Bengaluru: ಜೀವಾ ಆತ್ಮಹತ್ಯೆ: ಡಿವೈಎಸ್ಪಿಗೆ ಸಿಸಿಬಿ ನೋಟಿಸ್ ಸಾಧ್ಯತೆ
ಕನಕಲಕ್ಷ್ಮೀ ವಿಚಾರಣೆಗೆ ಸಿಸಿಬಿ ಪೊಲೀಸರು ಸಿದ್ಧತೆ
Team Udayavani, Nov 29, 2024, 3:17 PM IST
ಬೆಂಗಳೂರು: ಭೋವಿ ನಿಗಮದಲ್ಲಿ ನಡೆದ ಅಕ್ರಮ ತನಿಖೆ ಸಂಬಂಧ ವಿಚಾರಣೆಗೆ ಹಾಜರಾಗಿದ್ದ ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಸಿಬಿ ಪೊಲೀಸರು, ಸಿಐಡಿ ಡಿವೈಎಸ್ಪಿ ಕನಕಲಕ್ಷ್ಮೀಗೆ ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ನೀಡಲು ಸಿದ್ಧತೆ ನಡೆಸಿದ್ದಾರೆ.
ಪ್ರಕರಣ ಸಂಬಂಧ ವಿಚಾರಣೆ ನಡೆಸಿದ ಹೈಕೋರ್ಟ್ ಸೂಚನೆ ಬೆನ್ನಲ್ಲೇ ಎಚ್ಚೆತ್ತ ಸಿಸಿಬಿ ಪೊಲೀಸರು, ಪ್ರಕರಣದ ಸಾಕ್ಷ್ಯ ಸಂಗ್ರಹಿಸಲು ಮುಂದಾಗಿದ್ದಾರೆ. ಭೋವಿ ನಿಗಮದಲ್ಲಿನ ಅಕ್ರಮ ಆರೋಪ ಸಂಬಂಧ ತನಿಖೆಯ ಭಾಗವಾಗಿ ಉದ್ಯಮಿ ಜೀವಾ ಅವರನ್ನು ವಿಚಾರಣೆಗೆ ಕರೆಯಲು ಕಾರಣವೇನು, ಜೀವಾಗೆ ಸಂಬಂಧಿಸಿದ ಬ್ಯಾಂಕ್ ಖಾತೆಗೆ ಎಷ್ಟು ಕೋಟಿ ಹಣ ವರ್ಗಾವಣೆ ಆಗಿತ್ತು, ವಿಚಾರಣೆಗಾಗಿ ಅವರು ಎಷ್ಟು ಬಾರಿ ಸಿಐಡಿ ಕಚೇರಿಗೆ ಬಂದಿದ್ದರು, ಜೀವಾ ಸಹೋದರಿ ದೂರಿನಲ್ಲಿ ಆರೋಪಿಸಿದ ರೀತಿ ಜೀವಾ ಮೇಲೆ ದೌರ್ಜನ್ಯ ನಡೆದಿದೆಯೇ, ಎಂಬಿತ್ಯಾದಿ ಮಾಹಿತಿಗಳನ್ನು ಪಡೆಯಲು ಡಿವೈಎಸ್ಪಿ ಕನಕಲಕ್ಷ್ಮೀಗೆ ನೋಟಿಸ್ ಕೊಡಲಾಗುತ್ತದೆ ಎಂದು ಸಿಸಿಬಿ ಮೂಲಗಳು ತಿಳಿಸಿವೆ.
ಜೀವಾ ಅವರು ಬರೆದಿದ್ದಾರೆನ್ನಲಾದ 13 ಪುಟಗಳ ಡೆತ್ನೋಟ್ ಎಫ್ಎಸ್ಎಲ್ಗೆ ಕಳುಹಿಸಲಾಗಿದ್ದು, ಅದರಲ್ಲಿರುವ ಕೈ ಬರಹ ಜೀವಾ ಅವರದ್ದಾ ಅಥವಾ ಬೇರೆಯವರದ್ದಾ ಎಂಬುದನ್ನು ಖಾತ್ರಿಪಡಿಸಿಕೊಳ್ಳಲಿದ್ದಾರೆ. ಜೀವಾ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿ ಹೈಕೋಟ್ ಗೆ ವಕೀಲರ ಸಂಘ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಏಕಸದಸಯ ಪೀಠ ಡೆತ್ನೋಟ್ನಲ್ಲಿ ಬರೆದಿರುವ ಆರೋಪಿಯನ್ನು ಏಕೆ ವಿಚಾರಣೆ ನಡೆಸಿಲ್ಲ, ಅವರ ಮೇಲೆ ಏಕೆ ಕ್ರಮ ಕೈಗೊಂಡಿಲ್ಲ, ಇನ್ನೂ ಏಕೆ ತನಿಖೆ ಆರಂಭಿಸಿಲ್ಲ ಎಂದು ಅಧಿಕಾರಿಗಳನ್ನು ಪ್ರಶ್ನಿಸಿತ್ತು. ಹಾಗಾಗಿ ಇದೀಗ ಕನಕಲಕ್ಷ್ಮೀಗೆ ವಿಚಾರಣೆಗಾಗಿ ನೋಟಿಸ್ ನೀಡಲು ಸಿದ್ಧತೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.