Surathkal: ರ್ಯಾಗಿಂಗ್; 9 ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲು
Team Udayavani, Nov 30, 2024, 6:52 AM IST
ಸುರತ್ಕಲ್: ಸುರತ್ಕಲ್ ಬಳಿಯ ಮೆಡಿಕಲ್ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗೆ ರ್ಯಾಗಿಂಗ್ ನಡೆಸಿದ ಆರೋಪದಲ್ಲಿ ಮೂರನೇ ವರ್ಷದ 9 ಮಂದಿ ಕೇರಳ ಮೂಲದ ವಿದ್ಯಾರ್ಥಿಗಳ ವಿರುದ್ಧ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಂತ್ರಸ್ತ ವಿದ್ಯಾರ್ಥಿಯೊಬ್ಬ ದೂರು ನೀಡಿದ್ದು, ಅದೇ ಕಾಲೇಜಿನಲ್ಲಿ ಕಲಿಯುವ ಕೇರಳ ಮೂಲದ ಸಿದಾಯತ್, ಅಮಲ್ ಕೃಷ್ಣ ಸಾಜಿದ್, ಅಜೀಮ್ ಶಾ, ಆಡಮ್, ಫಯಾದ್, ಅತುಲ್ ಕೆ., ದಿಲೀಪ್, ಅಫೈಲ್, ಶಿಬಿನ್ ಆರೋಪಿಗಳು. ಇಡ್ಯಾ ಗ್ರಾಮದಲ್ಲಿ ಆರೋಪಿ ಸಿದಾಯತ್ ಮಾಡಿಕೊಂಡಿದ್ದ ಬಾಡಿಗೆ ಮನೆಯಲ್ಲಿ ಘಟನೆ ನಡೆದಿದೆ.
ವಿದ್ಯಾರ್ಥಿಗಳನ್ನು ಕಾಲೇಜಿನಿಂದ ಡಿಬಾರ್ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಕಾಲೇಜಿನ ಹಿರಿಯ ವಿದ್ಯಾರ್ಥಿ ಸಿದಾಯತ್ ನ. 25ರಂದು ಸಂಜೆ 5.45ಕ್ಕೆ ಕರೆ ಮಾಡಿ, ಲೈವ್ ಲೊಕೇಶನ್ ಕಳುಹಿಸಿ ತನ್ನ ಬಾಡಿಗೆ ಮನೆಗೆ ಬರಲು ಹೇಳಿದ್ದು . ಬಳಿಕ ರ್ಯಾಗಿಂಗ್ ಮಾಡಲಾಗಿದೆ. ಸುರತ್ಕಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.