polls: Coalition of INDIA to power in tribal state; A setback for BJP

Jharkhand Polls: ಬುಡಕಟ್ಟು ರಾಜ್ಯದಲ್ಲಿ ಅಧಿಕಾರದತ್ತ ಇಂಡಿಯಾ ಒಕ್ಕೂಟ; ಬಿಜೆಪಿಗೆ ಹಿನ್ನಡೆ

MUST WATCH

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

ಹೊಸ ಸೇರ್ಪಡೆ

Wayanad Results 2024:ವಯನಾಡ್‌ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!

Wayanad Results 2024:ವಯನಾಡ್‌ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!

Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ

Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ

Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್:‌ ಇಲ್ಲಿದೆ ಮತಎಣಿಕೆಯ ಪೂರ್ಣವಿವರ

Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್:‌ ಇಲ್ಲಿದೆ ಮತಎಣಿಕೆಯ ಪೂರ್ಣವಿವರ

10-bng

Bengaluru: ಠಾಣೆಯಲ್ಲಿ ಪೊಲೀಸ್‌ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್‌

Karnataka By Poll Results: ಜೆಡಿಎಸ್‌ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್‌

Karnataka By Poll Results: ಜೆಡಿಎಸ್‌ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.