Kambala: ಶಿರ್ವ ನಡಿಬೆಟ್ಟು ಸಾಂಪ್ರದಾಯಿಕ ಜೋಡುಕರೆ ಕಂಬಳ ಸಂಪನ್ನ

Team Udayavani, Nov 27, 2024, 6:41 PM IST

Kambala: ಶಿರ್ವ ನಡಿಬೆಟ್ಟು ಸಾಂಪ್ರದಾಯಿಕ ಜೋಡುಕರೆ ಕಂಬಳ ಸಂಪನ್ನ

ಶಿರ್ವ: ತುಳುನಾಡಿನ ಧಾರ್ಮಿಕ ಆಚರಣೆಗಳ ಹಿನ್ನೆಲೆಯಿರುವ 29ನೇ ವರ್ಷದ ಶಿರ್ವ ನಡಿಬೆಟ್ಟು ಸೂರ್ಯ - ಚಂದ್ರ ಸಂಪ್ರದಾಯಬದ್ಧ ಜೋಡುಕರೆ ಕಂಬಳವು ನ.27 ರಂದು ನಡಿಬೆಟ್ಟು ಕಂಬಳ ಗದ್ದೆಯಲ್ಲಿ ನಡೆಯಿತು.

ಹಿರಿಯರಾದ ಉದ್ಯಮಿ ಶಿರ್ವ ಅಟ್ಟಿಂಜೆ ಶಂಭು ಶೆಟ್ಟಿ ದೀಪ ಬೆಳಗಿಸಿ ಜೋಡುಕರೆಗೆ ಕಾಯಿ ಒಡೆಯುವುದರ ಮೂಲಕ ಕಂಬಳವನ್ನು ಉದ್ಘಾಟಿಸಿದರು. ಬಳಿಕ ಸುಮಾರು 20 ಲ.ರೂ. ವೆಚ್ಚದಲ್ಲಿ ನವೀಕರಣಗೊಂಡ ಸೂರ್ಯಚಂದ್ರ ಜೋಡುಕರೆಯನ್ನು ಉದ್ಘಾಟಿಸಿದರು. ನ‌ಡಿಬೆಟ್ಟು ಚಾವಡಿಯ ದೈವ ಜುಮಾದಿಗೆ ಪೂಜೆ ಪುರಸ್ಕಾರ ನಡೆದ ಬಳಿಕ ಬಂಟ ಕೋಲ ನಡೆದು ಮೆರವಣಿಗೆಯಲ್ಲಿ ಕೊಂಬು, ವಾದ್ಯ ಘೋಷಗಳೊಂದಿಗೆ ಮನೆಯ ಕೋಣಗಳನ್ನು ಗದ್ದೆಗಿಳಿಸಲಾಯಿತು.

ಸೂರ್ಯಚಂದ್ರ ಜೋಡುಕರೆಯನ್ನು ನವೀಕರಣ ಮಾಡಲು ಸಹಕರಿಸಿದ ಉದ್ಯಮಿ ಶಿರ್ವ ಅಟ್ಟಿಂಜೆ ಶಂಭು ಶೆಟ್ಟಿ ಹೇಮಲತಾ ಶೆಟ್ಟಿ ದಂಪತಿ ಹಾಗೂ ಕಂಬಳ ಕ್ಷೇತ್ರದಲ್ಲಿ ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಇರುವೈಲು ಪಾಣಿಲ ಸತೀಶ್ಚಂದ್ರ ಸಾಲಿಯಾನ್‌ ಮತ್ತು ಸರಪಾಡಿ ಜಾನ್‌ ಸಿರಿಲ್‌ ಡಿಸೋಜಾ(ಅಪ್ಪಣ್ಣ) ಅವರನ್ನು ಸಮ್ಮಾನಿಸಲಾಯಿತು.

