Andhra Pradesh: ಅದಾನಿ ಗ್ರೂಪ್ ಜತೆಗಿನ ಒಪ್ಪಂದ ರದ್ದತಿಗೆ ಆಂಧ್ರಪ್ರದೇಶ ಚಿಂತನೆ?
Team Udayavani, Nov 27, 2024, 6:30 AM IST
ನವದೆಹಲಿ: ಸೌರ ಯೋಜನೆ ಗುತ್ತಿಗೆಗೆ ಅದಾನಿ ಕಂಪನಿ 2029 ಕೋಟಿ ರೂ. ಲಂಚ ನೀಡಿದೆ ಎಂಬ ಅಮೆರಿಕದ ಆರೋಪದ ಬಳಿಕ ಸಾಲುಸಾಲು ಸಮಸ್ಯೆ ಕಂಪನಿಯನ್ನು ಕಾಡಲು ಆರಂಭಿಸಿದೆ. ಅದಾನಿ ಕಂಪನಿ ಜತೆ ಮಾಡಿಕೊಂಡಿರುವ ಒಪ್ಪಂದದ ರದ್ದತಿಯ ಬಗ್ಗೆ ಪರಿಶೀಲನೆ ನಡೆಸುವುದಾಗಿ ಆಂಧ್ರಪ್ರದೇಶ ಸರ್ಕಾರ ಹೇಳಿದೆ.
ಜಗನ್ಮೋಹನ್ ರೆಡ್ಡಿ ಸರ್ಕಾರ ಅಧಿಕಾರದಲ್ಲಿದ್ದ ಸಮಯದಲ್ಲಿ ಅದಾನಿ ಜತೆ ಒಪ್ಪಂದ ಮಾಡಿಕೊಳ್ಳಲಾಗಿತ್ತು. ಅವಕಾಶವಿದ್ದರೆ ಒಪ್ಪಂದ ರದ್ದು ಮಾಡಲಾಗುತ್ತದೆ ಎಂದು ಆಂಧ್ರಪ್ರದೇಶ ವಿತ್ತ ಸಚಿವ ಪಯ್ನಾವುಲಾ ಕೇಶವ್ ಹೇಳಿದ್ದಾರೆ.
ಇದೇ ವೇಳೆ, ಅದಾನಿ ಗ್ರೂಪ್ ವಿರುದ್ಧ ಅಮೆರಿಕ ಮಾಡಿರುವ ಲಂಚ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎನಿಸಿದರೆ ಟ್ರಂಪ್ ಅಧಿಕಾರಕ್ಕೆ ಏರಿದ ಬಳಿಕ ಪ್ರಕರಣ ರದ್ದಾಗಲಿದೆ ಎಂದು ಅಮೆರಿಕದ ವಕೀಲರೊಬ್ಬರು ಹೇಳಿದ್ದಾರೆ. ಪ್ರತಿಯೊಬ್ಬ ಅಧ್ಯಕ್ಷರು ತಮ್ಮದೇ ಆದ ತಂಡವನ್ನು ಹೊಂದಿದ್ದು, ಅವರು ಪ್ರತಿ ಪ್ರಕರಣದ ಪರಿಶೀಲನೆ ನಡೆಸುತ್ತಾರೆ. ಈ ವೇಳೆ ಆರೋಪದಲ್ಲಿ ಸತ್ಯಾಂಶವಿಲ್ಲ ಎಂದು ಗೊತ್ತಾದರೆ ಕೇಸು ರದ್ದಾಗಲಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gautam Adani, ಸೋದರಳಿಯ ಸಾಗರ್ ವಿರುದ್ಧ ಲಂಚದ ಆರೋಪ ಇಲ್ಲ: ಅದಾನಿ ಗ್ರೂಪ್
Cyclone Fengal: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ತಮಿಳುನಾಡಲ್ಲಿ 3 ದಿನ ಭಾರೀ ಮಳೆ
Ayodhya: ರಾಮಮಂದಿರ ಪ್ರಾಣಪ್ರತಿಷ್ಠೆ ಸಂಭ್ರಮ ಜ.22ರ ಬದಲು 11ಕ್ಕೆ!
Cyber Fraud: 1 ತಿಂಗಳು ವೃದ್ದೆ ಡಿಜಿಟಲ್ ಅರೆಸ್ಟ್: 3.8 ಕೋಟಿ ಲೂಟಿ ಹೊಡೆದ ಕಳ್ಳರು!
ರಾಹುಲ್ ಬ್ರಿಟನ್ ಪೌರತ್ವದ ಬಗ್ಗೆ ಪರಿಶೀಲಿಸುತ್ತಿದ್ದೇವೆ: ಹೈಕೋರ್ಟ್ಗೆ ಸರ್ಕಾರ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.