BPL card ಕೇಂದ್ರ ಸರಕಾರವೇ ರದ್ದು ಮಾಡಿದೆ: ಸಿಎಂ ಸಿದ್ದರಾಮಯ್ಯ
Team Udayavani, Nov 23, 2024, 1:26 AM IST
ಮೈಸೂರು: ಮೊದಲಿಗೆ ರಾಜ್ಯದ ಜನರಿಗೆ 7 ಕೆಜಿ ಅಕ್ಕಿ ಕೊಟ್ಟವರೇ ನಾವು. ಇದನ್ನು 5 ಕೆಜಿಗೆ ಇಳಿಸಿದ್ದು ಬಿ.ಎಸ್.ಯಡಿಯೂರಪ್ಪ. ಈಗ ಯಡಿಯೂರಪ್ಪ ಅವರ ಮಗ ವಿಜಯೇಂದ್ರನಿಗೆ ಈ ಬಗ್ಗೆ ಮಾತಾಡಲು ಯಾವ ನೈತಿಕತೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.
ನಗರದ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಅವರು ಮಾತನಾಡಿ, ಯಡಿಯೂರಪ್ಪ ಅಕ್ಕಿ ಪ್ರಮಾಣವನ್ನು ಐದು ಕೆಜಿಗೆ ಇಳಿಸಿದ್ದನ್ನು ಹತ್ತು ಕೆಜಿಗೆ ಏರಿಸಿದ್ದು ನಾವು. ಈ ಸತ್ಯ ರಾಜ್ಯದ ಜನರಿಗೆ ಗೊತ್ತಿದೆ ಎಂದರು. ಕೇಂದ್ರ ಸರಕಾರವೇ ಬಿಪಿಎಲ್ ಕಾರ್ಡ್ಗಳನ್ನು ರದ್ದುಗೊಳಿಸಿದೆ. ಆಹಾರ ಭದ್ರತಾ ಕಾಯ್ದೆಯನ್ನು ಜಾರಿ ಮಾಡಿದ್ದು ಪ್ರಧಾನಿ ಮನಮೋಹನ್ ಸಿಂಗ್. ಇದನ್ನು ಬಿಜೆಪಿ ವಿರೋಧಿಸಿತ್ತು. ಹಿಂದಿನ ಕೇಂದ್ರ ಸಚಿವರಾಗಿದ್ದ ಮುರಳಿ ಮನೋಹರ ಜೋಶಿಯವರು ಆಹಾರ ಭದ್ರತಾ ಕಾಯ್ದೆಯನ್ನು ವಿರೋಧಿಸಿದ್ದರು. ಈಗ ಅನ್ಯಾಯವಾಗಿದೆ ಅಂತ ಸುಳ್ಳು ಹೇಳಿ ಬಿಜೆಪಿಯವರು ರಾಜ್ಯದ ಜನರ ದಿಕ್ಕು ತಪ್ಪಿಸುತ್ತಿ¨ªಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸರಕಾರಿ ನೌಕರರಿಗೂ ಬಿಪಿಎಲ್ ಕಾರ್ಡ್ ಕೊಡಬೇಕಾ? ಆದಾಯ ತೆರಿಗೆ ಪಾವತಿಸುವವರಿಗೂ ಬಿಪಿಎಲ್ ಕಾರ್ಡ್ ಕೊಡಬೇಕಾ? ಎಂದು ಪ್ರಶ್ನಿಸಿದ ಸಿದ್ದರಾಮಯ್ಯ, ಈ ಸಂಬಂಧ ವಿಪಕ್ಷದ ನಾಯಕ ಆರ್. ಅಶೋಕ್ ಫೋಟೋ ತೆಗೆಸಿಕೊಂಡಿದ್ದೇ ಕೊಂಡಿದ್ದು ಎಂದು ಲೇವಡಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ
KFD Vaccine: ಮುಂಬರುವ ನವೆಂಬರ್ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್
Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ
Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.