Health Card: ಮಣಿಪಾಲ ಆರೋಗ್ಯಕಾರ್ಡ್ ನೋಂದಾವಣೆಗೆ ಐದು ದಿನ ಬಾಕಿ: ನ.30 ಕೊನೆಯ ದಿನ
Team Udayavani, Nov 25, 2024, 5:25 PM IST
ಮಣಿಪಾಲ: ಮಣಿಪಾಲ ಆರೋಗ್ಯಕಾರ್ಡ್ 2024ರ ನೋಂದಾವಣೆಗೆ ಐದು ದಿನ ಬಾಕಿಯಿದ್ದು, ನ.30 ಕೊನೆಯ ದಿನ ಎಂದು ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ್ ಶೆಟ್ಟಿ ತಿಳಿಸಿದ್ದಾರೆ.
ಇದು ಆಸ್ಪತ್ರೆಯ ಎಲ್ಲಾ ಆರೋಗ್ಯ ಸೇವೆಗಳ ಮೇಲೆ ರಿಯಾಯಿತಿ ನೀಡುತ್ತದೆ. ಸಣ್ಣ ಮೊತ್ತವನ್ನು ಪಾವತಿಸುವ ಮೂಲಕ, ಯಾರಾದರೂ ಸದಸ್ಯರಾಗಬಹುದು ಮತ್ತು ಪ್ರಯೋಜನಗಳನ್ನು ಪಡೆಯಬಹುದು. ಕಾರ್ಡ್ ಖರೀದಿಸಲು ಹೂಡಿಕೆ ಮಾಡಿದ ಹಣವನ್ನು ಕೇವಲ ಎರಡು ಅಥವಾ ಮೂರು ಕಾರ್ಡ್ ಬಳಕೆಗಳಲ್ಲಿ ರಿಯಾಯಿತಿಯ ರೂಪದಲ್ಲಿ ಹಿಂಪಡೆಯಬಹುದು.
ಮಣಿಪಾಲ್ ಆರೋಗ್ಯ ಕಾರ್ಡ್‌ದಾರರು ತಜ್ಞ ಮತ್ತು ಸೂಪರ್ ಸ್ಪೆಷಲಿಸ್ಟ್ ವೈದ್ಯರೊಂದಿಗೆ ಸಮಾಲೋಚನೆ ಶುಲ್ಕದಲ್ಲಿ 50% ರಿಯಾಯಿತಿ, ರೋಗನಿರ್ಣಯ ಮತ್ತು ಪ್ರಯೋಗಾಲಯ ಪರೀಕ್ಷೆ ಸೇವೆಯಲ್ಲಿ 25% ರಿಯಾಯಿತಿ, ರೇಡಿಯಾಲಜಿ, ಹೊರರೋಗಿ ಕಾರ್ಯವಿಧಾನಗಳು ಮತ್ತು ಮಧುಮೇಹ ಪಾದದ ಆರೈಕೆಯಲ್ಲಿ 20% ರಿಯಾಯಿತಿ, ಡಯಾಲಿಸಿಸ್‌ನಲ್ಲಿ ₹100 ರಿಯಾಯಿತಿ, ಆಸ್ಪತ್ರೆಯ ಔಷಧಿಗಳ ಮೇಲೆ 10% ವರೆಗೆ ರಿಯಾಯಿತಿ ಮತ್ತು ಜನರಲ್ ವಾರ್ಡ್‌ನಲ್ಲಿ ಒಳರೋಗಿಗಳ ಬಿಲ್‌ಗಳಲ್ಲಿ (ಕಾನ್ಸುಮಬೆಲ್ಸ್ ಮತ್ತು ಪ್ಯಾಕೇಜ್‌ಗಳನ್ನು ಹೊರತುಪಡಿಸಿ) 25% ರಿಯಾಯಿತಿ ಸೌಲಭ್ಯವಿದೆ.
ಮಣಿಪಾಲ್ ಆರೋಗ್ಯ ಕಾರ್ಡ್ 2024ರ ಯೋಜನೆಯು “ಒಂದು ವರ್ಷದ ಯೋಜನೆಯಲ್ಲಿ ಕಾರ್ಡಿನ ಸದಸ್ಯತ್ವವು ಒಬ್ಬರಿಗೆ ₹ 350/ -, ಕೌಟಂಬಿಕ ಕಾರ್ಡ್ ಅಂದರೆ ಕಾರ್ಡುದಾರ, ಅವರ ಸಂಗಾತಿ, 25 ವರ್ಷದ ಒಳಗಿನ ಮಕ್ಕಳಿಗೆ ₹700/- ಮತ್ತು ಕುಟುಂಬ ಪ್ಲಸ್ ಯೋಜನೆಗೆ ಅಂದರೆ ಕಾರ್ಡುದಾರ, ಅವರ ಸಂಗಾತಿ, 25 ವರ್ಷದ ಒಳಗಿನ ಮಕ್ಕಳು ಮತ್ತು 4 ಪೋಷಕರು (ತಂದೆ, ತಾಯಿ, ಅತ್ತೆ ಮತ್ತು ಮಾವ) ₹900/-. ಇದೊಂದು ಹೆಚ್ಚುವರಿ ಲಾಭವಾಗಿದೆ. 2 ವರ್ಷದ ಯೋಜನೆಯಲ್ಲಿ ಒಬ್ಬರಿಗೆ ₹ 600/-, ಕುಟುಂಬಕ್ಕೆ ₹ 950/- ಮತ್ತು ಕೌಟಂಬಿಕ ಪ್ಲಸ್ ಯೋಜನೆಗೆ ₹1100/- ಆಗಿರುತ್ತದೆ.
ಮಣಿಪಾಲ, ಮಂಗಳೂರು ಮತ್ತು ಇತರ ಆಸ್ಪತ್ರೆಗಳಲ್ಲಿನ ರಿಯಾಯಿತಿ ಸೌಲಭ್ಯ ಮತ್ತು ಸ್ವಯಂ ನೋಂದಾವಣೆಗೆ, www.manipalhealthcard.com ಗೆ ಭೇಟಿ ನೀಡಿ ಅಥವಾ 9980854700 / 08202923748 ಅನ್ನು ಸಂಪರ್ಕಿಸಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Gangolli: ಬೈಕ್‌ಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ
Udupi: ಪಿಕಪ್ ವಾಹನ ಢಿಕ್ಕಿ ಹೊಡೆದು ವ್ಯಕ್ತಿ ಗಾಯ
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.