Maharashtra: ಮುಖ್ಯಮಂತ್ರಿ ಆಯ್ಕೆ – ಪ್ರಧಾನಿ ಮೋದಿ ಅವರ ನಿರ್ಧಾರವೇ ಅಂತಿಮ: ಶಿಂಧೆ
ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರು ನನ್ನ ಬೆನ್ನ ಹಿಂದೆ ಬಂಡೆಯಂತೆ ನಿಂತಿದ್ದಾರೆ
Team Udayavani, Nov 27, 2024, 5:46 PM IST
ಮುಂಬೈ: ಮಹಾರಾಷ್ಟ್ರ ನೂತನ ಮುಖ್ಯಮಂತ್ರಿ ಆಯ್ಕೆ ವಿಚಾರದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತೆಗೆದುಕೊಳ್ಳುವ ನಿರ್ಧಾರವೇ ಅಂತಿಮವಾದದ್ದು, ನಾವೆಲ್ಲರೂ ಬಿಜೆಪಿ ಹೈಕಮಾಂಡ್ ನಿರ್ಧಾರವನ್ನು ಸ್ವೀಕರಿಸಲು ಸಿದ್ಧರಿದ್ದೇವೆ ಎಂದು ಹಂಗಾಮಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ಘೋಷಿಸುವ ಮೂಲಕ ಮಹಾ ಸಿಎಂ ಆಯ್ಕೆ ಬಿಕ್ಕಟ್ಟು ಅಂತ್ಯಗೊಂಡಂತಾಗಿದೆ.
ಬುಧವಾರ (ನ.27) ಫಡ್ನವೀಸ್ ವರಿಷ್ಠರನ್ನು ಭೇಟಿಯಾಗಲು ದೆಹಲಿಗೆ ತೆರಳಿದ ಬೆನ್ನಲ್ಲೇ ತುರ್ತು ಸುದ್ದಿಗೋಷ್ಠಿ ನಡೆಸುವುದಾಗಿ ಶಿಂಧೆ ತಿಳಿಸಿರುವುದು ಕುತೂಹಲಕ್ಕೆ ಎಡೆಮಾಡಿಕೊಟ್ಟಿತ್ತು.
ಇದೀಗ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಶಿಂಧೆ, ಬಿಜೆಪಿ ಹೈಕಮಾಂಡ್ ಏನೇ ನಿರ್ಧಾರ ತೆಗೆದುಕೊಂಡರು ಅದಕ್ಕೆ ನಮ್ಮ ಸಹಮತ ಇದೆ. ನಾನು ಕೂಡಾ ಪ್ರಧಾನಿ ಮೋದಿ ಅವರಿಗೆ ನನ್ನಿಂದ ಯಾವುದೇ ಸಮಸ್ಯೆಯಾಗುವುದಿಲ್ಲ ಎಂದು ಭರವಸೆ ನೀಡಿರುವುದಾಗಿ ತಿಳಿಸುವ ಮೂಲಕ ಸಿಎಂ ಆಯ್ಕೆ ಹಾದಿ ಸುಗಮವಾದಂತಾಗಿದೆ.
ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರು ನನ್ನ ಬೆನ್ನ ಹಿಂದೆ ಬಂಡೆಯಂತೆ ನಿಂತಿದ್ದಾರೆ. ನಾನು ಮುಖ್ಯಮಂತ್ರಿ ಹುದ್ದೆ ಆಕಾಂಕ್ಷಿಯಲ್ಲ ಎಂದು ಶಿಂಧೆ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ಮದುವೆ ಸಂಭ್ರಮದ ಖುಷಿಯಲ್ಲಿ ಪಟಾಕಿ ಸಿಡಿಸಲು ಹೋಗಿ ಕಾರೇ ಸುಟ್ಟಿತು
Mumbai: ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 7 ಲಕ್ಷ ರೂ. ಕಳೆದುಕೊಂಡ ಐಐಟಿ ವಿದ್ಯಾರ್ಥಿ!
Tragedy: ಆಗ್ರಾ-ಲಕ್ನೋ ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘಾತ: 5ವೈದ್ಯರು ಸ್ಥಳದಲ್ಲೇ ಮೃತ್ಯು
Jammu; ವೈಷ್ಣೋದೇವಿ ರೋಪ್ವೇ ವಿವಾದ: ಪ್ರತಿಭಟನೆಗಿಳಿದವರು ವಶಕ್ಕೆ, ಎಫ್ಐಆರ್
Maoist; 15 ಲಕ್ಷ ರೂ.ಇನಾಮು ಹೊಂದಿದ್ದ ಮಾವೋವಾದಿ ಕಮಾಂಡರ್ ಆಂತರಿಕ ಕಲಹದಲ್ಲಿ ಹ*ತ್ಯೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಹಗರಿಬೊಮ್ಮನಹಳ್ಳಿ: ಜೆಸ್ಕಾಂ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಕಚೇರಿ ಮೇಲೆ ಲೋಕಾಯುಕ್ತ ದಾಳಿ
Dharmasthala: ಲಕ್ಷದೀಪೋತ್ಸವಕ್ಕೆ ವಿಧ್ಯುಕ್ತ ಚಾಲನೆ
Bengaluru: ಯತ್ನಾಳ್ ವಿರುದ್ಧ ಕ್ರಮಕ್ಕೆ ಒತ್ತಡ ಹೇರಲು ವಿಜಯೇಂದ್ರ ಬಣ ಮತ್ತೆ ನಿರ್ಧಾರ
Udupi: ಬಾಂಗ್ಲಾದಲ್ಲಿ ಇಸ್ಕಾನ್ ಮುಖಂಡರ ಬಂಧನಕ್ಕೆ ಪುತ್ತಿಗೆ ಶ್ರೀ ಖಂಡನೆ
Udupi: ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.