Subramanya: ಕುಕ್ಕೆಯಲ್ಲಿ ಸಂಭ್ರಮದ ಲಕ್ಷದೀಪೋತ್ಸವ: ಚಂದ್ರಮಂಡಲ ರಥದಲ್ಲಿ ಶ್ರೀ ದೇವರ ಉತ್ಸವ

ಮಹಾಪೂಜೆಯ ಬಳಿಕ ಶ್ರೀ ದೇವರ ಹೊರಾಂಗಣ ಉತ್ಸವ

Team Udayavani, Dec 1, 2024, 12:48 AM IST

klukke-SUB

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಅಂಗವಾಗಿ ಶನಿವಾರ ರಾತ್ರಿ ಭಕ್ತಿ ಸಡಗರದ ಲಕ್ಷದೀಪೋತ್ಸವ ನೆರವೇರಿತು. ಚಂದ್ರಮಂಡಲ ರಥದಲ್ಲಿ ಸುಬ್ರಹ್ಮಣ್ಯ ದೇವರ ಉತ್ಸವ ನಡೆಯಿತು.

ಅರ್ಚಕರು ಉತ್ಸವದ ವಿಧಿ ವಿಧಾನ ನೆರವೇರಿಸಿದರು. ರಥಬೀದಿಯಿಂದ ಕಾಶಿಕಟ್ಟೆ ತನಕ ಬೆಳಗಿದ ಲಕ್ಷ ಹಣತೆ ದೀಪದ ನಡುವೆ ಶ್ರೀ ದೇವರ ಉತ್ಸವ ನೆರವೇರಿತು. ದೀಪಾಲಂಕಾರಗಳ ನಡುವೆ ಭಕ್ತರ ಶ್ರೀ ದೇವರ ಲಕ್ಷದೀಪೋತ್ಸವ ರಥೋತ್ಸವವು ನೆರವೇರಿತು. ಈ ಮೂಲಕ ಶ್ರೀ ದೇವರ ರಥಬೀದಿ ಉತ್ಸವ ಆರಂಭವಾಯಿತು.

ದೇಗುಲದ ಗೋಪುರದಿಂದ ಕಾಶಿಕಟ್ಟೆ ತನಕ, ಅಭಯ ಆಂಜನೇಯ ಗುಡಿ, ಸವಾರಿ ಮಂಟಪ, ಆದಿಸುಬ್ರಹ್ಮಣ್ಯ, ಬೈಪಾಸ್‌ ರಸ್ತೆ, ಕಾಶಿಕಟ್ಟೆ ಸುತ್ತಲಿನ ಆವರಣ, ಗ್ರಾ.ಪಂ., ಪೊಲೀಸ್‌ ಠಾಣೆ, ಕಾಶಿಕಟ್ಟೆಯಿಂದ ಅಡ್ಡಬೀದಿ ವೃತ್ತದ ತನಕ ರಸ್ತೆಯ ಇಕ್ಕೆಲದಲ್ಲಿ ಸಾರ್ವಜನಿಕರು, ಸಂಘ ಸಂಸ್ಥೆಗಳ ಸಹಕಾರದಲ್ಲಿ ಕ್ಷೇತ್ರಾದ್ಯಂತ ಲಕ್ಷ ಹಣತೆ ದೀಪ ಬೆಳಗಿತು.

ಮಹಾಪೂಜೆಯ ಬಳಿಕ ಶ್ರೀ ದೇವರ ಹೊರಾಂಗಣ ಉತ್ಸವವು ಆರಂಭವಾಯಿತು. ಪ್ರಥಮವಾಗಿ ಕಾಚುಕುಜುಂಬ ದೈವವು ಶ್ರೀ ದೇವರನ್ನು ಭೇಟಿಯಾಗಿ ನುಡಿಗಟ್ಟು ನಡೆಯಿತು. ಅನಂತರ ಆಕರ್ಷಕ ಸಾಲುದೀಪಗಳ ನಡುವೆ ಶ್ರೀ ದೇವರ ಶೇಷವಾಹನಯುಕ್ತ ಬಂಡಿ ಉತ್ಸವ ಮತ್ತು ಪಾಲಕಿ ಉತ್ಸವ ಮತ್ತು ವಿವಿಧ ಸಂಗೀತ ವಾದ್ಯಗಳ ಸುತ್ತುಗಳು ನೆರವೇರಿತು. ಅಂತಿಮವಾಗಿ ಶ್ರೀ ದೇವರು ರಥಬೀದಿ ಪ್ರವೇಶಿಸಿದರು.

