Saira Banu: ಎ.ಆರ್.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ
Team Udayavani, Nov 24, 2024, 3:49 PM IST
ಮುಂಬಯಿ: ಇತ್ತೀಚೆಗೆ ಆಸ್ಕರ್ ಪ್ರಶಸ್ತಿ ಪುರಸ್ಕೃತ ಸಂಗೀತ ನಿರ್ದೇಶಕ ಎ.ಆರ್.ರೆಹಮಾನ್ (A.R.Rahman) ಅವರ ಪತ್ನಿ ಸಾಯಿರಾ ಪತಿಯಿಂದ ದೂರ ಇರುವ ಬಗ್ಗೆ ಘೋಷಣೆ ಮಾಡಿದ್ದಾರೆ.
ಪತ್ನಿ ಸಾಯಿರಾ ಬಾನು (Saira Banu) ಅವರಿಗೆ ವಿಚ್ಚೇದನದ ನೀಡಿದ ಬಳಿಕ ಎ.ಆರ್.ರೆಹಮಾನ್ ಅವರ ಬಗ್ಗೆ ಕೆಲವರು ನಾನಾ ರೀತಿಯ ಕಮೆಂಟ್ ಗಳನ್ನು ಮಾಡುತ್ತಿದ್ದಾರೆ. ಇದೀಗ ಸಾಯಿರಾ ಬಾನು ಅವರು ಈ ಬಗ್ಗೆ ಮೌನ ಮುರಿದಿದ್ದಾರೆ.
ಆಡಿಯೋ ಮೂಲಕ ಯೂಟ್ಯೂಬರ್ ಹಾಗೂ ಮಾಧ್ಯಮವರಿಗೆ ಎ.ಆರ್.ರೆಹಮಾನ್ ಅವರ ಹೆಸರನ್ನು ಹಾಳು ಮಾಡಬೇಡಿ ಹಾಗೂ ತಮ್ಮ ಕುಟುಂಬವನ್ನು ನೋಯಿಸಬೇಡಿ ಎಂದು ಮನವಿ ಮಾಡಿದ್ದಾರೆ. ಇದಲ್ಲದೆ ತಾವು ಯಾಕೆ ಎ.ಆರ್.ರೆಹಮಾನ್ ಅವರಿಂದ ದೂರವಾಗುವ ನಿರ್ಧಾರ ತೆಗೆದುಕೊಂಡರು ಎನ್ನುವುದನ್ನು ಹೇಳಿದ್ದಾರೆ.
ಆಡಿಯೋದಲ್ಲಿ ಏನಿದೆ?: ನಾನು ಕಳೆದ ಕೆಲ ತಿಂಗಳಿನಿಂದ ಬಾಂಬೆಯಲ್ಲಿದ್ದೇನೆ. ದೈಹಿಕವಾಗಿ ನಾನು ತುಂಬಾ ಸುಸ್ತುಗೊಂಡಿದ್ದೇನೆ. ನನ್ನ ಆರೋಗ್ಯ ಕೂಡ ಸರಿಯಾಗಿಲ್ಲ. ಇದೇ ಕಾರಣದಿಂದ ನಾನು ರೆಹಮಾನ್ ಅವರಿಂದ ದೂರವಾಗಲು ಬಯಸಿದ್ದು. ಯೂಟ್ಯೂಬರ್ಸ್ ಹಾಗೂ ಮಾಧ್ಯಮದವರಿಗೆ ದಯವಿಟ್ಟು ನಾನು ಮಾಡುವ ಮನವಿ ಏನೆಂದರೆ ರೆಹಮಾನ್ ಅವರ ಬಗ್ಗೆ ಕೆಟ್ಟದ್ದನ್ನು ಪ್ರಸಾರ ಮಾಡಬೇಡಿ. ನನ್ನ ಆರೋಗ್ಯ ಸಮಸ್ಯೆಯಿಂದಾಗಿ ನಾನು ಚೆನ್ನೈನಲ್ಲಿ ಇರಲಿಲ್ಲ. ನಾನು ಚೆನ್ನೈನಲ್ಲಿ ಇಲ್ಲದಿದ್ದರೆ ಸಾಯಿರಾ ಎಲ್ಲಿದ್ದಾಳೆ ಎಂದು ಜನರು ಆಶ್ಚರ್ಯ ಪಡುತ್ತಾರೆ ಎಂದು ನನಗೆ ತಿಳಿದಿದೆ. ನಾನು ಚಿಕಿತ್ಸೆ ಪಡೆಯುತ್ತಿದ್ದೇನೆ. ಚೆನ್ನೈನಲ್ಲಿ ಇದು ರೆಹಮಾನ್ ಅವರ ಬ್ಯುಸಿ ಶೆಡ್ಯೂಲ್‌ನಲ್ಲಿ ಆಗುವುದಿಲ್ಲ. ನನ್ನ ಮಕ್ಕಳಿಗಾಗಲಿ ಅವರಿಗಾಗಲಿ ಯಾರಿಗೂ ತೊಂದರೆ ಕೊಡಲು ನಾನು ಬಯಸಲ್ಲ ಎಂದು ಸಾಯಿರಾ ಹೇಳಿದ್ದಾರೆ.
