Mangaluru: ಅಡಿಕೆ ಕ್ಯಾನ್ಸರ್ ಕಾರಕ ಎಂಬ ಡಬ್ಲ್ಯುಎಚ್‌ಒ ವಾದಕ್ಕೆ ಕ್ಯಾಂಪ್ಕೊ ಆಕ್ಷೇಪ
ಔಷಧೀಯ ಗುಣಗಳಿಂದಾಗಿ ಅಡಿಕೆಗೆ ಆಯುರ್ವೇದ ಶಾಸ್ತ್ರದಲ್ಲೂ ವಿಶೇಷ ಸ್ಥಾನಮಾನ: ಅಧ್ಯಕ್ಷ ಎ.ಕಿಶೋರ್ ಕುಮಾರ್ ಕೊಡ್ಗಿ
Team Udayavani, Nov 23, 2024, 7:25 AM IST
ಮಂಗಳೂರು: ಅಡಿಕೆಯು ಆಯುರ್ವೇದೀಯ ಗುಣಗಳನ್ನು ಹೊಂದಿದ್ದರೂ, ಅದು ಕ್ಯಾನ್ಸರ್ ಕಾರಕವೆಂಬ ವಿಶ್ವ ಆರೋಗ್ಯ ಸಂಸ್ಥೆ(ಡಬ್ಲ್ಯುಎಚ್‌ಒ)ಯ ಏಕಪಕ್ಷೀಯ ನಿರ್ಣಯಕ್ಕೆ ಕ್ಯಾಂಪ್ಕೊ ಅಧ್ಯಕ್ಷ ಎ.ಕಿಶೋರ್ ಕುಮಾರ್ ಕೊಡ್ಗಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಪುರಾತನ ಕಾಲದಿಂದಲೂ ಅಡಿಕೆಯು ಭಾರತೀಯ ಸಂಸ್ಕೃತಿಯಲ್ಲಿ ಪವಿತ್ರ ಸ್ಥಾನವನ್ನು ಪಡೆದಿದೆ. ಶುಭ ಸಮಾರಂಭಗಳಲ್ಲಿ ವೀಳ್ಯದೆಲೆಯೊಂದಿಗೆ ಅಡಿಕೆಯನ್ನು ಸೇರಿಸಿ ತಾಂಬೂಲ ನೀಡುವುದು ಭಾರತೀಯ ಸಂಸ್ಕೃತಿಯ ಪ್ರತೀಕ. ಆಯುರ್ವೇದ ಶಾಸ್ತ್ರದಲ್ಲೂ ಅಡಿಕೆಗೆ ಅದರ ಔಷಧೀಯ ಗುಣಗಳಿಂದಾಗಿ ವಿಶೇಷ ಸ್ಥಾನಮಾನವಿದೆ. ಡಬ್ಲ್ಯುಎಚ್‌ಒ ವರದಿಗಳು ಸಂಶೋಧನೆಗಳ ಸಂಪೂರ್ಣ ಮಾಹಿತಿಗಳನ್ನು ಬಹಿರಂಗ ಪಡಿಸಿಲ್ಲ. ಹಾಗಾಗಿ ಸತ್ಯಾಸತ್ಯತೆಗಳನ್ನು ಮುಚ್ಚಿಟ್ಟಿರಬಹುದು ಅಥವಾ ವರದಿಗಳನ್ನು ತಿರುಚಿರಬಹುದೆಂಬ ಸಂಶಯ ಮೂಡುತ್ತಿದೆ ಎಂದು ತಿಳಿಸಿದ್ದಾರೆ.
ಕ್ಯಾಂಪ್ಕೊ ಈಗಾಗಲೇ ಹಲವು ಸಂಶೋಧನೆಗಳನ್ನು ನಡೆಸಿದ್ದು, ಅವುಗಳ ವರದಿಗಳೆಲ್ಲ ಅಡಿಕೆ ಕ್ಯಾನ್ಸರ್ ಕಾರಕವಲ್ಲ. ಅದು ಶಮನಗೊಳಿಸುವ ಔಷಧೀಯ ಗುಣಗಳನ್ನು ಹೊಂದಿರುವ ಬಗ್ಗೆ ದೃಢಪಡಿಸಿದೆ. 1974ರಲ್ಲಿ ಭಾರತೀಯ ವಿಜ್ಞಾನ ಸಂಸ್ಥೆ ನಡೆಸಿದ ಅಧ್ಯಯನವು ತಂಬಾಕು ರಹಿತ ಅಡಿಕೆ ಮತ್ತು ವೀಳ್ಯದೆಲೆಯ ಸೇವನೆಯಿಂದ ಯಾವುದೇ ಟ್ಯೂಮರ್‌ಗಳು ಉಂಟಾಗಿರುವುದನ್ನು ಕಂಡು ಹಿಡಿಯಲು ಸಾಧ್ಯವಾಗಿಲ್ಲ, ಬದಲಾಗಿ ಟ್ಯೂಮರ್‌ಗಳ ಬೆಳವಣಿಗೆ ಯನ್ನು ತಡೆಯುವಲ್ಲಿ ಯಶಸ್ವಿ ಯಾಗಿರುವುದು ಕಂಡುಬಂದಿದೆ.
ಹಾಗಾಗಿ ಡಬ್ಲ್ಯುಎಚ್‌ಒ ತನ್ನ ನಿಲುವನ್ನು ಮರುಪರಿಶೀಲಿಸುವಂತೆ ಮಾಡಲು ಐಸಿಎಂಆರ್, ಐಸಿಎಆರ್, ಎಐಯುಎಂಎಸ್, ಸಿಎಫ್‌ಟಿಆರ್‌ಐ ಮೈಸೂರು ಅಥವಾ ಭಾರತೀಯ ವಿಜ್ಞಾನ ಸಂಸ್ಥೆಯಂತಹ ಸರಕಾರಿ ಮಾನ್ಯತೆ ಪಡೆದ ಹಾಗೂ ನುರಿತ ಸಂಶೋಧನಾ ಸಂಸ್ಥೆಗಳಲ್ಲಿ ಅಧ್ಯಯನ ನಡೆಸಿ ವರದಿ ಮಂಡಿಸಲು ಸಹಕಾರ ನೀಡುವಂತೆ ಕೇಂದ್ರ ಸರಕಾರದಲ್ಲಿ ರೈತರ ಪರವಾಗಿ ಕ್ಯಾಂಪ್ಕೊ ಮನವಿ ಮಾಡುತ್ತಿದೆ ಎಂದು ಕಿಶೋರ್ ಕುಮಾರ್ ಕೊಡ್ಗಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Narendra Modi: ನಾನು ಯಾರದ್ದೇ ಅಧಿಕಾರ ವ್ಯಾಪ್ತಿ ಅತಿಕ್ರಮಿಸಿಕೊಂಡಿಲ್ಲ: ಮೋದಿ
US: ಭಾರತದ ಮೇಲೆ ತೆರಿಗೆ ಇಲ್ಲ, ಕೆನಡಾ, ಚೀನಾಕ್ಕಷ್ಟೇ ತೆರಿಗೆ ವಿಧಿಸಿದ ಟ್ರಂಪ್!
Kumble: ಹೆತ್ತವರನ್ನೇ ಕೊಠಡಿಯಲ್ಲಿ ಕೂಡಿ ಹಾಕಿದ ಪುತ್ರಿ
Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ
Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.