E-Khata ಇದ್ದರಷ್ಟೇ ಆಸ್ತಿ ನೋಂದಣಿ: ಸಚಿವ ಕೃಷ್ಣ ಬೈರೇಗೌಡ
ವಂಚಿಸಿ ನೋಂದಣಿಗೆ ಕಡಿವಾಣ ಹಾಕಲು ಈ ಕ್ರಮ
Team Udayavani, Nov 30, 2024, 1:10 AM IST
ಬೆಂಗಳೂರು: ಬೆಂಗಳೂರಿನಲ್ಲಿ ಏಳೆಂಟು ಲಕ್ಷ ಆಸ್ತಿಗಳಿಗೆ ಖಾತೆ ಇಲ್ಲ. ಗ್ರಾ.ಪಂ. ವ್ಯಾಪ್ತಿಯಲ್ಲಿ 90 ಲಕ್ಷ, ಪುರಸಭೆಗಳಲ್ಲಿ ಅಂದಾಜು 20 ಲಕ್ಷ ಆಸ್ತಿಗಳಿಗೆ ಖಾತೆಯಿಲ್ಲ. ಆದೂ ವಂಚಿಸಿ ನೋಂದಣಿ ಮಾಡಲಾಗುತ್ತಿದೆ. ಈಗ ಇದಕ್ಕೆಲ್ಲ ಕಡಿವಾಣ ಹಾಕಿದ್ದೇವೆ. ಇ-ಖಾತೆ ಇದ್ದರಷ್ಟೇ ನೋಂದಣಿ ಮಾಡಿಕೊಡಲು ಸೂಚಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.
ವಿಕಾಸಸೌಧದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪ್ರತಿ ಆಸ್ತಿ ನೋಂದಣಿಗೆ ಮಧ್ಯವರ್ತಿಗಳು 30-40 ಲಕ್ಷ ರೂ. ಲಂಚ ತೆಗೆದು ಕೊಳ್ಳುತ್ತಿದ್ದರು. ಸ್ಥಳೀಯ ಆಡಳಿತ ಸಂಸ್ಥೆಗೂ ಆದಾಯ ಬರುವುದಿಲ್ಲ. ತೆರಿಗೆ ಕಟ್ಟಿದವರ ದುಡ್ಡಿನಲ್ಲಿ ಇವರಿಗೆ ಸವಲತ್ತು ಸಿಗುತ್ತದೆ. ಕಾನೂನು ಪಾಲನೆ ಮಾಡುವುದು ಮೂರ್ಖತನವಾ? ಬೆಂಗಳೂರಲ್ಲಿ 600-1000 ಕೋಟಿ ರೂ. ಆದಾಯ ಸೋರಿಕೆ ಆಗುತ್ತಿದೆ. ಇದಕ್ಕೆ ಈಗ ಕಡಿವಾಣ ಹಾಕಿದ್ದೇವೆ ಎಂದು ಹೇಳಿದರು.
ವಾರದಲ್ಲಿ ಹಿಂಗಾರು ಬೆಳೆ ನಷ್ಟ ಪರಿಹಾರ
ಹಿಂಗಾರಿನಲ್ಲಿ 1.58 ಲಕ್ಷ ಹೆಕ್ಟೇರ್ನಲ್ಲಿ ಬೆಳೆ ಹಾನಿಯಾಗಿದ್ದು, ಕೃಷಿ ಮತ್ತು ಕಂದಾಯ ಇಲಾಖೆಗಳಿಂದ ಜಂಟಿ ಸಮೀಕ್ಷೆ ಮಾಡಲಾಗಿದೆ. 120 ಕೋಟಿ ರೂ. ಪರಿಹಾರಕ್ಕೆ ಬೇಕಾಗಬಹುದು ಎಂದು ಅಂದಾಜಿಸಿದ್ದು, ಸೋಮವಾರ ಸ್ಪಷ್ಟ ಚಿತ್ರಣ ಸಿಗಲಿದೆ. ಮುಂದಿನ ಒಂದು ವಾರದಲ್ಲಿ ಪರಿಹಾರ ಪಾವತಿ ಆಗಬೇಕು ಎಂಬುದಾಗಿ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಇನ್ನು ಮುಂಗಾರು
ಹಂಗಾಮಿನಲ್ಲಿ ಹಾನಿಯಾಗಿದ್ದ 77 ಸಾವಿರ ಹೆಕ್ಟೇರ್ನಲ್ಲಿ ಬೆಳೆ, ಮನೆ ಹಾನಿ, ಪ್ರಾಣಿ ಹಾನಿಗೆ ಸಂಬಂಧಿಸಿದ 162 ಕೋಟಿ ರೂ. ಪರಿಹಾರ ಪಾವತಿ ಆಗಿದೆ ಎಂದು ಕೃಷ್ಣ ಬೈರೇಗೌಡ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದ.ಕ.ದ ವೈಭವಿ, ಉಡುಪಿಯ ಧೀರಜ್ ಐತಾಳ್ ; ಸಾಹಸ ಮೆರೆದ ಮಕ್ಕಳಿಗೆ ಶೌರ್ಯ ಪ್ರಶಸ್ತಿ
D.K. Shivakumar: ಬೆಳಗಾವಿ ಕಾಂಗ್ರೆಸ್ ಅಧಿವೇಶನ ಬಗ್ಗೆ ಚರ್ಚೆ
KEA: ಎಂಎಸ್ಸಿ ನರ್ಸಿಂಗ್: ಅರ್ಜಿ ಸಲ್ಲಿಕೆಗೆ ಡಿ. 2 ಕೊನೆ ದಿನ
Karnataka: ಪಠ್ಯಪುಸ್ತಕಕ್ಕೆ ಬೇಡಿಕೆ ಸಲ್ಲಿಸಲು ಡಿ. 9 ಕಡೇ ದಿನ
ಸಾಹಿತ್ಯ ಸಮ್ಮೇಳನನ ಖರ್ಚು ಕಡಿತಗೊಳಿಸಿ ಹಂಪಿ ಕನ್ನಡ ವಿ.ವಿ.ಗೆ ನೆರವು: ಜೋಶಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.