ಕಂಬಳದಲ್ಲಿ ಭಾಗವಹಿಸಿದ ಕಾಪು ತಹಶೀಲ್ದಾರ್‌ ಡಾ| ಪ್ರತಿಭಾ .ಆರ್‌ ಮಾತನಾಡಿ ಮನೆತನಗಳು ಆಚರಿಸಿಕೊಂಡು ಬರುವ ಕಂಬಳದಂತಹ ದೈವೀಕ ಸ್ಪರ್ಶವಿರುವ ತುಳುನಾಡಿನ ಸಂಸ್ಕೃತಿ ಪರಂಪರೆಗಳು ಕೊನೆಯಾಗದೆ ಮುಂದಿನ ಪೀಳಿಗೆಗೆ ದಾರಿದೀಪವಾಗಬೇಕು ಎಂದು ಹೇಳಿದರು.ಕಾಪು ಶಾಸಕ ಸುರೇಶ್‌ ಶೆಟ್ಟಿ ಗುರ್ಮೆ ಮಾತನಾಡಿ ಜಾತಿ, ಮತ ಧರ್ಮದ ಭೇದವಿಲ್ಲದೆ ಸರ್ವ ಜನರೂ ಭಾಗವಹಿಸುವ ತುಳುನಾಡಿನ ಪರಂಪರೆಯನ್ನು ಕಾಣುವ ಕಂಬಳವನ್ನು ಉಳಿಸಿ ಬೆಳೆಸುವ ಕೆಲಸ ನಡೆಯಬೇಕಿದೆ ಎಂದು ಹೇಳಿದರು.

ಹಗ್ಗ ಕಿರಿಯ ವಿಭಾಗದಲ್ಲಿ 30 ಜತೆ ಕೋಣಗಳು ಮತ್ತು ಸಬ್‌ಜೂನಿಯರ್‌ ವಿಭಾಗದಲ್ಲಿ 40 ಜತೆ ಒಟ್ಟು 70 ಜತೆ ಕೋಣಗಳು ಕಂಬಳದಲ್ಲಿ ಭಾಗವಹಿಸಿದ್ದವು. ಕೋಣಗಳ ಸ್ಪರ್ಧೆ ಮುಗಿದ ಬಳಿಕ ಮನೆತನದ ಕೋಣಗಳನ್ನು ಗದ್ದೆಗಿಳಿಸಿ ಓಡಿಸುವುದರೊಂದಿಗೆ ಸಾಂಪ್ರದಾಯಿಕ ಕಂಬಳ ಸಂಪನ್ನಗೊಂಡಿತು.

ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ತಿಂಗಳೆ ವಿಕ್ರಮಾರ್ಜುನ ಹೆಗ್ಡೆ, ಕೆ.ಪಿ. ಜಗದೀಶ ಅಧಿಕಾರಿ, ಕಾಪು ತಾ| ಯುವಜನ ಕ್ರೀಡಾಧಿಕಾರಿ ರಿತೇಶ್‌ ಕುಮಾರ್‌ ಶೆಟ್ಟಿ, ಶಿರ್ವ ಪಿಡಿಒ ಅನಂತಪದ್ಮನಾಭ ನಾಯಕ್‌, ಕಾರ್ಯದರ್ಶಿ ಚಂದ್ರಮಣಿ, ಗ್ರಾಮ ಆಡಳಿತಾಧಿಕಾರಿ ಶ್ವೇತಾ ಸುವರ್ಣ, ರತನ್‌ ಕುಮಾರ್‌ ಶೆಟ್ಟಿ, ಕೆ.ಆರ್‌. ಪಾಟ್ಕರ್‌,ಪಿಲಾರು ಸುಧಾಕರ ಭಂಡ್ರಿಯಾಲ್‌, ಕುತ್ಯಾರು ಕೇಂಜ ಸಾಯಿನಾಥ ಶೆಟ್ಟಿ, ಶಿರ್ವ ನಡಿಬೆಟ್ಟು ಮನೆತನದ ಯಜಮಾನ ದಾಮೋದರ ಚೌಟ, ವ್ಯವಸ್ಥಾಪಕ ಶಿರ್ವ ನಡಿಬೆಟ್ಟು ಶಶಿಧರ ಹೆಗ್ಡೆ, ಸಚ್ಚಿದಾನಂದ ಹೆಗ್ಡೆ, ಪ್ರಶಾಂತ ಶೆಟ್ಟಿ ಸೂಡ, ಎಸ್‌.ಕೆ.ಸಾಲಿಯಾನ್‌, ವಿಲ್ಸನ್‌ ಕುಂದರ್‌, ಕೊಲ್ಲಬೆಟ್ಟು ರವೀಂದ್ರ ಶೆಟ್ಟಿ, ಅಟ್ಟಿಂಜೆ ಸುಧೀರ್‌ ಶೆಟ್ಟಿ, ಅಟ್ಟಿಂಜೆ ಪ್ರದೀಪ್‌ ಶೆಟ್ಟಿ,ತಮ್ಮಣ್ಣ ಪೂಜಾರಿ, ಸುರೇಂದ್ರ ಪೂಜಾರಿ ಕೊಪ್ಪಲ, ವೀರೇಂದ್ರ ಪೂಜಾರಿ,ಶಿರ್ವ ನಡಿಬೆಟ್ಟು ಫ್ಯಾಮಿಲಿ ಟ್ರಸ್ಟ್‌ನ ಅಧ್ಯಕ್ಷ ಶಿರ್ವ ನಡಿಬೆಟ್ಟು ನಿತ್ಯಾನಂದ ಹೆಗ್ಡೆ ಮತ್ತು ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Dharmasthala: ಡಾ| ಹೆಗ್ಗಡೆಯನ್ನು ಭೇಟಿಯಾದ ಯುನಿಸೆಫ್‌ ತಂಡ

