Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ
ವಿಡಿಯೋ ವೈರಲ್ ಆಗುತ್ತಿದ್ದಂತೆ ಶಿಕ್ಷಕ ಅಮಾನತು
Team Udayavani, Nov 23, 2024, 1:40 PM IST
ಸೇಲಂ: ಶಿಕ್ಷಕರೊಬ್ಬರು ಶಾಲೆಯಲ್ಲೇ ವಿದ್ಯಾರ್ಥಿಯಿಂದ ತನ್ನ ಪಾದಕ್ಕೆ ಮಸಾಜ್ ಮಾಡಿಸಿಕೊಂಡಿರುವ ಆರೋಪದ ಮೇಲೆ ಸರಕಾರಿ ಪ್ರೌಢ ಶಾಲೆಯ ಶಿಕ್ಷಕ ಅಮಾನತುಗೊಂಡ ಘಟನೆ ತಮಿಳುನಾಡಿನ ಪೂರ್ವ ರಾಜಪಾಳ್ಯಂನ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದಿದೆ.
ಸೇಲಂನ ತಲೈವಾಸಲ್‌ನ ಕಾಮಕ್ಕಪಾಳ್ಯಂನ ಜೆ ಜಯಪ್ರಕಾಶ್ ಅಮಾನತುಗೊಂಡಿರುವ ಶಿಕ್ಷಕ,
ಜಯಪ್ರಕಾಶ್ ಅವರು ಸುಮಾರು 17 ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎನ್ನಲಾಗಿದೆ ಅಲ್ಲದೆ ಈ ಶಾಲೆಯಲ್ಲಿ ಸುಮಾರು ಇನ್ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಓದುತ್ತಿದ್ದು ಮುಖ್ಯೋಪಾಧ್ಯಾಯರು ಸೇರಿದಂತೆ ಒಟ್ಟು ಒಂಬತ್ತು ಶಿಕ್ಷಕರು ಈ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎನ್ನಲಾಗಿದೆ.
ಶುಕ್ರವಾರ ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಇತ್ತ ವಿಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತ ಶಿಕ್ಷಣ ಇಲಾಖೆ ಗಣಿತ ಶಿಕ್ಷಕ ಮಂಜುನಾಥ್ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದೆ.
இப்படி பண்ணலாமா? தப்பில்ல… மாணவர்களை கால் அழுத்த சொல்லி ஓய்வெடுக்கும் அரசுப்பள்ளி ஆசிரியர்! | Kumudam News24x7#Salem | #GovtTeacher | #student | #govtschool | #Kumudamnews24x7 pic.twitter.com/Mqx7ZbNOFY
— KumudamNews (@kumudamNews24x7) November 23, 2024
ಘಟನೆ ಸಂಬಂಧ ತಮಿಳುನಾಡು ನಾಗರಿಕ ಸೇವೆಗಳ (ಶಿಸ್ತು ಮತ್ತು ಮೇಲ್ಮನವಿ) ನಿಯಮ 17 ರ ಉಪ-ನಿಯಮ (ಇ) ಅಡಿಯಲ್ಲಿ, ಮುಂದಿನ ಆದೇಶದವರೆಗೆ ತಕ್ಷಣದಿಂದಲೇ ಜಾರಿಗೆ ಬರುವಂತೆ ಜಯಪ್ರಕಾಶ್ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದೆ.
ಶಾಲೆಯ ಶಿಕ್ಷಕರಿಂದಲೇ ವಿಡಿಯೋ:
ಪದೇ ಪದೇ ಶಾಲೆಗೆ ಗೈರಾಗುತ್ತಿದ್ದರು ಎಂದು ಶಾಲೆಯ ಇತರ ಶಿಕ್ಷಕರು ಹೇಳಿದ್ದಾರೆ ಅಲ್ಲದೆ ಶಾಲೆಗೆ ಬಂದರೂ ಪಾಠ ಮಾಡದೇ ಕಚೇರಿಯಲ್ಲೇ ವಿಶ್ರಾಂತಿ ಪಡೆಯುತ್ತಿದ್ದರು ಈ ವೇಳೆ ವಿದ್ಯಾರ್ಥಿಗಳನ್ನು ಕರೆಸಿ ಕಾಲು ಒತ್ತುವಂತೆ (ಮಸಾಜ್) ಹೇಳುತ್ತಿದ್ದರು ಅದೇ ರೀತಿ ಶುಕ್ರವಾರ ವಿದ್ಯಾರ್ಥಿಯಿಂದ ತನ್ನ ಪಾದ ಒತ್ತುವಂತೆ ಹೇಳಿದ್ದಾರೆ ಈ ವೇಳೆ ಅದೇ ಶಾಲೆಯ ಶಿಕ್ಷಕರೊಬ್ಬರು ತನ್ನ ಮೊಬೈಲ್ ನಿಂದ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಸದ್ಯ ಗಣಿತ ಶಿಕ್ಷಕ ಅಮಾನತುಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!
ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ
ಶೀಘ್ರವೇ ದೇಶದ ಬುಲೆಟ್; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್ ಬುಲೆಟ್ ರೈಲು ಯೋಜನೆ
Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!
Enforcement Directorate: ಕ್ರಿಮಿನಲ್ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!
Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ
Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!
ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ
ಶೀಘ್ರವೇ ದೇಶದ ಬುಲೆಟ್; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್ ಬುಲೆಟ್ ರೈಲು ಯೋಜನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.