Bangladesh: ಚಿನ್ಮಯ್ ಕೃಷ್ಣದಾಸ್ ಬಂಧನ ಖಂಡಿಸಿ ಪ್ರತಿಭಟನೆ: ವಕೀಲನ ಹ*ತ್ಯೆ
ಹಿಂದೂ ಸಮುದಾಯದ ಪ್ರತಿಭಟನೆ ವೇಳೆ ಸೈಫುಲ್ ಇಸ್ಲಾಂ ಹ*ತ್ಯೆ ... ಪರಿಸ್ಥಿತಿ ಇನ್ನಷ್ಟು ಬಿಗಡಾಯಿಸುವ ಸಾಧ್ಯತೆ
Team Udayavani, Nov 27, 2024, 10:42 AM IST
ಢಾಕಾ: ಇಸ್ಕಾನ್ ನ ಸನ್ಯಾಸಿ ಚಿನ್ಮಯ್ ಕೃಷ್ಣದಾಸ್ ಬ್ರಹ್ಮಚಾರಿ ಬಂಧನದ ಬಳಿಕ ಬಾಂಗ್ಲಾದೇಶದ ಕೆಲವೆಡೆ ಪ್ರತಿಭಟನೆಗಳು ಭುಗಿಲೆದ್ದಿದ್ದು, ಭದ್ರತಾ ಸಿಬಂದಿ ಮತ್ತು ಹಿಂದೂ ಸಮುದಾಯದ ನಾಯಕನ ಅನುಯಾಯಿಗಳ ನಡುವಿನ ಘರ್ಷಣೆ ವೇಳೆಯೇ ಮಂಗಳವಾರ (ನ.26) ವಕೀಲರೊಬ್ಬರು ಹತ್ಯೆಗೀಡಾಗಿದ್ದಾರೆ ಎಂದು ಸ್ಥಳೀಯ ಮಾಧ್ಯಮ ವರದಿಗಳು ತಿಳಿಸಿವೆ. ಮಧ್ಯಾಹ್ನ 3 ಗಂಟೆಗೆ, ಕಾನೂನು ಜಾರಿ ಸಂಸ್ಥೆಗಳು ಅಶ್ರುವಾಯು ಶೆಲ್‌ಗಳು ಮತ್ತು ಲಾಠಿ ಚಾರ್ಜ್ ನಡೆಸಿ ಪ್ರತಿಭಟನಾಕಾರರನ್ನು ಚದುರಿಸಿದರು.
ಚಿನ್ಮಯ್ ದಾಸ್ ಅವರನ್ನು ಬಿಡುಗಡೆ ಮಾಡಬೇಕು ಎಂದು ಸಾವಿರಾರು ಮಂದಿ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಸೈಫುಲ್ ಇಸ್ಲಾಂ ಎಂದು ಗುರುತಿಸಲಾಗಿರುವ 35 ವರ್ಷದ ವಕೀಲನ ಹತ್ಯೆ ನಡೆದಿದೆ. ಸೈಫುಲ್ ಇಸ್ಲಾಂ ಸಹಾಯಕ ಪಬ್ಲಿಕ್ ಪ್ರಾಸಿಕ್ಯೂಟರ್ ಮತ್ತು ಚಟ್ಟೋಗ್ರಾಮ್ ಜಿಲ್ಲಾ ವಕೀಲರ ಸಂಘದ ಸದಸ್ಯ ಎಂದು ಢಾಕಾ ಟ್ರಿಬ್ಯೂನ್ ಪತ್ರಿಕೆ ವರದಿ ಮಾಡಿದೆ.
ಚಿತ್ತಗಾಂಗ್ ವೈದ್ಯಕೀಯ ಕಾಲೇಜು ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗದ ಡ್ಯೂಟಿ ಡಾಕ್ಟರ್ ಡಾ ನಿಬೀದಿತಾ ಘೋಷ್ ಅವರನ್ನು ಉಲ್ಲೇಖಿಸಿ ಘರ್ಷಣೆಯಲ್ಲಿ ಇತರ ಆರು ಮಂದಿ ಗಾಯಗೊಂಡಿದ್ದಾರೆ ಎಂದು ಪತ್ರಿಕೆ ಹೇಳಿದೆ.
