Bengaluru: ಶಾಲೆ ಮುಖ್ಯಸ್ಥನ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ
ಖಾಸಗಿ ಕ್ಷಣದ ವಿಡಿಯೋ ಚಿತ್ರೀಕರಿಸಿ ಬೆದರಿಕೆ: ದೂರು
Team Udayavani, Nov 29, 2024, 2:41 PM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ತ್ಯಾಗರಾಜನಗರದಲ್ಲಿರುವ ಖಾಸಗಿ ಶಾಲೆಯ ಮುಖ್ಯಸ್ಥನಾಗಿರುವ ಗುರಪ್ಪ ನಾಯ್ಡು ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪದಡಿ ಚೆನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.
ನ.26ರಂದು ಖಾಸಗಿ ಶಾಲೆಯ ಶಿಕ್ಷಕಿಯೊಬ್ಬರು ನೀಡಿದ ದೂರಿನ ಮೇರೆಗೆ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ದೂರುದಾರ ಶಿಕ್ಷಕಿ ಸೇರಿ 75ಕ್ಕೂ ಹೆಚ್ಚು ಮಹಿಳೆಯರು ಆ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಆರೋಪಿ ಗುರಪ್ಪ ನಾಯ್ಡು ಹೆಣ್ಣು ಮಕ್ಕಳ ಬೆತ್ತಲೆ ಹಾಗೂ ಅಶ್ಲೀಲ ವಿಡಿಯೊಗಳನ್ನು ಚಿತ್ರೀಕರಿಸಿಕೊಂಡು ಹೆದರಿಸುತ್ತಿದ್ದಾರೆ. ನಾನು ಹೇಳಿದಂತೆ ಕೇಳದಿದ್ದರೆ ವಿಡಿಯೊಗಳನ್ನು ಬಹಿರಂಗ ಪಡಿಸುವುದಾಗಿ ಬೆದರಿಕೆ ಹಾಕುತ್ತಿದ್ದಾರೆ. ಹೆಣ್ಣು ಮಕ್ಕಳ ಅಶ್ಲೀಲ ವಿಡಿಯೋಗಳನ್ನು ಇಟ್ಟುಕೊಂಡು ದೌರ್ಜನ್ಯ ಎಸಗಿದ್ದಾರೆ ಎಂದು ಶಿಕ್ಷಕಿ ದೂರಿನಲ್ಲಿ ಉಲ್ಲೇಖೀಸಿದ್ದಾರೆ.
ಗುರಪ್ಪ ನಾಯ್ಡು ವಿರುದ್ದ ಈ ಹಿಂದೆ ದೂರು ನೀಡಲು ಕೆಲವು ಶಿಕ್ಷಕಿಯರು ಹಾಗೂ ಸಿಬ್ಬಂದಿ ನಿರ್ಧಾರ ಮಾಡಿದ್ದೆವು. ಆದರೆ, ಗುರಪ್ಪ ನಾಯ್ಡು ಪ್ರಭಾವಿ ಹಾಗೂ ಹಣವಂತ ಎಂದು ತಿಳಿದು ಸುಮ್ಮನಿದ್ದೆವು. 2021ರಿಂದ 2023ರ ರವರೆಗೆ ಶಿಕ್ಷಕಿಯಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಈ ವೇಳೆ ಉದ್ದೇಶಪೂರ್ವಕವಾಗಿ ಅವರ ಕಚೇರಿಗೆ ಕರೆಯುವುದು, ಯಾವಾಗ ರೆಡಿ ಆಗುತ್ತೀಯಾ ಎಂದು ಕೇಳುವುದು, ನನ್ನನ್ನು ಕೆಟ್ಟದಾಗಿ ನೋಡುತ್ತಿದ್ದರು. ಅವರ ವರ್ತನೆಯಿಂದ ಸಾಕಷ್ಟು ಮಾನಸಿಕ ಕಿರುಕುಳ ಉಂಟಾಗಿದೆ ಎಂದು ದೂರಿನಲ್ಲಿ ಉಲ್ಲೇಖೀಸಿದ್ಧಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ
Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ
ಚಂದ್ರಶೇಖರ ಶ್ರೀ ವಿರುದ್ಧ ಕೇಸ್; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ
Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್
ಬಾಲ್ಯದ ಮಧುರ ನೆನೆಪಿನೊಳಗೆ…: ಆ ಕಾಲ ಹೀಗಿತ್ತು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.