Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ
Team Udayavani, Nov 26, 2024, 10:27 AM IST
ನೆಲಮಂಗಲ: ತಾಲೂಕಿನ ಕಂಬಾಳು ಗೊಲ್ಲರಹಟ್ಟಿ ಹಾಗೂ ಅಕ್ಕಪಕ್ಕದ ಗ್ರಾಮಗಳ ಜನರ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಕ್ಯಾಮೆರಾ ಕಣ್ಣಿಗೆ ಬೀಳದೆ ನೇರವಾಗಿ ಬೋನಿಗೆ ಬಿದ್ದಿದೆ. ವಿಧಿವಿಜ್ಞಾನ ಪ್ರಯೋಗಾಲಯದ ವರದಿ ನಂತರ ನ.17ರಂದು ಗೊಲ್ಲರಹಟ್ಟಿ ಕರಿಯಮ್ಮಳನ್ನು ಬಲಿಪಡೆದುಕೊಂಡ ನರಭಕ್ಷಕ ಚಿರತೆ ಇದೇನಾ ಎಂಬುದನ್ನು ನಿಖರವಾಗಿ ತಿಳಿಯಬಹುದಾಗಿದೆ.
ತಾಲೂಕಿನಲ್ಲಿರುವ ದಕ್ಷಿಣಕಾಶಿ ಶಿವಗಂಗೆ ಬೆಟ್ಟದ ತಪ್ಪಲಿನಲ್ಲಿರುವ ಶ್ರೀಮುದ್ವೀರೇಶ್ವರ ದೇವಾಲಯದ ಬಳಿಯ ಗಂಜಿಕಟ್ಟೆ ಎಂಬಲ್ಲಿ ಅರಣ್ಯ ಇಲಾಖೆ ಅಧಿ ಕಾರಿಗಳು ಇರಿಸಿದ್ದ ಬೋನಿಗೆ ಚಿರತೆ ಸೋಮವಾರ ಬೆಳಗ್ಗೆ 8.30 ಗಂಟೆಯಲ್ಲಿ ಬಿದ್ದಿದೆ. ರೈತ ಮಹಿಳೆ ಕರಿಯಮ್ಮ ಎಂಬುವರು ಗೋವುಗಳಿಗೆ ಹುಲ್ಲು ಕಟಾವು ಮಾಡುವಾಗ ಚಿರತೆ ದಾಳಿ ಮಾಡಿ, ಮಹಿ ಳೆಯ ರುಂಡ ತಿಂದಿತ್ತು. ನಂತರ ನ.18ರಿಂದ ಕಾರ್ಯಾ ಚರಣೆ ಆರಂಭಿಸಿದ್ದ ಹತ್ತಾರು ಮಂದಿ ಅರಣ್ಯ ಸಿಬ್ಬಂದಿ ಸತತ 8 ದಿನಗಳ ಕಾರ್ಯಾಚರಣೆ ಯಿಂದಾಗಿ ನ.25 ರಂದು ಅಂತಿಮವಾಗಿ ಚಿರತೆ ಯೊಂದು ಬೋನಿಗೆ ಬಿದ್ದಿದ್ದು, ಸ್ಥಳೀಯರು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಸ್ವಲ್ಪ ನಿಟ್ಟುಸಿರು ಬಿಟ್ಟಂತಾಗಿದೆ. ಚಿರತೆ ಸೆರೆಗೆ ಸಂಬಂಧಿಸಿ 80 ಜನರ ತಂಡ ಕಾರ್ಯಾಚರಣೆ ಕೈಗೊಂಡಿತ್ತು. 10 ಬೋನು, 18 ಸಿಸಿ ಕ್ಯಾಮೆರಾ ಅಳವಡಿಸಿದ್ದರೂ ಪತ್ತೆಯಾಗಿರಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Mangaluru: ಪಿ.ಎಂ. ರಾವ್ ರಸ್ತೆಯಲ್ಲಿ ಮತ್ತೆ ಎಲ್ಲೆಂದರಲ್ಲಿ ವಾಹನ ನಿಲುಗಡೆ
Thirthahalli: ತುಂಗಾ ಕಮಾನು ಸೇತುವೆ ಬಳಿ ಪತ್ತೆಯಾಗಿದ್ದ ಅಸ್ತಿ ಪಂಜರ ತಂದು ಹಾಕಿದ್ಯಾರು!!?
IPL: ಗೊಂದಲದಲ್ಲಿ ಮರಿ ಸೆಹ್ವಾಗ್ ನನ್ನು ಖರೀದಿಸಿದ ಆರ್ ಸಿಬಿ; ಯಾರು ಈ ಸ್ವಸ್ತಿಕ್ ಚಿಕಾರ
Kundapura: ರಾಷ್ಟ್ರೀಯ ಹೆದ್ದಾರಿಯ ಅರಾಟೆ ಹಳೆ ಸೇತುವೆಯಲ್ಲಿ ಸಂಚಾರ ಸ್ಥಗಿತ
Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.