ಚಿತ್ತಗಾಂಗ್ ವಕೀಲರ ಸಂಘದ ಅಧ್ಯಕ್ಷ ನಜೀಮ್ ಉದ್ದೀನ್ ಚೌಧರಿ ಮಾತನಾಡಿ, ಪ್ರತಿಭಟನಾಕಾರರು ವಕೀಲರನ್ನು ಅವರ ಕೊಠಡಿಯ ಕೆಳಗಿನಿಂದ ಎಳೆದೊಯ್ದು ಹತ್ಯೆ ಮಾಡಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ.
ಕಾರಣ ತನಿಖೆ
ನಗರ ಪೊಲೀಸ್ ಉಪ ಆಯುಕ್ತ ಲಿಯಾಕತ್ ಅಲಿ ಒಂದು ಸಾವನ್ನು ದೃಢಪಡಿಸಿ, ಕಾರಣವನ್ನು ತನಿಖೆ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.ಘರ್ಷಣೆಯಲ್ಲಿ ಪತ್ರಕರ್ತರು ಸೇರಿದಂತೆ ಕನಿಷ್ಠ 10 ಜನರು ಗಾಯಗೊಂಡಿದ್ದಾರೆ ಎಂದು ಡೈಲಿ ಸ್ಟಾರ್ ಪತ್ರಿಕೆ ವರದಿ ಮಾಡಿದೆ.
ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾಕ ಹಿಂದೂ ಸಮುದಾಯದ ಹಕ್ಕಿನ ಕುರಿತು ಧ್ವನಿ ಎತ್ತಿದ್ದಕ್ಕೆ ದೇಶದ್ರೋಹ ಆರೋಪದಡಿ ಬಂಧಿಸಲ್ಪಟ್ಟಿದ್ದ ಇಸ್ಕಾನ್ ನ ಸನ್ಯಾಸಿ ಚಿನ್ಮಯ್ ಕೃಷ್ಣದಾಸ್ ಬ್ರಹ್ಮಚಾರಿಗೆ ಬಾಂಗ್ಲಾ ಕೋರ್ಟ್ ಮಂಗಳವಾರ (ನ.26) ಜಾಮೀನು ನಿರಾಕರಿಸಿದ್ದು, ದೇಶದ್ರೋಹ ಪ್ರಕರಣವನ್ನು ಎತ್ತಿಹಿಡಿದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bangladeshದಲ್ಲಿ ಇಸ್ಕಾನ್ ನಿಷೇಧಿಸಬೇಕು: ಹೈಕೋರ್ಟ್ ಗೆ ಬಾಂಗ್ಲಾದೇಶ ಸರ್ಕಾರ ಅರ್ಜಿ!
Israel ಮತ್ತು ಲೆಬನಾನ್ ನಡುವೆ ಕದನ ವಿರಾಮ ಒಪ್ಪಂದ: ಅಮೆರಿಕ ಮಧ್ಯಸ್ಥಿಕೆಗೆ ಹಸಿರು ನಿಶಾನೆ
Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ
Hard Disk: ಬಿಟ್ಕಾಯಿನ್ ಇದ್ದ ಹಾರ್ಡ್‌ಡಿಸ್ಕ್ ಎಸೆದ ಪ್ರೇಯಸಿ, ಪರದಾಟ
US: ಭಾರತದ ಮೇಲೆ ತೆರಿಗೆ ಇಲ್ಲ, ಕೆನಡಾ, ಚೀನಾಕ್ಕಷ್ಟೇ ತೆರಿಗೆ ವಿಧಿಸಿದ ಟ್ರಂಪ್!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
BBK11: ಮಂಜುಗೆ ʼಥೂ..ʼ ಎಂದು ಉಗಿದ ಮೋಕ್ಷಿತಾ; ದೊಡ್ಮನೆಯಲ್ಲಿ ಜೋರಾಯಿತು ಯೋಗ್ಯತೆ ಮಾತು
Tragedy: ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 5ವೈದ್ಯರು ಸ್ಥಳದಲ್ಲೇ ಮೃತ್ಯು
Udupi: ಇಲ್ಲಿ ಹೊಂಡಗಳೇ ಸ್ಪೀಡ್ ಬ್ರೇಕರ್‌ಗಳು!
Rainy Season: ಮೊಬೈಲ್ ಬಿಟ್ಟು ಬೇರೆ ಆಡೋಣವೇ? ಮಕ್ಕಳಿಗೆ ಹೀಗೊಂದು ಪ್ರಶ್ನೆ
Road Mishap: ಭೀಕರ ಕಾರು ಅಪಘಾತ; ಖ್ಯಾತ ನಿರ್ದೇಶಕನ ಪುತ್ರ ಸೇರಿ ಇಬ್ಬರು ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.