Sambhal: ಮಸೀದಿ ಸರ್ವೇ ವಿರೋಧಿಸಿ ಗಲಾಟೆ: ಅಶ್ರುವಾಯು ಸಿಡಿಸಿದ ಪೊಲೀಸರು
Team Udayavani, Nov 24, 2024, 2:55 PM IST
ಲಕ್ನೋ: ಉತ್ತರ ಪ್ರದೇಶದ ಸಂಭಾಲ್ ನಲ್ಲಿ ಮೊಘಲರು ಮಸೀದಿ ನಿರ್ಮಿಸಲು ದೇವಾಲಯವನ್ನು ಕೆಡವಿದರು ಎಂಬ ದೂರಿನ ಮೇರೆಗೆ ನ್ಯಾಯಾಲಯದ ಆದೇಶದ ನಂತರ ಪ್ರಾರಂಭವಾದ ಮಸೀದಿಯ ಸರ್ವೇಯನ್ನು ಗುಂಪೊಂದು ವಿರೋಧಿಸಿದ್ದು, ಭಾನುವಾರ ಹಿಂಸಾತ್ಮಕ ಘರ್ಷಣೆ ನಡೆದಿದೆ.
ಸಮೀಕ್ಷಾ ತಂಡ ಆಗಮಿಸುತ್ತಿದ್ದಂತೆ ನೂರಾರು ಸಂಖ್ಯೆಯಲ್ಲಿ ಸೇರಿದ್ದ ಪ್ರತಿಭಟನಾಕಾರರು ಶಾಹಿ ಜಾಮಾ ಮಸೀದಿ ಬಳಿ ಜಮಾಯಿಸಿ ಈ ಕ್ರಮವನ್ನು ವಿರೋಧಿಸಿದರು. ಭಾರೀ ಪೊಲೀಸ್ ಬಂದೋಬಸ್ತ್ನೊಂದಿಗೆ ಸಮೀಕ್ಷಾ ತಂಡದ ಮೇಲೆ ಗುಂಪು ಕಲ್ಲು ತೂರಾಟ ನಡೆಸಿದ್ದರಿಂದ ಪರಿಸ್ಥಿತಿ ಹಿಂಸಾಚಾರಕ್ಕೆ ತಿರುಗಿತು.
ಪ್ರತೀಕಾರವಾಗಿ, ಪೊಲೀಸರು ಗುಂಪನ್ನು ಚದುರಿಸಲು ಅಶ್ರುವಾಯು ಶೆಲ್ಗಳನ್ನು ಹಾರಿಸಿದರು.
ಜಮಾ ಮಸೀದಿಯ ಮುಖ್ಯಸ್ಥರು ಮಸೀದಿಯ ಒಳಗಿನಿಂದ ಘೋಷಣೆ ಮಾಡಿದರು, ಮಸೀದಿಯ ಸುತ್ತಲೂ ನೆರೆದಿದ್ದ ಜನರನ್ನು ಚದುರಿಸಲು ಒತ್ತಾಯಿಸಿದರು. ಆದರೂ ಪ್ರತಿಭಟನಾಕಾರರು ಕೇಳಲಿಲ್ಲ. ಹಿರಿಯ ಪೊಲೀಸ್ ಅಧಿಕಾರಿಗಳು ಕೂಡ ಗುಂಪನ್ನು ಸಮಾಧಾನಪಡಿಸಲು ಪ್ರಯತ್ನಿಸಿದರು, ಆದರೆ ಅವರ ಪ್ರಯತ್ನಗಳು ವಿಫಲವಾದವು ಮತ್ತು ಗುಂಪು ಕಲ್ಲು ತೂರಾಟವನ್ನು ಪ್ರಾರಂಭಿಸಿತು.
”ನ್ಯಾಯಾಲಯದ ಆದೇಶದ ಮೇರೆಗೆ ಸಂಭಾಲ್ನಲ್ಲಿ ಸರ್ವೆ ನಡೆಸಲಾಗುತ್ತಿದೆ. ಕೆಲ ಸಮಾಜ ವಿರೋಧಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಪೊಲೀಸರು ಹಾಗೂ ಹಿರಿಯ ಅಧಿಕಾರಿಗಳು ಸ್ಥಳದಲ್ಲೇ ಇದ್ದಾರೆ. ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಪೊಲೀಸರು ಕಲ್ಲುತೂರಾಟಗಾರರನ್ನು ಗುರುತಿಸಿ ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ” ಎಂದು ಪೊಲೀಸ್ ಅಧಿಕಾರಿ ಪ್ರಶಾಂತ್ ಕುಮಾರ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
All-party meet: ನಾಳೆಯಿಂದ ಚಳಿಗಾಲದ ಅಧಿವೇಶ: ಸುಗಮಗೊಳಿಸಲು ಬಯಸಿದ ಸರಕಾರ
Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್ ಸೊರೇನ್ ನ.28ಕ್ಕೆ ಪದಗ್ರಹಣ
Gautam Adani;ಯುಎಸ್ ದೋಷಾರೋಪಣೆಯ ತನಿಖೆ ಕೋರಿ ಸುಪ್ರೀಂ ನಲ್ಲಿ ಹೊಸ ಮನವಿ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
All-party meet: ನಾಳೆಯಿಂದ ಚಳಿಗಾಲದ ಅಧಿವೇಶ: ಸುಗಮಗೊಳಿಸಲು ಬಯಸಿದ ಸರಕಾರ
Uttar Pradesh: ಝಾನ್ಸಿ ಆಸ್ಪತ್ರೆ ಬೆಂಕಿ ಅವಘಡ: ಮತ್ತೆ 2 ಹಸುಗೂಸು ಸಾ*ವು
IPL Auction 2025: ಸೇಲ್ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..
Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್ ಸೊರೇನ್ ನ.28ಕ್ಕೆ ಪದಗ್ರಹಣ
Tourist place: ಲೇಪಾಕ್ಷಿ ಪುರಾಣದ ಕಥೆಯ ಕೈಗನ್ನಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.