Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ..ಮೀನುಗಾರಿಕಾ ದೋಣಿಯಲ್ಲಿದ್ದ 6 ಟನ್ ಮಾದಕ ವಸ್ತು ವಶ
Team Udayavani, Nov 25, 2024, 3:56 PM IST
ಅಂಡಮಾನ್: ಭಾರತಕ್ಕೆ ತರಲು ಯೋಜಿಸಿದ್ದ 6 ಟನ್ನಷ್ಟು ಮಾದಕ ವಸ್ತುವನ್ನು ಕರಾವಳಿ ಕಾವಲು ಪಡೆ ಸೋಮವಾರ ವಶಪಡಿಸಿಕೊಂಡಿದೆ. ಇದು ಭಾರತದಲ್ಲಿ ನಡೆದ ಅತೀದೊಡ್ಡ ಮಾದಕವಸ್ತು ತಡೆ ಕಾರ್ಯಾಚರಣೆ ಎನಿಸಿಕೊಂಡಿದೆ.
ಭಾರತೀಯ ಕೋಸ್ಟ್ ಗಾರ್ಡ್ ಸೋಮವಾರ(ನ.25) ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಬಳಿ ಬಂಗಾಳ ಕೊಲ್ಲಿಯಲ್ಲಿ ಮೀನುಗಾರಿಕಾ ದೋಣಿಯಿಂದ ಆರು ಟನ್ ಡ್ರಗ್ಸ್ ವಶಪಡಿಸಿಕೊಂಡಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದು. ಮಾದಕ ದ್ರವ್ಯ ಕಳ್ಳಸಾಗಣಿಕೆಯನ್ನು ಗುರಿಯಾಗಿಸಿಕೊಂಡು ಎನ್ಸಿಬಿ, ನೌಕಾಪಡೆ ಮತ್ತು ಗುಜರಾತ್ ಪೊಲೀಸ್ ಭಯೋತ್ಪಾದನಾ ನಿಗ್ರಹ ದಳ ಜಂಟಿಯಾಗಿ ನಡೆಸುತ್ತಿರುವ ಕಾರ್ಯಾಚರಣೆಯಲ್ಲಿ ದೊಡ್ಡ ಕುಳ ಬಲೆಗೆ ಬಿದ್ದಿದೆ.
ಸೋಮವಾರ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಬಳಿ ಭಾರತೀಯ ಕೋಸ್ಟ್ ಗಾರ್ಡ್ (ಐಸಿಜಿ) ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಮೀನುಗಾರಿಕಾ ಬೋಟ್ ನಲ್ಲಿ ವಿದೇಶದಿಂದ ಭಾರತಕ್ಕೆ ಮಾದಕ ವಸ್ತುಗಳನ್ನು ಕಳ್ಳ ಸಾಗಾಟ ಮಾಡಲಾಗುತ್ತಿತ್ತು ಎನ್ನಲಾಗುತ್ತಿದ್ದು ಇದರ ಬಗ್ಗೆ ಇನ್ನಷ್ಟು ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಈ ತಿಂಗಳ ಆರಂಭದಲ್ಲಿ, ಮಾದಕ ದ್ರವ್ಯ ವಿರೋಧಿ ಸಂಸ್ಥೆಗಳು ಸುಮಾರು 700 ಕಿಲೋಗ್ರಾಂಗಳಷ್ಟು ಮೆಥಾಂಫೆಟಮೈನ್ ಅನ್ನು ವಶಪಡಿಸಿಕೊಂಡಿತ್ತು ಇದರ ಜೊತೆಗೆ ಎಂಟು ಮಂದಿ ಇರಾನ್ ಪ್ರಜೆಗಳನ್ನು ಗುಜರಾತ್ ನ ಕರಾವಳಿ ಭಾಗದಲ್ಲಿ ಬಂಧಿಸಲಾಗಿತ್ತು.
ಕಾರ್ಯಾಚರಣೆ ನಡೆದಿದ್ದು ಹೇಗೆ?:
ಪೋರ್ಟ್ಬ್ಲೇರ್ನಿಂದ 150 ಕಿ.ಮೀ. ದೂರದಲ್ಲಿ ಮೀನುಗಾರಿಕಾ ಬೋಟ್ವೊಂದು ನಿಧಾನವಾಗಿ ಚಲಿಸುತ್ತಿದ್ದನ್ನು ಕರಾವಳಿ ಕಾವಲು ಪಡೆಯ ಡಾರ್ನಿ ಯರ್ ವಿಮಾನ ಶನಿವಾರ ಗುರುತಿ ಸಿತ್ತು. ಒಂದು ದಿನ ಕಳೆದರೂ ಬೋಟ್ ಸಾಗರದಲ್ಲೇ ಇದ್ದದ್ದನ್ನು ಗಮನಿಸಿದ ಅಧಿಕಾರಿಗಳು ಅನುಮಾನಗೊಂಡು ದಾಳಿ ನಡೆಸಿದ್ದಾರೆ. ಈ ವೇಳೆ 2 ಕೆ.ಜಿ. ಯಂತೆ ಪ್ಯಾಕ್ ಮಾಡಲಾಗಿದ್ದ 3,000 ಪ್ಯಾಕೇಟನ್ನು ವಶಪಡಿಸಿಕೊಳ್ಳಲಾಗಿದೆ. ಇದನ್ನು ಪೋರ್ಟ್ಬ್ಲೇರ್ ಸಾಗಿಸಲು ಪ್ಲಾನ್ ಮಾಡಲಾಗಿತ್ತು ಎಂದಿದ್ದಾ ರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.