ದೋಟಿಹಾಳ: ಉದ್ಘಾಟನೆ ಕಾಣದೆ ಅಂಗನವಾಡಿ ಕಟ್ಟಡ ಅನಾಥ
Team Udayavani, Nov 26, 2024, 6:03 PM IST
ಉದಯವಾಣಿ ಸಮಾಚಾರ
ದೋಟಿಹಾಳ: ಸರಕಾರ ಮಕ್ಕಳ ಶಿಕ್ಷಣಕ್ಕಾಗಿ ಕೋಟ್ಯಂತರ ರೂ. ಖರ್ಚು ಮಾಡುತ್ತದೆ. ಅದು ಸರಿಯಾದ ರೀತಿಯಲ್ಲಿ ಬಳಕೆ ಆಗುತ್ತಿದೆಯೋ ಇಲ್ಲವೋ ಎಂದು ಮಾತ್ರ ಗಮನ ಹರಿಸುವುದಿಲ್ಲ. ಇದಕೊಂದು ತಾಜಾ ಉದಾಹರಣೆ ಇಲ್ಲಿದೆ. ಅಂಗನವಾಡಿ ಕಟ್ಟಡ ನಿರ್ಮಾಣಗೊಂಡು ಎರಡ್ಮೂರು ವರ್ಷಗಳೇ ಕಳೆದಿದೆ. ಆದರೆ ಇದುವರೆಗೂ ಉದ್ಘಾಟನೆಯಾಗಿಲ್ಲ.
ಕಿಲ್ಲಾರಹಟ್ಟಿ ಗ್ರಾಪಂ ವ್ಯಾಪ್ತಿಯ ಕಿಡದೂರು ಗ್ರಾಮದಲ್ಲಿ 2021-22ನೇ ಸಾಲಿನಲ್ಲಿ ನರೇಗಾ ಯೋಜನೆಯಡಿ ಅಂಗನವಾಡಿ ಕಟ್ಟಡ ನಿರ್ಮಾಣ ಮಾಡಲಾಗಿದೆ. ಉದ್ಘಾಟನೆಗೊಂಡು ಮಕ್ಕಳ ಶಿಕ್ಷಣಕ್ಕೆ ಅನುಕೂಲವಾಗಬೇಕಾಗಿದ್ದ ಕಟ್ಟಡ ಅಧಿಕಾರಿಗಳು-ಗುತ್ತಿಗೆದಾರರ ಸಮನ್ವಯ ಕೊರತೆಯಿಂದ ಅನಾಥವಾಗಿದೆ. ಸದ್ಯ ಕಟ್ಟಡದ ಸುತ್ತಮುತ್ತಲು ಜಾಲಿ ಮುಳ್ಳು ಕಂಠಿ ಬೆಳೆದು ನಿಂತಿದೆ. ಸರಕಾರದ ಲಕ್ಷಾಂತರ ರೂಪಾಯಿ ಯೋಜನೆ ಹಾದಿ ತಪ್ಪುತ್ತಿದೆ.
ಸದ್ಯ ಗ್ರಾಮದಲ್ಲಿರುವ ಅಂಗನವಾಡಿ ಕೇಂದ್ರದ ಹಳೇ ಕಟ್ಟಡ ಚಿಕ್ಕದಿದ್ದುು ಮಕ್ಕಳು ಕುಳಿತುಕೊಳ್ಳಲು ಸಮಸ್ಯೆಯಾಗುತ್ತಿದೆ. ಕೇಂದ್ರಕ್ಕೆ ಆಗಮಿಸುವ ಗರ್ಭಿಣಿ-ಬಾಣಂತಿಯರಿಗೆ ತೊಂದರೆಯಾಗುತ್ತಿದೆ. ಕಿಟಕಿಗಳು ಕಿತ್ತುಹೋಗಿವೆ. ಬಾಗಿಲು ದುರಸ್ತಿಗೊಳಿಸಬೇಕಿದೆ. ಮಳೆ ಬಂದರೆ ಕಟ್ಟಡ ತೊಟ್ಟಿಕ್ಕುತ್ತಿದೆ. ವಿಷ ಜಂತುಗಳ ಕಾಟ ಹೆಚ್ಚಾಗಿ ಕಾಡುತ್ತಿದೆ. ನೂತನ ಕಟ್ಟಡವನ್ನು ಉದ್ಘಾಟನೆ ಮಾಡಿದರೆ ಮಕ್ಕಳಿಗೆ ಅನುಕೂಲವಾಗುತ್ತದೆ ಎಂದು ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಉಮಾದೇವಿ ಹೇಳಿದರು.
