Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್; ತನಿಖೆ ಚುರುಕು
Team Udayavani, Nov 24, 2024, 7:15 AM IST
ಕಾರ್ಕಳ: ಪೀತಬೈಲಿನಲ್ಲಿ ಡಿ.18ರಂದು ನಡೆದ ನಕ್ಸಲ್ ವಿಕ್ರಂ ಗೌಡ ಎನ್‌ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ಚುರುಕುಗೊಂಡಿದೆ.
ವಿಕ್ರಂಗೌಡನ ಎದೆ ಮತ್ತು ಹೊಟ್ಟೆಯ ಭಾಗಕ್ಕೆ ಗುಂಡು ತಗಲಿ ಸ್ಥಳದಲ್ಲೇ ಮೃತಪಟ್ಟಿದ್ದ. ಈ ಘಟನೆಗೆ ಸಂಬಂಧಿಸಿ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ಕಾರ್ಕಳ ಡಿವೈಎಸ್‌ಪಿ ಅರವಿಂದ್ ಕಳಗುಜ್ಜಿ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ಹಲವರನ್ನು ಈಗಾಗಲೆ ವಿಚಾರಣೆ ನಡೆಸಲಾಗಿದ್ದು, ಮಹತ್ವದ ಸಾಕ್ಷ್ಯಾಧಾರಗಳನ್ನು ಕಲೆಹಾಕಿದ್ದಾರೆ. ಫಾರೆನ್ಸಿಕ್ ತಂಡವು ಸ್ಥಳಕ್ಕೆ ಭೇಟಿ ಹಲವು ಮಾಹಿತಿ ಮತ್ತು ಸಾಕ್ಷ್ಯಗಳನ್ನು ಸಂಗ್ರಹಿಸಿದೆ.
ಎಎನ್‌ಎಫ್ ಸಿಬಂದಿಯೂ ವಿಚಾರಣೆ:
ಘಟನೆ ಸಂಬಂಧ ಕಾರ್ಯಾಚರಣೆಯಲ್ಲಿ ಭಾಗಿಯಾದ ಎಎನ್‌ಎಫ್ ಸಿಬಂದಿ ಹಾಗೂ ಅಧಿಕಾರಿಗಳನ್ನೂ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಸ್ಥಳೀಯ ಕೆಲವು ನಿವಾಸಿಗಳನ್ನೂ ವಿಚಾರಣೆ ನಡೆಸಿದ್ದಾರೆ. ಶನಿವಾರ ತನಿಖಾಧಿಕಾರಿಗಳ ತಂಡ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ಬೇರೆಬೇರೆ ಆಯಾಮಗಳಲ್ಲಿ ತನಿಖೆ ನಡೆಸಿದ್ದಾರೆ.
ಮುಂದುವರಿದ ಕೂಂಬಿಂಗ್ :
ಎನ್‌ಕೌಂಟರ್ ನಡೆದ ದಿನ ಪರಾರಿಯಾಗಿದ್ದಾರೆ ಎನ್ನಲಾದ ಮೂರ್ನಾಲ್ಕು ಮಂದಿ ನಕ್ಸಲರ ಹುಡುಕಾಟಕ್ಕೆ ಎಎನ್‌ಎಫ್ ಬಲೆ ಬೀಸಿದ್ದು, ಪಶ್ಚಿಮಘಟ್ಟದ ತಪ್ಪಲು, ದಟ್ಟಾರಣ್ಯದಲ್ಲಿ ಹದ್ದಿನ ಕಣ್ಣಿರಿಸಿದೆ. ಕಾರ್ಯಾಚರಣೆಯಲ್ಲಿ ಉಳಿದ ನಕ್ಸಲರಲ್ಲಿ ಯಾರಾದರೂ ಗಾಯಗೊಂಡಿರಬಹುದೇ? ಅವರು ಯಾವ ಕಡೆಗೆ ಪರಾರಿಯಾಗಿರಬಹುದು ಅಥವಾ ಪಶ್ಚಿಮಘಟ್ಟದ ಕಾಡಿನಲ್ಲೇ ಇರಬಹುದೇ ಎಂಬ ನಿಟ್ಟಿನಲ್ಲಿ ಗುಪ್ತಚರ ವಿಭಾಗದ ಮಾಹಿತಿ ಆಧಾರದಲ್ಲಿ ಎಎನ್‌ಎಫ್ ಕಾರ್ಯಾಚರಣೆ ರೂಪಿಸುತ್ತಿದೆ. ಇನ್ನೊಂದೆಡೆ ಉಡುಪಿ – ದ. ಕ. ಜಿಲ್ಲೆಯ ಗಡಿಭಾಗದಲ್ಲಿ ಹೆಚ್ಚಿನ ನಿಗಾ ವಹಿಸಲಾಗಿದೆ. ಕಾರ್ಕಳ, ಬೆಳ್ತಂಗಡಿ, ಹೆಬ್ರಿ, ಕುದುರೆಮುಖ, ಆಗುಂಬೆ, ಶೃಂಗೇರಿ ಸಹಿತ ಕೆಲವು ಕಡೆಗಳಲ್ಲಿ ವಿವಿಧ ತಂಡಗಳಾಗಿ ಎಎನ್‌ಎಫ್ ಶೋಧ ಮುಂದುವರಿದಿದೆ.
ಪೀತಬೈಲಿನಲ್ಲಿ ನಡೆದ ನಕ್ಸಲ್ ಎನ್‌ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿ ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಘಟನೆ ಸಂಬಂಧಿಸಿ ಎಲ್ಲ ಆಯಾಮಗಳಿಂದಲೂ ತನಿಖೆ ಪ್ರಕ್ರಿಯೆ ನಡೆಯುತ್ತಿದೆ.– ಅರವಿಂದ ಕಳಗುಜ್ಜಿ, ಡಿವೈಎಸ್‌ಪಿ ಕಾರ್ಕಳ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ
Mysuru: ಜೆಡಿಎಸ್ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ
BJP ಸಂಘಟನೆ, ತಂತ್ರಗಾರಿಕೆಯಲ್ಲಿ ವಿಫಲ: ವಿಜಯೇಂದ್ರ ಮೇಲೂ ಪರಿಣಾಮ?
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ
Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್ ಎಚ್ಚರಿಕೆ
ಪತ್ರಕರ್ತರಿಂದ…ಪತ್ರಕರ್ತರಿಗಾಗಿ… ಕಷ್ಟದಲ್ಲಿ ಕೈಹಿಡಿಯುವ ಆಪದ್ಭಾಂಧವ!
Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.