Pakistan: 6 ಮಂದಿ ಭದ್ರತಾ ಸಿಬ್ಬಂದಿ ಸಾವು, ಕಂಡಲ್ಲಿ ಗುಂಡು ಆದೇಶ
ಸೇನೆಗೂ ಜಗ್ಗದೆ ಇಸ್ಲಾಮಾಬಾದ್ನಲ್ಲಿ ಕಲ್ಲತೂರಾಟ
Team Udayavani, Nov 26, 2024, 9:00 PM IST
ಇಸ್ಲಾಮಾಬಾದ್: ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಬೆಂಬಲಿಗರು ನಡೆಸುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಮಂಗಳವಾರದ ವೇಳೆಗೆ ಘಟನೆಯಲ್ಲಿ 6 ಮಂದಿ ಭದ್ರತಾ ಸಿಬ್ಬಂದಿ ಅಸುನೀಗಿದ್ದಾರೆ. ಪರಿಸ್ಥಿತಿ ಕೈ ಮೀರಿರುವ ಹಿನ್ನೆಲೆಯಲ್ಲಿ ಪಾಕ್ ಸೇನೆ ಮಧ್ಯ ಪ್ರವೇಶಿಸಿದ್ದು, ಪ್ರತಿಭಟನಾಕಾರರ ಹತ್ತಿಕ್ಕಲು ಕಂಡಲ್ಲಿ ಗುಂಡು ಆದೇಶ ಹೊರಡಿಸಿದೆ.
ಕಳೆದ ವರ್ಷ ನಡೆದಿದ್ದ ಚುನಾವಣೆಯಲ್ಲಿ ಅಕ್ರಮ ನಡೆದಿದೆ, ಪಾಕಿಸ್ತಾನ್ -ತಹ್ರೀಕ್-ಇ-ಇನ್ಸಾಫ್ (ಪಿಟಿಐ) ಕಾರ್ಯಕರ್ತರ ಬಂಧನ ಖಂಡಿಸಿ ಪ್ರತಿಭಟನೆ ನಡೆಸಲು ಕಾರ್ಯಕರ್ತರಿಗೆ ಇಮ್ರಾನ್ ಕರೆ ನೀಡಿದ್ದರು.
ರಸ್ತೆಗಳಲ್ಲಿ ಅಡ್ಡಲಾಗಿ ಇಟ್ಟಿರುವ ಕಂಟೈನರ್ಗಳನ್ನು ಹತ್ತಿ ಕಲ್ಲು ತೂರಾಟ ನಡೆಸಿದ್ದಾರೆ. ರಾಷ್ಟ್ರಪತಿ ಭವನ, ಪ್ರಧಾನಿ ಕಚೇರಿ, ಸರ್ಕಾರಿ ಸಂಸ್ಥೆಗಳಿರುವ ಡಿ-ಚೌಕ್ಗೆ ಮುತ್ತಿಗೆ ತಡೆಯಲು ಸೇನೆ ಮಧ್ಯ ಪ್ರವೇಶಿಸಿದೆ. ಸ್ಥಳೀಯಾಡಳಿತವು ಇಸ್ಲಾಮಾಬಾದ್, ರಾವಲ್ಪಿಂಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ, ಅಂತರ್ಜಾಲ ಸ್ಥಗಿತಗೊಳಿಸಿದೆ.
ಇಮ್ರಾನ್ ಖಾನ್ ಬಿಡುಗಡೆವರೆಗೂ ರಾಜಧಾನಿ ತೊರೆಯುವುದಿಲ್ಲ ಎಂದು ಪ್ರತಿಭಟನಾಕಾರರು ಪಟ್ಟು ಹಿಡಿದಿದ್ದಾರೆ. ಇಮ್ರಾನ್ ಖಾನ್ ಹೋರಾಟಕ್ಕೆ ಮಣಿಯುವುದಿಲ್ಲ ಎಂದು ಪಾಕ್ ಸರ್ಕಾರ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bangladeshದಲ್ಲಿ ಮುಂದುವರಿದ ಸಂಘರ್ಷ, ಮೂರು ಹಿಂದೂ ದೇವಾಲಯ ಧ್ವಂಸ
Nigeria: ಮುಳುಗಿದ 200 ಪ್ರಯಾಣಿಕರಿದ್ದ ಬೋಟ್; ಮಹಿಳೆಯರು ಸೇರಿ ಹಲವರ ಸಾವು
Donald Trump ಸುರಕ್ಷಿತವಾಗಿಲ್ಲ: ರಷ್ಯಾ ಅಧ್ಯಕ್ಷ ಪುತಿನ್ ಆತಂಕ
Gold; ಜಗತ್ತಿನ ಅತಿದೊಡ್ಡ ಚಿನ್ನ ನಿಕ್ಷೇಪ ಚೀನದಲ್ಲಿ ಪತ್ತೆ!
Russia 200 ಕ್ಷಿಪಣಿ, ಡ್ರೋನ್ಗಳಿಂದ ದಾಳಿ: ಕತ್ತಲೆಯಲ್ಲಿ ಉಕ್ರೇನ್ನ 10 ಲಕ್ಷ ಮನೆ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.