Keerthy Suresh: ಮದುವೆ ಸುದ್ದಿ ಬೆನ್ನಲ್ಲೇ ಆಂಟೋನಿ ಜತೆ ಫೋಟೋ ಹಂಚಿಕೊಂಡ ಕೀರ್ತಿ ಸುರೇಶ್
Team Udayavani, Nov 27, 2024, 12:23 PM IST
ಚೆನ್ನೈ: ಬಹುಭಾಷಾ ನಟಿ ಕೀರ್ತಿ ಸುರೇಶ್ (Keerthy Suresh) ಅವರ ಮದುವೆ ವಿಚಾರ ಸುದ್ದಿಯಾಗುತ್ತಿರುವ ಬೆನ್ನಲ್ಲೇ ಹೊಸ ಫೋಟೋವನ್ನು ಹಂಚಿಕೊಂಡು ತಮ್ಮ ಸಂಬಂಧವನ್ನು ಕೀರ್ತಿ ಅಧಿಕೃತಗೊಳಿಸಿದ್ದಾರೆ.
ಕಳೆದ ಕೆಲ ದಿನಗಳಿಂದ ನಟಿ ಕೀರ್ತಿ ಸುರೇಶ್ ಶೀಘ್ರದಲ್ಲೇ ಮದುವೆಯಾಗಲಿದ್ದಾರೆ ಎನ್ನುವ ಸುದ್ದಿ ಸಿನಿವಲಯದಲ್ಲಿ ಹರಿದಾಡಿದೆ. ಡಿಸೆಂಬರ್ ಎರಡನೇ ವಾರದಲ್ಲಿ ತಮ್ಮ ಬಹುಕಾಲದ ಗೆಳೆಯ ಆಂಟೋನಿ ತಟ್ಟಿಲ್ (Antony Thattil) ಅವರೊಂದಿಗೆ ಕೀರ್ತಿ ಸುರೇಶ್ ಅವರು ವಿವಾಹವಾಗಲಿದ್ದಾರೆ ಎನ್ನಲಾಗುತ್ತಿದೆ.
ಇದನ್ನೂ ಓದಿ: Pushpa 2 Movie: ವರ್ಷದ ಅತೀ ಉದ್ದದ ಸಿನಿಮಾ..? ʼಪುಷ್ಪ-2ʼ ರನ್ ಟೈಮ್ ಎಷ್ಟು?
ಆಂಟೋನಿ ದುಬೈ ಮೂಲದ ಉದ್ಯಮಿಯಾಗಿದ್ದು, ಕಳೆದ 15 ವರ್ಷಗಳಿಂದ ಕೀರ್ತಿ ಹಾಗೂ ಆಂಟೋನಿ ರಿಲೇಷನ್ ಶಿಪ್ನಲ್ಲಿದ್ದಾರೆ ಎನ್ನಲಾಗಿದೆ. ಡಿಸೆಂಬರ್ 11, 12 ರಂದು ಎರಡು ಕುಟುಂಬದವರ ಸಮ್ಮುಖದಲ್ಲಿ ಗೋವಾದಲ್ಲಿ ವಿವಾಹ ಸಮಾರಂಭ ನೆರವೇರಲಿದೆ ಎಂದು ವರದಿಯಾಗಿದೆ.
ಆಂಟೋನಿ ಹಾಗೂ ಕೀರ್ತಿ ಜತೆಯಾಗಿ ಶಾಲೆಗೆ ಹೋಗುತ್ತಿದ್ದರು. ಹೈಸ್ಕೂಲ್ನಿಂದಲೂ ಇಬ್ಬರು ಆತ್ಮೀಯ ಸ್ನೇಹಿತರಾಗಿದ್ದಾರೆ ಎನ್ನಲಾಗಿದೆ.
ಅವರ ಮದುವೆ ಸುದ್ದಿಯ ಬೆನ್ನಲ್ಲೇ ಕೀರ್ತಿ ಸೋಶಿಯಲ್ ಮೀಡಿಯಾಲ್ಲಿ ಆಂಟೋನಿ ಅವರೊಂದಿಗಿನ ಫೋಟೋವನ್ನು ಹಂಚಿಕೊಂಡಿದ್ದಾರೆ.
View this post on Instagram
ಇತ್ತೀಚೆಗಿನ ದೀಪಾವಳಿ ಹಬ್ಬದ ಸಂಭ್ರಮದಲ್ಲಿನ ಫೋಟೋ ಕೀರ್ತಿ ಹಂಚಿಕೊಂಡಿದ್ದಾರೆ. “15 ವರ್ಷ ಮತ್ತು ಕೌಂಟಿಂಗ್. ಯಾವಾಗಲೂ ಆಂಟೋನಿ x ಕೀರ್ತಿ” ಎಂದು ಬರೆದುಕೊಂಡಿದ್ದಾರೆ.
ಆ ಮೂಲಕ ತಮ್ಮ ಸಂಬಂಧದ ಬಗ್ಗೆ ಸುಳಿವು ಬಿಟ್ಟುಕೊಟ್ಟಿದ್ದಾರೆ. ಗೋವಾದಲ್ಲಿ ನಡೆಯಲಿದೆ ಎನ್ನಲಾಗುತ್ತಿರುವ ಕೀರ್ತಿ – ಆಂಟೋನಿ ಮದುವೆ ಬಗ್ಗೆ ಅಧಿಕೃತ ಮಾಹಿತಿ ಶೀಘ್ರದಲ್ಲಿ ಹೊರಬೀಳುವ ಸಾಧ್ಯತೆಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kollywood: ಲೇಡಿ ಸೂಪರ್ ಸ್ಟಾರ್ ದಂಪತಿ ವಿರುದ್ಧ ಸಿಡಿದೆದ್ದ ಧನುಷ್; ಕೇಸ್ ದಾಖಲು
Viduthalai Part 2 Trailer: ದಟ್ಟ ಕಾಡಿನಲ್ಲಿ ಸದ್ದು ಮಾಡುವ ಬಂದೂಕು – ದಮನಿತರ ಬದುಕು..
Pushpa 2 Movie: ವರ್ಷದ ಅತೀ ಉದ್ದದ ಸಿನಿಮಾ..? ʼಪುಷ್ಪ-2ʼ ರನ್ ಟೈಮ್ ಎಷ್ಟು?
Samantha Ruth Prabhu: ನನ್ನ ಸೆಕೆಂಡ್ ಹ್ಯಾಂಡ್ ಅಂದ್ರು!: ಸಮಂತಾ ದುಃಖದ ಮಾತು
Pushpa 2: ಕಿಸಿಕ್ ಎಂದು ಕುಣಿದ ಶ್ರೀಲೀಲಾ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Jewelry Clean Tips: ಮನೆಯಲ್ಲೇ ಆಭರಣಗಳನ್ನು ಈ ರೀತಿಯಾಗಿ ಸ್ವಚ್ಛಗೊಳಿಸಿ
Maharashtra: ಮುಖ್ಯಮಂತ್ರಿ ಆಯ್ಕೆ – ಪ್ರಧಾನಿ ಮೋದಿ ಅವರ ನಿರ್ಧಾರವೇ ಅಂತಿಮ: ಶಿಂಧೆ
ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ
UV Fusion: ಶ್ರೇಷ್ಠನಾಗುವುದಕ್ಕಿಂತ ಉತ್ತಮನಾಗುವುದೇ ಲೇಸು
Anandapura: ನಿಂತಿದ್ದ ಕಾರಿಗೆ ಇನ್ನೊಂದು ಕಾರು ಡಿಕ್ಕಿ ಹೊಡೆದು ಕಾರು ಪಲ್ಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.