Congress: ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಸ್ವರ ಎತ್ತಿದರೆ ಶಿಸ್ತುಕ್ರಮ: ಡಿ.ಕೆ.ಶಿವಕುಮಾರ್
ಶಾಸಕ ಗವಿಯಪ್ಪಗೆ ವಿವರಣೆ ಕೇಳಿ ಶೋಕಾಸ್ ನೋಟಿಸ್: ಉಪಮುಖ್ಯಮಂತ್ರಿ
Team Udayavani, Nov 27, 2024, 7:40 AM IST
ಬೆಂಗಳೂರು: ಪಕ್ಷದ ಯಾವುದೇ ಶಾಸಕರು ಗ್ಯಾರಂಟಿ ಯೋಜನೆಗಳನ್ನು ಪ್ರಶ್ನಿಸಬಾರದು. ಒಂದು ವೇಳೆ ಪ್ರಶ್ನಿಸಿದರೆ ಅಂಥವರ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀಕ್ಷ್ಣ ಎಚ್ಚರಿಕೆ ನೀಡಿದ್ದಾರೆ. “ಗ್ಯಾರಂಟಿ ನಿಲ್ಲಿಸಿ ಅನುದಾನ ಕೊಡಿ’ ಎಂದು ಕಾಂಗ್ರೆಸ್ ಶಾಸಕ ಗವಿಯಪ್ಪ ಹೇಳಿದ್ದರೆ ಅವರಿಗೆ ಶೋಕಾಸ್ ನೋಟಿಸ್ ನೀಡುವುದಾಗಿಯೂ ಹೇಳಿದ್ದಾರೆ.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, “ಶಾಸಕ ಗವಿಯಪ್ಪ ಗ್ಯಾರಂಟಿ ನಿಲ್ಲಿಸಿ, ಅನುದಾನ ಕೊಡಿ ಅಂದಿದ್ದಾರೆ ಎಂದು ನನಗೆ ಅನ್ನಿಸುವುದಿಲ್ಲ. ಒಂದು ವೇಳೆ ಆ ರೀತಿ ಹೇಳಿಕೆ ನೀಡಿದ್ದರೆ, ವಿವರಣೆ ಕೇಳಿ ನೋಟಿಸ್ ನೀಡಲಾಗುವುದು’ ಎಂದು ಸ್ಪಷ್ಟಪಡಿಸಿದರು. ಅನರ್ಹರು ಗ್ಯಾರಂಟಿಗಳ ಲಾಭ ಪಡೆಯುತ್ತಿದ್ದರೆ, ಪರಿಶೀಲಿಸಿ ಸರಿಪಡಿಸಲಾಗುವುದು. ಈ ಯೋಜನೆಗಳಿಂದ ಪ್ರತೀ ಕ್ಷೇತ್ರಕ್ಕೆ 250 ಕೋಟಿ ರೂ.ಗಳಷ್ಟು ಹಣ ಹೋಗುತ್ತಿದೆ. ಇದು ಆ ಕ್ಷೇತ್ರದ ಜನರ ಅಭಿವೃದ್ಧಿಯಲ್ಲವೇ? ಅಭಿವೃದ್ಧಿ ಕಾರ್ಯಗಳಿಗೂ ನಾವು ಅನುದಾನ ನೀಡುತ್ತಿದ್ದೇವೆ ಎಂದರು.
“ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯಲ್ಲಿ ಅನುದಾನ ಕಡಿಮೆ ಸಿಕ್ಕಿದೆ ಎಂದು ಗವಿಯಪ್ಪ ಅವರು ಸಿಎಂಗೆ ಪತ್ರ ಬರೆದದ್ದು ನನಗೆ ಗೊತ್ತು. ಗ್ಯಾರಂಟಿ ನಿಲ್ಲಿಸಬೇಕು ಎಂದು ಹೇಳಿರುವುದು ಗೊತ್ತಿಲ್ಲ. ಡಾ| ನಂಜುಂಡಪ್ಪ ವರದಿ ಪ್ರಕಾರ ವೈಜ್ಞಾನಿಕವಾಗಿ ಅನುದಾನ ಹಂಚಿಕೆ ಆಗುತ್ತದೆ.” – ಪ್ರಿಯಾಂಕ್ ಖರ್ಗೆ, ಗ್ರಾಮೀಣಾಭಿವೃದ್ಧಿ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ
Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್
BJP Internal Dispute: ಶಾಸಕ ಬಸನಗೌಡ ಯತ್ನಾಳ್ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು
Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ
Congress Guarantee: ಎರಡು-ಮೂರು ಗ್ಯಾರಂಟಿ ನಿಲ್ಲಿಸಿ: ಎಚ್.ಆರ್. ಗವಿಯಪ್ಪ ಒತ್ತಾಯ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Artificial Intelligence: ಎಐ ಯುಗದಲ್ಲಿ ನಾವು ನೀವು?
Pushpa 2 Movie: ವರ್ಷದ ಅತೀ ಉದ್ದದ ಸಿನಿಮಾ..? ʼಪುಷ್ಪ-2ʼ ರನ್ ಟೈಮ್ ಎಷ್ಟು?
Chikkamagaluru: 92 ರ ಹರೆಯದಲ್ಲಿ ಬೀದಿಗೆ ಬಿದ್ದ ಜಿಲ್ಲಾ ಬಿಜೆಪಿ ಭೀಷ್ಮ ವಿಟ್ಠಲ ಆಚಾರ್ಯ
Kushtagi: ಬಸ್ ಸೇವೆ ಕಲ್ಪಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Gautam Adani, ಸೋದರಳಿಯ ಸಾಗರ್ ವಿರುದ್ಧ ಲಂಚದ ಆರೋಪ ಇಲ್ಲ: ಅದಾನಿ ಗ್ರೂಪ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.