Dharmasthala: ಡಾ| ಹೆಗ್ಗಡೆಯನ್ನು ಭೇಟಿಯಾದ ಯುನಿಸೆಫ್‌ ತಂಡ

ಲಾಕಪ್‌ಡೆತ್‌: ಹೆಡ್‌ ಕಾನ್‌ಸ್ಟೆಬಲ್‌ ಸೇರಿ ನಾಲ್ವರು ಪೊಲೀಸರಿಗೆ 7 ವರ್ಷ ಜೈಲು

ಲಾಕಪ್‌ಡೆತ್‌: ಹೆಡ್‌ ಕಾನ್‌ಸ್ಟೆಬಲ್‌ ಸೇರಿ ನಾಲ್ವರು ಪೊಲೀಸರಿಗೆ 7 ವರ್ಷ ಜೈಲು

Congress: ದ.ಕ.ದಲ್ಲಿ ಜನರ ಒಲವು ಕಾಂಗ್ರೆಸ್‌ ಪರ: ಹರೀಶ್‌ ಕುಮಾರ್‌

Congress: ದ.ಕ.ದಲ್ಲಿ ಜನರ ಒಲವು ಕಾಂಗ್ರೆಸ್‌ ಪರ: ಹರೀಶ್‌ ಕುಮಾರ್‌

Manipal: ಮಾಹೆ; ಸಿಜಿಎಂಪಿ ಕೇಂದ್ರಕ್ಕೆ ಭಾರತ ಫಾರ್ಮಾ ಪ್ರಶಸ್ತಿ

Manipal: ಮಾಹೆ; ಸಿಜಿಎಂಪಿ ಕೇಂದ್ರಕ್ಕೆ ಭಾರತ ಫಾರ್ಮಾ ಪ್ರಶಸ್ತಿ

Belagavi: ಯುವಕನ ಮೇಲೆ ಗುಂಡಿನ‌ ದಾಳಿ… ಸ್ಥಳದಲ್ಲಿ ಬಿಗುವಿನ ವಾತಾವರಣ

Belagavi: ಯುವಕನ ಮೇಲೆ ಗುಂಡಿನ‌ ದಾಳಿ… ಸ್ಥಳದಲ್ಲಿ ಬಿಗುವಿನ ವಾತಾವರಣ

Road Mishap: ಪೊನ್ನಂಪೇಟೆ: ಲಾರಿ ಢಿಕ್ಕಿ; ಬಾಲಕಿ ಸಾವು

Road Mishap: ಪೊನ್ನಂಪೇಟೆ: ಲಾರಿ ಢಿಕ್ಕಿ; ಬಾಲಕಿ ಸಾವು

Satish Jarkiholi: ಪಕ್ಷ ಸಂಘಟನಾ ಶಕ್ತಿ ಇದ್ದವರ ಬಳಸಿಕೊಳ್ಳಿ: ಸತೀಶ್‌ ಜಾರಕಿಹೊಳಿ

Satish Jarkiholi: ಪಕ್ಷ ಸಂಘಟನಾ ಶಕ್ತಿ ಇದ್ದವರ ಬಳಸಿಕೊಳ್ಳಿ: ಸತೀಶ್‌ ಜಾರಕಿಹೊಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal: ಮಾಹೆ; ಸಿಜಿಎಂಪಿ ಕೇಂದ್ರಕ್ಕೆ ಭಾರತ ಫಾರ್ಮಾ ಪ್ರಶಸ್ತಿ