2021-22ನೇ ಸಾಲಿನ ನರೇಗಾ ಯೋಜನೆಯಲ್ಲಿ 14 ಲಕ್ಷ ರೂ. ಅನುದಾನದಲ್ಲಿ ಅಂಗನವಾಡಿ ಕಟ್ಟಡ, ಕಾಮನ್ ವರ್ಕ್ ಶೆಡ್ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದೆ. ಅಂಗನವಾಡಿ ಕಟ್ಟಡ ಮಾತ್ರ ನಿರ್ಮಾಣ ಮಾಡಿದ ಕಾರಣ 6 ಲಕ್ಷ ರೂ. ಮಾತ್ರ ನೀಡಿದ್ದಾರೆ. ಉಳಿದ ಹಣ ನೀಡಿಲ್ಲ. ಹೀಗಾಗಿ ಗುತ್ತಿಗೆದಾರ ಪೂರ್ಣ ಅನುದಾನ ನೀಡಿದ ಮೇಲೆ ಕಟ್ಟಡ ಉದ್ಘಾಟನೆ ಎಂದು ಹೇಳುತ್ತಿದಾನೆ. ಇದರ ಬಗ್ಗೆ ಹಿರಿಯ ಅಧಿಕಾರಿಗಳ ಜೊತೆ ಮಾತನಾಡುತ್ತೇನೆ ಎಂದು ಪಿಡಿಒ ಶಂಕ್ರಪ್ಪ ಹೇಳಿದರು.
ಇನ್ನಾದರೂ ಇದರ ಕಡೆ ಗಮನಹರಿಸಿ ಸೂಕ್ತ ಕ್ರಮ ಕೈಗೊಂಡು ಸರ್ಕಾರದ ಯೋಜನೆ ಸದುಪಯೋಗ ಆಗುವಂತೆ ನೋಡಿಕೊಳ್ಳುತ್ತಾರೋ ಇಲ್ಲವೋ ಎಂಬುವುದು ಕಾದುನೋಡಬೇಕು.
2021-22ನೇ ಸಾಲಿನಲ್ಲಿ ನರೇಗಾ ಯೋಜನೆಯಲ್ಲಿ ಅಂಗನವಾಡಿ ಕಟ್ಟಡಕ್ಕೆ 8 ಲಕ್ಷ ರೂ. ನೀಡಲಾಗಿತ್ತು. ಒಂದು ವೇಳೆ 14 ಲಕ್ಷ ರೂ.ಗೆ ಅಂಗನವಾಡಿ ಕಟ್ಟಡ ಕಾಮನ್ ವರ್ಕ್ ಶೆಡ್ ನಿರ್ಮಾಣ ಅನುಮೋದನೆ ನೀಡಿದ್ದರೆ ಕಿಲ್ಲಾರಹಟ್ಟಿ ಗ್ರಾಪಂ ಅಂದಿನ ಕ್ರಿಯಾಯೋಜನೆ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುತ್ತೇನೆ.
ಪ್ರಕಾಶ, ಜಿಪಂ ಯೋಜನಾ ನಿರ್ದೇಶಕ, ಕೊಪ್ಪಳ
ಕಿಡದೂರು ಗ್ರಾಮದಲ್ಲಿ ನರೇಗಾ ಯೋಜನೆಯಲ್ಲಿ ಅಂಗನವಾಡಿ ಕಟ್ಟಡ ನಿರ್ಮಾಣವಾಗಿದೆ. ಅನುದಾನ ನೀಡದ ಕಾರಣ
ಗುತ್ತಿಗೆದಾರರು ಕಟ್ಟಡವನ್ನು ಇನ್ನೂ ಹಸ್ತಾಂತರ ಮಾಡಿಲ್ಲ. ಹೀಗಾಗಿ ಹೊಸ ಕಟ್ಟಡ ಮಕ್ಕಳ ಶಿಕ್ಷಣಕ್ಕೆ ಅನುಕೂಲವಾಗದೆ ಹಾಳುಗುತ್ತಿದೆ.
*ಯಲ್ಲಮ್ಮ ಹಂಡಿ, ಸಿಡಿಪಿಒ, ಕುಷ್ಟಗಿ
ಕಿಡದೂರು ಗ್ರಾಮದ ಅಂಗನವಾಡಿ ಕೇಂದ್ರದ ಕಟ್ಟಡ ನಿರ್ಮಾಣಗೊಂಡು 2-3 ವರ್ಷ ಕಳೆದಿದ್ದೆ. ಇದರ ಬಗ್ಗೆ ಈಗಾಗಲೇ
ಚರ್ಚೆ ಮಾಡಲಾಗಿದೆ. ಹಿರಿಯ ಅಧಿಕಾರಿಗಳ ಜೊತೆ ಮಾತನಾಡಿ ಸೂಕ್ತ ಕ್ರಮ ಕೈಗೊಳ್ಳುತ್ತೇವೆ.
*ಪಂಪಾಪತಿ ಹಿರೇಮಠ,
ತಾಪಂ ಇಒ, ಕುಷ್ಟಗಿ
*ಮಲ್ಲಿಕಾರ್ಜುನ ಮದಿಕೇರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.