Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ
Team Udayavani, Nov 24, 2024, 11:50 AM IST
ಮಡಿಕೇರಿ: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ ಮಾಡಿದ ಘಟನೆ ನ.23ರ ಶನಿವಾರ ಮಧ್ಯಾಹ್ನ ಸೋಮವಾರಪೇಟೆ ಪಟ್ಟಣದಲ್ಲಿ ನಡೆದಿದೆ.
ಪರಾರಿಯಾಗುವ ಸಂದರ್ಭ ಕಳ್ಳರು ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದು, ಪೊಲೀಸರ ಅತಿಥಿಯಾಗಿದ್ದಾರೆ.
ಪಟ್ಟಣದ ಸ್ವಾಮಿ ವಿವೇಕಾನಂದ ಸರ್ಕಲ್ ಬಳಿಯಿರುವ ಶ್ರೀಕುಮಾರಲಿಂಗೇಶ್ಚರ ಹಾರ್ಡ್ ವೇರ್ ಅಂಗಡಿಯಲ್ಲಿ ಮಾಲೀಕ ತೀರ್ಥ ಹರೀಶ್ ಒಬ್ಬರೆ ಕುಳಿತ್ತಿದ್ದ ಸಂದರ್ಭದಲ್ಲಿ ಖರೀದಿಯ ನೆಪದಲ್ಲಿ ಬಂದ ಮೂವರು ಕಳ್ಳರು, ಇದ್ದಕ್ಕಿದ್ದಂತೆ ಕುತ್ತಿಗೆಯಲ್ಲಿದ್ದ ಸರವನ್ನು ಕಿತ್ತುಕೊಂಡಿದ್ದಾರೆ. ಡ್ರಾವರ್‌ನಲ್ಲಿದ್ದ ಹಣ ಮತ್ತು ಚಿನ್ನದ ಸರವನ್ನು ತೆಗದುಕೊಂಡು ಸ್ಕೂಟಿಯಲ್ಲಿ ಪರಾರಿಯಾಗಲು ಪ್ರಯತ್ನಿಸಿದ್ದಾರೆ.
ಮಹಿಳೆಯ ಚೀರಾಟವನ್ನು ಗಮನಿಸಿದ ಅಕ್ಕಪಕ್ಕದ ವರ್ತಕರು, ಸ್ಕೂಟಿಯನ್ನು ಹಿಂಬಾಲಿಸಿಕೊಂಡು ಹೋಗಿದ್ದಾರೆ. ಸಫಾಲಿ ಬಾರ್ ಮುಂಭಾಗ ಒಬ್ಬ ಅರೋಪಿಯನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಪೊಲೀಸ್ ವಶದಲ್ಲಿರುವ ಆರೋಪಿ ಹಾಸನದ ಇಕ್ಬಾಲ್ ಎಂದು ತಿಳಿದು ಬಂದಿದೆ.
ಮತ್ತೊಬ್ಬ ಆರೋಪಿ ಸನಬ್ ಎಂಬಾತ ಬಸ್‌ನಲ್ಲಿ ಹಾಸನಕ್ಕೆ ತೆರಳುತ್ತಿದ್ದ ಸಂದರ್ಭ ಶನಿವಾರ ಸಂತೆ ಬಳಿ ಸಿಕ್ಕಿಬಿದ್ದಿದ್ದಾನೆ. ಇಬ್ರಾಹಿಂ ಎಂಬವನು ತಲೆಮರೆಸಿಕೊಂಡಿದ್ದಾನೆ ಎಂದು ಆರೋಪಿಸಲಾಗಿದೆ.
ಒಂದು ಚಿನ್ನದ ಸರ ಮತ್ತು 23,700 ರೂ. ಹಣವನ್ನು ಇಕ್ಬಾಲ್‌ನಿಂದ ವಶಪಡಿಸಿಕೊಳ್ಳಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madikeri:ರೈಲ್ವೆ ಕಂಬಿ ಬೇಲಿಯನ್ನೇ ಮುರಿದ ಕಾಡಾನೆಗಳು:ನಿತ್ಯ ಉಪಟಳದಿಂದ ಬೇಸತ್ತ ಗ್ರಾಮಸ್ಥರು
Madikeri: ವೀರ ಸೇನಾನಿಗಳಿಗೆ ಅಗೌರವ: ಆರೋಪಿ ಸೆರೆ
Kumbale: ವರ್ಕಾಡಿ ಪ್ಲೈವುಡ್ ಕಾರ್ಖಾನೆಯಲ್ಲಿ ಬೆಂಕಿ ಅನಾಹುತ: ಬೆಂಕಿ: ಕೋಟ್ಯಂತರ ರೂ. ನಷ್ಟ
Kasargod: ಬೆಕ್ಕಿಗಾಗಿ ಬಾವಿಗಿಳಿದ ವಿದ್ಯಾರ್ಥಿಯ ರಕ್ಷಣೆ
Kasaragodu: ಸಿವಿಲ್ ಪೊಲೀಸ್ ಆಫೀಸರ್ ಕೊಲೆ ಪ್ರಕರಣ: ಪತಿಯ ಸೆರೆ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.