Election;ವಿಶ್ವಾಸಾರ್ಹತೆಗೆ ಧಕ್ಕೆ: ಕಾಂಗ್ರೆಸ್ ಆಂದೋಲನ
Team Udayavani, Nov 30, 2024, 6:50 AM IST
ಹೊಸದಿಲ್ಲಿ: ಚುನಾವಣೆ ಪ್ರಕ್ರಿಯೆಗಳ ಬಗ್ಗೆ ಅನುಮಾನಗಳನ್ನು ವ್ಯಕ್ತಪಡಿಸಿರುವ ಕಾಂಗ್ರೆಸ್, ಒಟ್ಟಾರೆ ಚುನಾವಣೆ ಪ್ರಕ್ರಿ ಯೆಗಳ ವಿಶ್ವಾಸಾರ್ಹತೆಗೆ ಧಕ್ಕೆಯಾಗಿದೆ. ಇದರ ವಿರುದ್ಧ ಶೀಘ್ರ ಆಂದೋಲನ ಕೈಗೊಳ್ಳುವುದಾಗಿ ಪ್ರಕಟಿಸಿದೆ.
ದಿಲ್ಲಿಯಲ್ಲಿ ಶುಕ್ರವಾರ ನಡೆದ ಕಾರ್ಯಕಾರಿಣಿಯಲ್ಲಿ ಈ ಬಗ್ಗೆ ನಿರ್ಣ ಯವನ್ನು ಅಂಗೀಕರಿಸಿರುವ ಕಾಂಗ್ರೆಸ್, ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ಗಳು ಸಾಂವಿಧಾನಿಕ ಬದ್ಧತೆಯಾ ಗಿದೆ. ಆದರೆ ಚುನಾವಣ ಆಯೋಗದ ಪಕ್ಷಪಾ ತದ ಚಟು ವಟಿಕೆ ಯಿಂದಾಗಿ ಹಲವು ಗಂಭೀ ರ ಪ್ರಶ್ನೆಗಳು ಎದ್ದಿವೆ ಎಂದು ಹೇಳಿದೆ.
ಕಾಂಗ್ರೆಸ್ ನಾಯಕರಾದ ಜೈರಾಂ ರಮೇಶ್, ಕೆ.ಸಿ.ವೇಣುಗೋಪಾಲ್ ಮತ್ತು ಪವನ್ ಖೇರಾ ಜಂಟಿ ಸುದ್ದಿಗೋಷ್ಠಿ ನಡೆಸಿ, ಮೋದಿ ಹಠಮಾರಿ ಧೋರಣೆಯಿಂದಾಗಿ ಸಂಸತ್ತಿನ ಕಲಾಪಗಳು ನಡೆಯುತ್ತಿಲ್ಲ ಎಂದು ಆರೋಪಿಸಿದರು. ಅಲ್ಲದೇ ದೇಶದ ರಾಜಕೀಯ ಪರಿಸ್ಥಿತಿಯನ್ನು ಚರ್ಚಿಸಲಾ ಗಿದ್ದು, ಪಕ್ಷವು ಹಲವು ನಿರ್ಣಯಗಳನ್ನು ಎಐಸಿಸಿ ಅಂಗೀಕರಿಸಿದೆ. ಪಕ್ಷದ ಸಂಘಟನೆ ಹಾಗೂ ಚುನಾವಣಾ ಸೋಲುಗಳ ಕುರಿತು ಚರ್ಚಿಸಲು ಆಂತರಿಕ ಸಮಿತಿಯನ್ನು ರಚಿಸಲು ನಿರ್ಧರಿಸಲಾಗಿದೆ ಎಂದು ಹೇಳಿದರು.
ಹಿಂಸಾಚಾರಪೀಡಿತ ಮಣಿಪುರಕ್ಕೆ ಪ್ರಧಾನಿ ಒಮ್ಮೆಯೂ ಭೇಟಿ ನೀಡಿದೆ ಹೊಣೆ ಗಾರಿಕೆಯಿಂದ ನುಣುಚಿಕೊಳ್ಳುತ್ತಿದ್ದಾರೆ ಎಂದು ನಿರ್ಣಯದಲ್ಲಿ ಆರೋಪಿ ಸ ಲಾಗಿದೆ. ಸಂಭಲ್ ಸೇರಿ ವಿವಿಧ ರಾಜ್ಯಗಳಲ್ಲಿ ಕೋಮು ಸಂಘರ್ಷಗಳನ್ನು ಬಿಜೆಪಿ ವ್ಯವಸ್ಥಿತವಾಗಿ ನಡೆಸುತ್ತಿದೆ ಎಂದು ತಿಳಿಸಲಾಗಿದೆ.
ಒಟ್ಟಾಗಿದ್ರೆ ಮಾತ್ರ ಗೆಲುವು
ಹೊಸದಿಲ್ಲಿ: ನಮ್ಮಲ್ಲಿನ ಒಗ್ಗಟ್ಟಿನ ಕೊರತೆ ಪಕ್ಷಕ್ಕೆ ಸಾಕಷ್ಟು ಹಾನಿ ಮಾಡುತ್ತಿವೆ ಎಂದು ಎಐ ಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ಯಲ್ಲಿ ಮಾತನಾಡಿ, “ನಾವು ಒಗ್ಗ ಟ್ಟಾಗಿ ಇರದಿ ದ್ದರೆ ಚುನಾವಣೆ ಎದು ರಿಸುವುದು ಕಷ್ಟ. ಪಕ್ಷದ ನಾಯಕರು ಪರಸ್ಪರ ವಿರುದ್ಧ ಹೇಳಿಕೆ ನೀಡು ತ್ತಿದ್ದರೆ ಚುನಾವಣೆ ಜಯಿಸುವುದು ಹೇಗೆ? ನಮ್ಮ ಎದುರಾಳಿಗಳನ್ನು ಮಣಿಸಲು ಹೇಗೆ ಸಾಧ್ಯ’ ಎಂದಿ ದ್ದಾರೆ. ಇವಿಎಂಗಳ ಮೇಲೆ ಅನು ಮಾನ ವ್ಯಕ್ತಪಡಿಸಿ, ಆಯೋ ಗ ಸಂವಿ ಧಾನ ಬದ್ಧ ಸಂಸ್ಥೆ ಅದು ನಿಷ್ಪಕ್ಷಪಾತ ಚುನಾವಣೆ ನಡೆಸಲಿ ಎಂದಿದ್ದಾರೆ.
