Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
Team Udayavani, Nov 26, 2024, 10:33 AM IST
ಬೆಂಗಳೂರು: ಪ್ರವಾಸಕ್ಕಾಗಿ ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳನ್ನು ಅಪಹರಿಸಿ ಗೃಹ ಬಂಧನದಲ್ಲಿರಿಸಿ 50 ಸಾವಿರ ರೂ. ಸುಲಿಗೆ ಮಾಡಿದ್ದ ಮೂವರು ಆರೋಪಿಗಳನ್ನು ಚಂದ್ರಾ ಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಚಂದ್ರಾಲೇಔಟ್ ನಿವಾಸಿಗಳಾದ ನಿತಿನ್ (32), ಶಶಾಂಕ್(34) ಮತ್ತು ವಿನೋದ್(30) ಬಂಧಿತರು. ಆರೋಪಿಗಳಿಂದ 30 ಸಾವಿರ ರೂ. ನಗದು ವಶಕ್ಕೆ ಪಡೆಯಲಾಗಿದೆ. ಆರೋಪಿಗಳು ಕಳೆದ ವಾರ ಐವರು ವಿದ್ಯಾರ್ಥಿಗಳನ್ನು ಅಪಹರಿಸಿ 50 ಸಾವಿರ ರೂ. ಸುಲಿಗೆ ಮಾಡಿದ್ದರು. ಈ ಸಂಬಂಧ ಮನೋಜ್ ಬನಿವಾಲ್ ಎಂಬ ವಿದ್ಯಾರ್ಥಿ ದೂರು ನೀಡಿದ್ದ ಎಂದು ಪೊಲೀಸರು ಹೇಳಿದರು.
ನಗರದ ಖಾಸಗಿ ಕಾಲೇಜಿನಲ್ಲಿ ಬಿ.ಕಾಂ ವ್ಯಾಸಂಗ ಮಾಡುತ್ತಿರುವ ಮನೋಜ್ ಬನಿವಾಲ್ ಸೇರಿ ಐವರು ಪಶ್ಚಿಮ ಬಂಗಾಳ ಮೂಲದ ವಿದ್ಯಾರ್ಥಿಗಳು, ಮಡಿಕೇರಿಗೆ ಹೋಗಲು ನ.17ರಂದು ಆರೋಪಿ ವಿನೋದ್ ಮೂಲಕ ದಿನಕ್ಕೆ 2500 ರೂ. ಬಾಡಿಗೆ ಹಾಗೂ 500 ರೂ. ಕಮಿಷನ್ ಸೇರಿ 3000 ರೂ.ಗೆ ಒಂದು ಕಾರು ಬಾಡಿಗೆ ಪಡೆದುಕೊಂಡಿದ್ದರು.
ಈ ವೇಳೆ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ 100 ಕಿ.ಮೀ. ವೇಗದಲ್ಲಿ ಹೋಗಬಾರದು ಎಂದು ಷರತ್ತು ವಿಧಿಸಲಾಗಿತ್ತು. ಶ್ಯೂರಿಟಿಗಾಗಿ ವಿದ್ಯಾರ್ಥಿಯೊಬ್ಬನ ಲ್ಯಾಪ್‌ಟಾಪ್ ಮತ್ತು ಆಧಾರ್ ಕಾರ್ಡ್ ಹಾಗೂ ಕಾಲೇಜಿನ ಗುರುತಿನ ಚೀಟಿ ಪಡೆದುಕೊಂಡಿದ್ದರು. ಷರತ್ತಿಗೆ ಒಪ್ಪಿದ ವಿದ್ಯಾರ್ಥಿಗಳು 2 ದಿನಗಳ ಕಾಲ ಪ್ರವಾಸ ಮುಗಿಸಿಕೊಂಡು ಬಂದು, ವಾಪಸ್ ಬರುವಾಗ ಹೆದ್ದಾರಿಯಲ್ಲಿ 120 ಕಿ.ಮೀ. ವೇಗದಲ್ಲಿ ಕಾರು ಚಾಲನೆ ಮಾಡಿದ್ದಾರೆ.
