Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
ಮುನಿರಾಬಾದ್, ಬಾನಾಪುರ ರೈಲು ನಿಲ್ದಾಣಗಳಿಗೂ ಮರುನಾಮಕರಣ
Team Udayavani, Nov 24, 2024, 7:40 PM IST
ಬೆಂಗಳೂರು: ಕೊಪ್ಪಳ ಜಿಲ್ಲೆಯ ಗಂಗಾವತಿ, ಮುನಿರಾಬಾದ್ ಮತ್ತು ಬಾನಾಪುರ ರೈಲ್ವೆ ನಿಲ್ದಾಣಗಳಿಗೆ ಕ್ರಮವಾಗಿ ಅಂಜನಾದ್ರಿ (ಕಿಷ್ಕಿಂಧಾ), ಹುಲಿಗೆಮ್ಮ ದೇವಿ ಮತ್ತು ಮಹಾತ್ಮ ಗಾಂಧಿ ರೈಲು ನಿಲ್ದಾಣ ಎಂದು ಮರುನಾಮಕರಣ ಮಾಡಬೇಕೆಂದು ಶಿಫಾರಸು ಮಾಡಲಾಗಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ .ಬಿ ಪಾಟೀಲ ರವಿವಾರ ತಿಳಿಸಿದ್ದಾರೆ.
ಈ ಬಗ್ಗೆ ಪ್ರಕಟಣೆ ಹೊರಡಿಸಿದ ಸಚಿವರು, ಈ ಶಿಫಾರಸನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಳಿಸಲಾಗಿದೆ. ಅವರ ಮೂಲಕ ಇದನ್ನು ಕೇಂದ್ರ ಗೃಹ ಸಚಿವಾಲಯಕ್ಕೆ ಕಳಿಸಿ ಕೊಡಲಾಗುವುದು ಎಂದಿದ್ದಾರೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಬರುವ ಈ ಮೂರು ನಿಲ್ದಾಣಗಳಿಗೆ ಮರುನಾಮಕರಣ ಮಾಡುವುದರ ಹಿಂದೆ ಜನರ ಭಾವನೆಗಳಿಗೆ ಮನ್ನಣೆ ನೀಡಿದಂತೆ ಆಗುತ್ತದೆ ಎಂದಿದ್ದಾರೆ.
ಅಂಜನಾದ್ರಿಯು ರಾಮಾಯಣದಲ್ಲಿ ಬರುವ ಆಂಜನೇಯನ ಜನ್ಮಸ್ಥಳವಾಗಿದ್ದು, ಹುಲಿಗೆಮ್ಮದೇವಿ ಈ ಭಾಗದ ಜನಪ್ರಿಯ ಜನಪದ ದೇವತೆಯಾಗಿದೆ. ಮಹಾತ್ಮ ಗಾಂಧಿಯವರ ಹೆಸರಿಡುವುದರ ಹಿಂದೆ ಕೂಡ ಐತಿಹಾಸಿಕ ಕಾರಣವಿದೆ ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.