ಮಹಾರಾಷ್ಟ್ರ ಚುನಾವಣೆ ಸೋಲು: ತನಿಖೆಗೆ ಆಗ್ರಹಿಸಿದ ಕಾಂಗ್ರೆಸ್
ಮಹಾರಾಷ್ಟ್ರ ಚುನಾವಣೆಗೆ ಸಂಬಂಧಿಸಿ ದಂತೆ ಅನುಮಾನ ಹೊಂದಿರುವ ಕಾಂಗ್ರೆಸ್ ಚುನಾವಣ ಆಯೋಗಕ್ಕೆ ಮನವಿಯನ್ನು ಸಲ್ಲಿಸಿ ದ್ದು, ಮತ ಚಲಾವಣೆ ಮತ್ತು ಮತ ಎಣಿಕೆ ಪ್ರಕ್ರಿಯೆ ಗೆ ಸಂಬಂಧಿಸಿದಂತೆ ತನ್ನ ಆತಂಕವನ್ನು ಹೊರ ಹಾಕಿದೆ. 12 ಪುಟಗಳ ಮನವಿಯನ್ನು ಆಯೋಗಕ್ಕೆ ಸಲ್ಲಿಸಿರುವ ಕಾಂಗ್ರೆಸ್, ಮುಖಾಮುಖೀ ಸಭೆಗೆ ಆಗ್ರಹಿಸಿದೆ. ಪ್ರತಿ ವಿಧಾನಸಭಾ ಕ್ಷೇತ್ರದಲ್ಲೂ ಮತ ದಾರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರು ಕಿತ್ತು ಹಾಕಿರುವುದು ಮತ್ತು 10 ಸಾವಿರಕ್ಕೂ ಅಧಿಕ ಮತದಾರರನ್ನು ಸೇರಿಸಿರುವುದು, ಮತದಾನ ಪ್ರಮಾಣದಲ್ಲಿ ಹೆಚ್ಚಳವಾಗಿರುವ ಬಗ್ಗೆ ಅನುಮಾನ ವ್ಯಕ್ತಪಡಿಸಿದೆ. ಪ್ರತೀ ಕ್ಷೇತ್ರದಲ್ಲೂ ಅಘಾಡಿ ಪರ ಸಹಾನುಭೂತಿ ಹೊಂದಿರುವ ಮತ ದಾರರನ್ನು ಕೈ ಬಿಡಲಾಗಿದೆ ಈ ಬಗ್ಗೆ ತನಿಖೆ ನಡೆಸಿ ಎಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Varanasi: ರೈಲು ನಿಲ್ದಾಣದ ಬಳಿ ಭಾರಿ ಅಗ್ನಿ ಅವಘಡ: 200ಕ್ಕೂ ಹೆಚ್ಚು ವಾಹನಗಳು ಬೆಂಕಿಗಾಹುತಿ
Maharashtra; ಗೊಂಡಿಯಾ ಬಸ್ ಅಪಘಾತ: 11ಕ್ಕೇರಿದ ಸಾವಿನ ಸಂಖ್ಯೆ, ಪರಿಹಾರ ಘೋಷಿಸಿದ ಪ್ರಧಾನಿ
Gujarat: 200 ರೂ ಆಸೆಗಾಗಿ ಪಾಕಿಸ್ತಾನಕ್ಕೆ ನೌಕಾಪಡೆ ಮಾಹಿತಿ ನೀಡಿದಾತನ ಬಂಧನ
Sabarimala: ಮಕ್ಕಳಿಗೆ ಪ್ರತ್ಯೇಕ ಗೇಟ್; ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ
OTP ನಿಯಮದಿಂದ ಅಗತ್ಯ ಸೇವೆಗೆ ತೊಂದರೆ ಆಗದು: ಟ್ರಾಯ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Relationships: ಸಂಬಂಧಗಳಲ್ಲಿ ಮಾಯವಾದ ಸಹಿಷ್ಣುತೆ : ಸಹಿಷ್ಣು ಗುಣದಿಂದಲೇ ಬಾಂಧವ್ಯದ ಪ್ರಗತಿ
Sirsi: ಹೃದಯಾಘಾತದಿಂದ ಮಾರಿಕಾಂಬಾ ಸರಕಾರಿ ಪ್ರೌಢ ಶಾಲೆಯ ಉಪ ಪ್ರಾಂಶುಪಾಲ ನಿಧನ
Fire Temple: ಅಜರ್ಬೈಜಾನ್‌ನಲ್ಲಿದೆ ಪುರಾತನ ಹಿಂದೂ ದೇವಾಲಯ-ಬೆಂಕಿಯುಗುಳುವ ಸಪ್ತರಂಧ್ರಗಳು
Udupi: ಬಳ್ಳಾರಿ ಬಾಣಂತಿಯರ ಸಾವು ಪ್ರಕರಣ ಹಗುರವಾಗಿ ಪರಿಗಣಿಸಿಲ್ಲ: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಪತ್ನಿಗೆ ಬೆಂಕಿ ಹಚ್ಚಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ಪತಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.