Manipal: ಮಾಹೆ; ಸಿಜಿಎಂಪಿ ಕೇಂದ್ರಕ್ಕೆ ಭಾರತ ಫಾರ್ಮಾ ಪ್ರಶಸ್ತಿ

Fraud Case: ಫಾರ್ಚುನ್‌ ಗ್ರೂಪ್‌ ಹೊಟೇಲ್‌ಗೆ ವಂಚನೆ: ಜಾಮೀನು

Fraud Case: ಫಾರ್ಚುನ್‌ ಗ್ರೂಪ್‌ ಹೊಟೇಲ್‌ಗೆ ವಂಚನೆ: ಜಾಮೀನು

6

Brahmavar: ಲಾಕ್‌ಅಪ್‌ ಡೆತ್‌; ಕೇರಳ ಸಿಎಂಗೆ ದೂರು

Udupi: ಬಾಂಗ್ಲಾದಲ್ಲಿ ಇಸ್ಕಾನ್‌ ಮುಖಂಡರ ಬಂಧನಕ್ಕೆ ಪುತ್ತಿಗೆ ಶ್ರೀ ಖಂಡನೆ

Udupi: ಬಾಂಗ್ಲಾದಲ್ಲಿ ಇಸ್ಕಾನ್‌ ಮುಖಂಡರ ಬಂಧನಕ್ಕೆ ಪುತ್ತಿಗೆ ಶ್ರೀ ಖಂಡನೆ

Udupi: ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ

Udupi: ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Dharmasthala: ಡಾ| ಹೆಗ್ಗಡೆಯನ್ನು ಭೇಟಿಯಾದ ಯುನಿಸೆಫ್‌ ತಂಡ

Dharmasthala: ಡಾ| ಹೆಗ್ಗಡೆಯನ್ನು ಭೇಟಿಯಾದ ಯುನಿಸೆಫ್‌ ತಂಡ

ಲಾಕಪ್‌ಡೆತ್‌: ಹೆಡ್‌ ಕಾನ್‌ಸ್ಟೆಬಲ್‌ ಸೇರಿ ನಾಲ್ವರು ಪೊಲೀಸರಿಗೆ 7 ವರ್ಷ ಜೈಲು

ಲಾಕಪ್‌ಡೆತ್‌: ಹೆಡ್‌ ಕಾನ್‌ಸ್ಟೆಬಲ್‌ ಸೇರಿ ನಾಲ್ವರು ಪೊಲೀಸರಿಗೆ 7 ವರ್ಷ ಜೈಲು

Congress: ದ.ಕ.ದಲ್ಲಿ ಜನರ ಒಲವು ಕಾಂಗ್ರೆಸ್‌ ಪರ: ಹರೀಶ್‌ ಕುಮಾರ್‌

Congress: ದ.ಕ.ದಲ್ಲಿ ಜನರ ಒಲವು ಕಾಂಗ್ರೆಸ್‌ ಪರ: ಹರೀಶ್‌ ಕುಮಾರ್‌

Manipal: ಮಾಹೆ; ಸಿಜಿಎಂಪಿ ಕೇಂದ್ರಕ್ಕೆ ಭಾರತ ಫಾರ್ಮಾ ಪ್ರಶಸ್ತಿ

Manipal: ಮಾಹೆ; ಸಿಜಿಎಂಪಿ ಕೇಂದ್ರಕ್ಕೆ ಭಾರತ ಫಾರ್ಮಾ ಪ್ರಶಸ್ತಿ

Belagavi: ಯುವಕನ ಮೇಲೆ ಗುಂಡಿನ‌ ದಾಳಿ… ಸ್ಥಳದಲ್ಲಿ ಬಿಗುವಿನ ವಾತಾವರಣ

Belagavi: ಯುವಕನ ಮೇಲೆ ಗುಂಡಿನ‌ ದಾಳಿ… ಸ್ಥಳದಲ್ಲಿ ಬಿಗುವಿನ ವಾತಾವರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.