JDS ಕಳೆದುಕೊಂಡಲ್ಲೇ ಹುಡುಕುತ್ತೇನೆ: ನಿಖಿಲ್ ಕುಮಾರಸ್ವಾಮಿ
ಮತ್ತೆ ಮುಸ್ಲಿಮರ ವಿರುದ್ಧ ಪರೋಕ್ಷ ಬೇಸರ
Team Udayavani, Nov 25, 2024, 12:02 AM IST
ಚನ್ನಪಟ್ಟಣ: ಎಲ್ಲಿ ಕಳೆದುಕೊಂಡಿದ್ದೇನೋ ಅಲ್ಲಿಯೇ ಹುಡುಕುತ್ತೇನೆ. ಅಲ್ಲಿಯೇ ಮುಂದಿನ ರಾಜಕೀಯ ಮುಂದುವರಿಸುತ್ತೇನೆ. ಕ್ಷೇತ್ರದಲ್ಲಿ ಪಕ್ಷದ ಮೇಲೆ ದೊಡ್ಡ ಮಟ್ಟದ ಅಭಿಮಾನ ಇದೆ. ಕಾರ್ಯಕರ್ತರ ಜತೆಗೆ ಸದಾ ಇರುತ್ತೇನೆ ಎಂದು ಚನ್ನಪಟ್ಟಣ ಉಪಚುನಾವಣೆಯ ಪರಾಜಿತ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ತಿಳಿಸಿದರು. ನಿಖೀಲ್ ಅವರ ಸೋಲಿನಿಂದ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ್ದ ತಾಲೂಕಿನ ಶ್ರೀರಾಂಪುರದ ಜೆಡಿಎಸ್ ಕಾರ್ಯಕರ್ತ ಹಾಗೂ ಅಭಿಮಾನಿ ಆಗಿರುವ ಮಂಜುನಾಥ್ (ಅಭಿ) ಅವರನ್ನು ಭೇಟಿಯಾದ ಬಳಿಕ ಮಾಧ್ಯಮಗಳ ಜತೆ ಮಾತನಾಡಿದರು.
ಬಿಜೆಪಿ ಜತೆ ಮೈತ್ರಿ ಮಾಡಿಕೊಂಡಿದ್ದಕ್ಕೆ ಮುಸ್ಲಿಂ ಮತಗಳು ಬಂದಿಲ್ಲ ಎಂಬ ಮಾಧ್ಯಮದವರು ಪ್ರಶ್ನೆಗೆ, ನನಗೆ ಹೆಚ್ಚಿನ ಮತ ಬಂದಿವೆ. ಆದರೆ ಒಂದು ಸಮುದಾಯದ ಮತಗಳು ಬಂದಿಲ್ಲ. ದೇವೇಗೌಡರ ಕೊಡುಗೆಯನ್ನು ನೆನಪಿಸಿ ಕೊಂಡಿಲ್ಲ, ನಮ್ಮ ಆವಶ್ಯಕತೆ ಅವರಿಗೆ ಇಲ್ಲ ಅನಿಸುತ್ತೆ. ಸೋಲಿನ ಅಂತರದಲ್ಲಿ ಆ ಸಮುದಾಯದವನ್ನು ಬದಿಗಿಟ್ಟು ನೋಡಿದರೆ ಸಮಬಲದ ಹೋರಾಟ ಮಾಡಿದ್ದೇವೆ ಎಂದರು.
ರಕ್ತದಲ್ಲಿ ಪತ್ರ ಬರೆದ ಕಾರ್ಯಕರ್ತ
ಚಿಕ್ಕಮಗಳೂರು: ಕಡೂರು ಮೂಲದ ಜೆಡಿಎಸ್ ಕಾರ್ಯ ಕರ್ತ ಹರ್ಷಿತ್ ರಕ್ತದಲ್ಲಿ ಪತ್ರ ಬರೆದು ನಿಖೀಲ್ಗೆ ರವಾನಿಸಿದ್ದು, ಸೋಲಿನಿಂದ ಧೃತಿಗೆಡದಂತೆ ಧೈರ್ಯ ತುಂಬಿದ್ದಾರೆ. “ನೀವು ಚುನಾವಣೆಯಲ್ಲಿ ಸೋತಿರ ಬಹುದು. ಆದರೆ ಜನರ ಮನಸ್ಸಿನ ಲ್ಲಿದ್ದೀರಿ. ಒಂದಲ್ಲ ಒಂದು ದಿನ ಒಳ್ಳೆಯತನ ಗೆದ್ದೇ ಗೆಲ್ಲುತ್ತದೆ. ಧೈರ್ಯವಾಗಿರಿ’ ಎಂದು ಬರೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.