ಬಳಿಕ ಕಾರು ವಾಪಸ್ ಕೊಡಲು ನಾಗರಬಾವಿಯ ಮಂಜುನಾಥ ಎಂಟರ್‌ಪ್ರೈಸಸ್ ಕಚೇರಿಗೆ ಬಂದಿದ್ದಾರೆ. ಈ ವೇಳೆ ವಿನೋದ್, ನೀವುಗಳು ಆರೇಳು ಬಾರಿ 120 ಕಿ.ಮೀ. ವೇಗದಲ್ಲಿ ಕಾರು ಚಾಲನೆ ಮಾಡಿ, ಸಂಚಾರ ನಿಯಮ ಉಲ್ಲಂಘನೆ ಮಾಡಿರುವುದು ಗೊತ್ತಾಗಿದೆ. ಅದಕ್ಕಾಗಿ 1.20 ಲಕ್ಷ ರೂ. ಕೊಡಬೇಕು ಎಂದು ಬೇಡಿಕೆ ಇಟ್ಟಿದ್ದಾರೆ.
ಅದನ್ನು ನಿರಾಕರಿಸಿದ ವಿದ್ಯಾರ್ಥಿಗಳು, ಅಷ್ಟೊಂದು ದಂಡ ಆಗಿಲ್ಲ. ಬೇಕಾದರೆ, ನಾಲ್ಕೈದು ಸಾವಿರ ರೂ. ಕೊಡುತ್ತೇವೆ ಸಂಚಾರ ನಿಯಮ ಉಲ್ಲಂಘನೆಗೆ ಸಾಕ್ಷಿ ತೋರಿಸುವಂತೆ ಕೇಳಿದ್ದಾರೆ. ಆಗ ವಿನೋದ್, ತನ್ನ ಇತರೆ ಇಬ್ಬರು ಸ್ನೇಹಿತರನ್ನು ಸ್ಥಳಕ್ಕೆ ಕರೆಸಿಕೊಂಡು ಐವರು ವಿದ್ಯಾರ್ಥಿ ಗಳನ್ನು ಅಪಹರಿಸಿ ಚಂದ್ರಾಲೇಔಟ್‌ನ ಮನೆಯೊಂದರಲ್ಲಿ ಒಂದು ದಿನ ಕೂಡಿ ಹಾಕಿ, ಹಲ್ಲೆ ನಡೆಸಿದ್ದಾರೆ.
ಬಳಿಕ ಸ್ನೇಹಿತರ ಮೂಲಕ 50 ಸಾವಿರ ರೂ. ವರ್ಗಾವಣೆ ಮಾಡಿಕೊಂಡಿದ್ದ ವಿದ್ಯಾರ್ಥಿಗಳನ್ನು ಸಮೀಪದ ಪರಿಚಯಸ್ಥ ಅಂಗಡಿಗೆ ಕರೆದೊಯ್ದು 50 ಸಾವಿರ ರೂ. ಅನ್ನು ಪಡೆದ ಆರೋಪಿಗಳು, ತಡರಾತ್ರಿ ವಿದ್ಯಾರ್ಥಿಗಳನ್ನು ಮನೆ ಬಳಿ ಡ್ರಾಪ್ ಮಾಡಿದ್ದರು. ಈ ವೇಳೆ ವಿದ್ಯಾರ್ಥಿಗಳ ಮೊಬೈಲ್, ಲ್ಯಾಪ್‌ಟಾಪ್‌ಗ್ಳನ್ನು ಕಸಿದಕೊಂಡು ಪರಾರಿಯಾಗಿದ್ದರು ಎಂದು ವಿದ್ಯಾರ್ಥಿ ಗಳು ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು. ಚಂದ್ರಾಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.