Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
ಮುಸ್ಲಿಂ ಡಿಸಿಗಳು ಇರುವ ಕಡೆಗಳಲ್ಲಿ ಪಹಣಿ ಬದಲಾವಣೆ
Team Udayavani, Nov 25, 2024, 2:00 PM IST
ಬೀದರ್: ವಕ್ಫ್ ಭೂ ಕಬಳಿಕೆ ವಿರೋಧಿ ಜನಜಾಗೃತಿ ಹೋರಾಟ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕರಾದ ಬಸವನಗೌಡ ಪಾಟೀಲ ಯತ್ನಾಳ್ ಮತ್ತು ರಮೇಶ್ ಜಾರಕಿಹೊಳಿ ನೇತೃತ್ವದ ತಂಡ ಸೋಮವಾರ (ನ.25) ತಾಲೂಕಿನ ಧರ್ಮಾಪುರ ಗ್ರಾಮಕ್ಕೆ ಭೇಟಿ ನೀಡಿ ಜನರಿಂದ ಅಹವಾಲು ಸ್ವೀಕಾರ ಮಾಡಿದರು.
ಜಮೀನುಗಳಲ್ಲಿ ವಕ್ಫ್ ಹೆಸರು ಸೇರ್ಪಡೆ ಕುರಿತಂತೆ ತಂಡವು ಗ್ರಾಮದ ಹಲವು ಜನರಿಂದ ಮಾಹಿತಿ ಸಂಗ್ರಹ ಮಾಡಿತು. ಈ ವೇಳೆ ಪಹಣಿಯಿಂದ ವಕ್ಫ್ ಅಂತ ತೆಗೆಯುವುದಲ್ಲ, ವಕ್ಫ್ ಬೋರ್ಡನ್ನೇ ತೆಗೆಯಬೇಕು ಎಂದು ಆಗ್ರಹಿಸಿದರು. 2011ರಲ್ಲಿ ಪಹಣಿಯಲ್ಲಿ 11ನೇ ಕಾಲಂನಲ್ಲಿ ಖಾಲಿ ಇತ್ತು, ಬಳಿಕ ಮನೆಗಳನ್ನು ಕಟ್ಟಲಾಗಿದೆ ಎಂದು ನಮೂದಿಸಿತ್ತು. ಬಳಿಕ ಮನೆ ಎನ್ನುವುದನ್ನು ತೆಗೆದು, ವಕ್ಫ್ ಆಸ್ತಿ ಅಂತ ಸೇರಿಸಲಾಗಿದೆ. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಇದನ್ನು ಸೇರಿಸುವ ಕೆಲಸ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಈ ವೇಳೆ ಜನರನ್ನು ಉದ್ದೇಶಿಸಿ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಎಲ್ಲೆಲ್ಲಿ ಮುಸ್ಲಿಂ ಜಿಲ್ಲಾಧಿಕಾರಿಗಳಿದ್ದರೋ ಅಲ್ಲಿ ವಕ್ಫ್ ಅಂತ ಮಾಡಿದ್ದಾರೆ. ಬೀದರ ಜಿಲ್ಲೆಯಲ್ಲಿ ಜಾಫರ್ ಎಂಬ ಅಧಿಕಾರಿ ಬಂದು ಇಡೀ ಊರನ್ನೇ ವಕ್ಫ್ ಎಂದು ಮಾಡಿದ್ದಾರೆ. ಮಿನಿ ಪಾಕಿಸ್ತಾನ ಮಾಡಲು ಹೊರಟಿದ್ದಾರೆ. ಮಹರ್ಷಿ ವಾಲ್ಮೀಕಿ ಜಾಗ, ಮನೆಗಳು, ದೇವಸ್ಥಾನಗಳು, ಜೊತೆಗೆ ಆಳಂದದಲ್ಲಿ ಪೊಲೀಸ್ ಸ್ಟೇಷನ್, ಕ್ವಾಟ್ರಸ್ ಎಲ್ಲವೂ ವಕ್ಫ್ ಮಾಡಿದ್ದಾರೆ ಎಂದು ಹೇಳಿದರು.
