Congress: ಸಚಿವ ಸಂಪುಟ ಬದಲಾವಣೆ ಸಿಎಂ ವಿವೇಚನೆಗೆ: ಡಾ| ಪರಮೇಶ್ವರ
Team Udayavani, Nov 30, 2024, 12:20 AM IST
ಬೆಳ್ತಂಗಡಿ: ಸಚಿವ ಸಂಪುಟ ವಿಸ್ತರಣೆ ಮುಖ್ಯಮಂತ್ರಿಯವರ ವಿವೇಚನೆಗೆ ಬಿಟ್ಟ ವಿಚಾರ, ಅದು ಅನಿವಾರ್ಯ ಎಂದು ಕಂಡುಬಂದಲ್ಲಿ ಅವರು ಮಾಡುತ್ತಾರೆ. ಅದು ಅವರ ನಿರ್ಧಾರಕ್ಕೆ ಬಿಟ್ಟ ವಿಚಾರ ಎಂದು ಗೃಹ ಸಚಿವ ಡಾ| ಜಿ. ಪರಮೇಶ್ವರ ಹೇಳಿದರು.
ಧರ್ಮಸ್ಥಳದಲ್ಲಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಪಶ್ಚಿಮ ಘಟ್ಟದಲ್ಲಿ ನಕ್ಸಲ್ ಕಾರ್ಯಾಚರಣೆ ಮುಂದುವರಿಯುತ್ತಿದೆ. ಈಗಾಗಲೇ ನಕ್ಸಲ್ ನಾಯಕ ವಿಕ್ರಂ ಗೌಡ ಮೃತಪಟ್ಟ ಬಳಿಕ ಸರಕಾರ ನಕ್ಸಲರ ಶರಣಾಗತಿಗೆ ಮನವಿ ಮಾಡಿದೆ. ಸರಕಾರದ ಮನವಿಗೆ ನಕ್ಸಲರು ಸ್ಪಂದಿಸಿ ಶರಣಾದರೆ ಅವರಿಗೆ ಸರಕಾರದ ಎಲ್ಲ ಪ್ಯಾಕೇಜ್ ನೀಡಲಾಗುವುದು. ಇಲ್ಲ ವಾದಲ್ಲಿ ಮತ್ತೆ ಅವರ ಪತ್ತೆಗೆ ಸೂಕ್ತ ಕ್ರಮ ಕೈಗೊಳ್ಳ ಲಾಗುವುದು ಎಂದರು.
ಹಾಸನದಲ್ಲಿ ಡಿ.5ರಂದು ನಡೆಯುವ ಕಾಂಗ್ರೆಸ್ ಸಮಾವೇಶ ಸರಕಾರದ ವಿರುದ್ಧ ವಿಪಕ್ಷಗಳು ಮಾಡುತ್ತಿರುವ ಟೀಕೆಗಳಿಗೆ ಉತ್ತರವಾಗಲಿದೆ.
ಡಿವೈಎಫ್‌ಐಯವರು ಕಮಿಷನರ್ ಹಠಾವೋ ಹೋರಾಟ ನಡೆಸುತ್ತಿರುವ ಕುರಿತು ಮಾಹಿತಿ ಇಲ್ಲ. ಇಲಾಖೆಯ ಶಿಸ್ತು ಎಲ್ಲರೂ ಪಾಲಿಸಬೇಕು. ಜನರ ಆಸ್ತಿಪಾಸ್ತಿಗೆ ಹಾನಿಯಾಗದಂತೆ ಇಲಾಖೆ ನಿಗದಿಪಡಿಸಿದ ಸ್ಥಳದಲ್ಲಿ ಹೋರಾಟಕ್ಕೆ ಅವಕಾಶ ನೀಡಬಹುದು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.