ಅವರೊಬ್ಬ ಅದ್ಭುತ ಮನುಷ್ಯ. ಅವರು ಹೇಗಿದ್ದಾರೋ ಹಾಗೆಯೇ ಇರಲು ನಾನು ಬಯಸುತ್ತೇನೆ. ನನ್ನ ಜೀವನದಲ್ಲಿ ನಾನು ಅವರನ್ನು ನಂಬುತ್ತೇನೆ. ನಾನು ತುಂಬಾ ಪ್ರೀತಿಸುತ್ತೇನೆ. ನಾವು ಪರಸ್ಪರ ಒಪ್ಪಿಕೊಂಡೇ ನಿರ್ಧಾರವನ್ನು ಮಾಡಿದ್ದೇವೆ. ಈ ಬಗ್ಗೆ ಹುಟ್ಟಿರುವ ಎಲ್ಲಾ ಊಹಾಪೋಹಗಳನ್ನು ನಿಲ್ಲಿಸಬೇಕೆಂದು ನಾನು ನಿಮ್ಮೆಲ್ಲರನ್ನು ವಿನಂತಿಸುತ್ತೇನೆ.
ಈ ಕ್ಷಣದಲ್ಲಿ ನಾವು ಏಕಾಂಗಿಯಾಗಿದ್ದೇವೆ. ನಾವು ಇನ್ನೂ ಅಧಿಕೃತವಾಗಿ ಏನನ್ನೂ ಘೋಷಿಸಿಲ್ಲ. ಅವರ ಹೆಸರನ್ನು ಹಾಳು ಮಾಡುವುದನ್ನು ನಿಲ್ಲಿಸಿ ಎಂದು ಸಾಯಿರಾ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral Pics: ಡೇಟಿಂಗ್ ರೂಮರ್ಸ್ ನಡುವೆ ವಿಜಯ್ – ರಶ್ಮಿಕಾ ಸೀಕ್ರೆಟ್ ಲಂಚ್ ಡೇಟ್
Dhanashree Verma: ಯಶ್ ಸಿನಿಮಾಕ್ಕೆ ಕ್ರಿಕೆಟಿಗ ಚಹಾಲ್ ಪತ್ನಿ ಹೀರೋಯಿನ್
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !
Kollywood: ʼಅಮರನ್ʼ ಚಿತ್ರತಂಡದಿಂದ 1 ಕೋಟಿ ರೂ. ಪರಿಹಾರ ಕೇಳಿದ ವಿದ್ಯಾರ್ಥಿ; ಕಾರಣವೇನು?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
All-party meet: ನಾಳೆಯಿಂದ ಚಳಿಗಾಲದ ಅಧಿವೇಶ: ಸುಗಮಗೊಳಿಸಲು ಬಯಸಿದ ಸರಕಾರ
Uttar Pradesh: ಝಾನ್ಸಿ ಆಸ್ಪತ್ರೆ ಬೆಂಕಿ ಅವಘಡ: ಮತ್ತೆ 2 ಹಸುಗೂಸು ಸಾ*ವು
IPL Auction 2025: ಸೇಲ್ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.