ಇಡೀ ರಾಜ್ಯದಲ್ಲಿ ತಂಡ ಮಾಡಿದ್ದೇವೆ, ಜನಜಾಗೃತಿ ಮಾಡುತ್ತಿದ್ದೇವೆ. ವಕ್ಫ್ ಬರೀ ತಿದ್ದುಪಡಿ ಅಲ್ಲ, ಇಡೀ ವಕ್ಫ್ ಬೋರ್ಡನ್ನೇ ಭಾರತದಿಂದ ತೆಗೆದುಹಾಕಬೇಕು. ಒಂದೇ ಒಂದು ಮನೆಗೆ ಕೈ ಹಾಕಿದರೆ ಪರಿಣಾಮ ಸರಿ ಇರೋದಿಲ್ಲವೆಂದು ವಕ್ಫ್ ಅವರಿಗೆ ಎಚ್ಚರಿಕೆ ನೀಡಿದ್ದೇನೆ. ಹಾಗಾಗಿ ಅವರು ಸುಮ್ಮನಿದ್ದಾರೆ. ಅನೇಕ ಇಲಾಖೆಗಳಿಗೆ ಅಧಿಕಾರಿಗಳಿಲ್ಲ, ಆದರೆ ವಕ್ಫ್‌ನಲ್ಲಿರುವ ಅಧಿಕಾರಿಗಳು ಸರ್ಕಾರಿ ಜಾಗ ಸೇರಿ, ಕಂಡ ಜಾಗವನ್ನೆಲ್ಲಾ ಟ್ರಿಬ್ಯುನಲ್ ಮೂಲಕ ವಕ್ಫ್ ಆಸ್ತಿ ಎಂದು ಮಾಡಿಕೊಳ್ಳುತ್ತಿದ್ದಾರೆ. ಟ್ರಿಬ್ಯುನಲ್‌ನಲ್ಲಿ ಇರುವವರೆಲ್ಲಾ ಮುಸ್ಲಿಮರೇ ಆಗಿದ್ದು, ಅವರು ಇದರ ವಿರುದ್ಧ ತೀರ್ಪು ಕೊಡಲು ಸಾಧ್ಯವಾ ಅಂತ ಪ್ರಶ್ನಿಸಿದರು.
ಭಾರತೀಯ ಸೈನ್ಯದ್ದು 18ಲಕ್ಷ ಎಕರೆ ಜಾಗವಿದೆ, ರೈಲ್ವೇ ಇಲಾಖೆಯದ್ದು 15 ಲಕ್ಷ ಎಕರೆ, ಮೂರನೆಯದು ವಕ್ಫ್ ಪಾರ್ಲಿಮೆಂಟರಿ ಬೋರ್ಡ್ ಜಂಟಿ ಸಮಿತಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಅವರು ಹೇಳಿದಂತೆ, ಭಾರತದಲ್ಲಿ 38 ಲಕ್ಷ ಎಕರೆ ಜಾಗವನ್ನ ವಕ್ಫ್ ಮಾಡಿಕೊಳ್ಳಲು ಹೊರಟಿದ್ದಾರೆ. ಈ ಮೂಲಕ ಮತ್ತೊಂದು ಪಾಕಿಸ್ತಾನ ಮಾಡಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮೋದಿ ಅವರು 42ನೇ ಕಾನೂನಿಗೆ ತಿದ್ದುಪಡಿ ತರಲು ಹೊರಟಿದ್ದು, ಅದಕ್ಕೆ ನೀವೆಲ್ಲರೂ ಬೆಂಬಲ ನೀಡಬೇಕು. ನೀವ್ಯಾರು ಹೆದರುವ ಅವಶ್ಯಕತೆ ಇಲ್ಲ. ಎಲ್ಲೆಲ್ಲಿ ಕಾಂಗ್ರೆಸ್ ಎಂಪಿಗಳಿದ್ದಾರೆ, ಅವರಿಗೂ ಹೆದರುವ ಅವಶ್ಯಕತೆ ಇಲ್ಲ ಎಂದು ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ
Health Card: ಮಣಿಪಾಲ ಆರೋಗ್ಯಕಾರ್ಡ್ ನೋಂದಾವಣೆಗೆ ಐದು ದಿನ ಬಾಕಿ: ನ.30 ಕೊನೆಯ ದಿನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.