ಚಂದ್ರಮಂಡಲ ರಥದಲ್ಲಿ ಆರೂಢರಾಗಿ ಪೂಜೆ ಸ್ವೀಕರಿಸಿದರು. ದೇಗುಲದ ಆಡಳಿತಾಧಿಕಾರಿ ಜುಬಿನ್‌ ಮೊಹಪಾತ್ರ, ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ, ಸಹಾಯಕ ಕಾರ್ಯ ನಿರ್ವಹಣಾಧಿಕಾರಿ ಯೇಸುರಾಜ್‌, ರಾಜ್ಯ ಧಾರ್ಮಿಕ ಪರಿಷತ್‌ ಸದಸ್ಯೆ ಮಲ್ಲಿಕಾ ಪಕಳ ಸಹಿತ ಪ್ರಮುಖರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Aligarh: 14-year-old boy passed away of heart attack!

Aligarh: ಹೃದಯಾಘಾತದಿಂದ ಸಾವನ್ನಪ್ಪಿದ 14 ವರ್ಷದ ಬಾಲಕ!

Mangaluru: ಪಚ್ಚನಾಡಿಯ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಕರ್ನಾಟಕ ಉಪಲೋಕಾಯುಕ್ತ ಭೇಟಿ

ಪಚ್ಚನಾಡಿಯ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಕರ್ನಾಟಕ ಉಪಲೋಕಾಯುಕ್ತ ನ್ಯಾಯಮೂರ್ತಿ ಭೇಟಿ

7-health

Cleft Lip and Palate: ಸೀಳು ತುಟಿ ಮತ್ತು ಅಂಗುಳ- ಹೆತ್ತವರಿಗೆ ತಿಳಿವಳಿಕೆ

6-surgery

Surgery: ನಾನು ಯಾಕೆ ಶಸ್ತ್ರಚಿಕಿತ್ಸೆಗೆ ಒಳಗಾಗಬೇಕು?

Pakistan: ಶಿಯಾ-ಸುನ್ನಿ ನಡುವೆ ಭುಗಿಲೆದ್ದ ಹಿಂ*ಚಾರ, ಗುಂಡಿನ ದಾಳಿ; 124 ಮಂದಿ ಸಾವು

Pakistan: ಶಿಯಾ-ಸುನ್ನಿ ನಡುವೆ ಭುಗಿಲೆದ್ದ ಹಿಂ*ಸಾಚಾರ, ಗುಂಡಿನ ದಾಳಿ; 124 ಮಂದಿ ಸಾವು

Naxalites: ತೆಲಂಗಾಣದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, AK 47 ರೈಫಲ್‌ ವಶ

Naxal Encounter: ತೆಲಂಗಾಣದಲ್ಲಿ ಎನ್‌ಕೌಂಟರ್‌.. 7 ಮಾವೋವಾದಿಗಳ ಹತ್ಯೆ, AK 47 ರೈಫಲ್‌ ವಶ

ENGvsNZ: Joe Root breaks Sachin Tendulkar’s Test record

‌ENGvsNZ: ಸಚಿನ್‌ ತೆಂಡೂಲ್ಕರ್‌ ಟೆಸ್ಟ್‌ ದಾಖಲೆ ಮುರಿದ ಜೋ ರೂಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Bantwal: ಪಾಣೆಮಂಗಳೂರು ಸೇತುವೆಯಲ್ಲಿ ಕಾರು-ಲಾರಿ ಢಿಕ್ಕಿ

10

Sulya: ಬೆಳ್ಳಾರೆ: ಅಂಗಡಿಯಿಂದ ಕಳವು

Bantwal: ಮಟ್ಕಾ ಚೀಟಿ ದಂಧೆ; ಇಬ್ಬರ ವಿರುದ್ಧ ಪ್ರಕರಣ

Bantwal: ಮಟ್ಕಾ ಚೀಟಿ ದಂಧೆ; ಇಬ್ಬರ ವಿರುದ್ಧ ಪ್ರಕರಣ

Bantwal: ಪುದು; ಮಾದಕ ದ್ರವ್ಯ ಸೇವನೆ; ಪ್ರಕರಣ ದಾಖಲು

Bantwal: ಪುದು; ಮಾದಕ ದ್ರವ್ಯ ಸೇವನೆ; ಪ್ರಕರಣ ದಾಖಲು

bantwal news

Bantwal: 5ನೇ ಮದುವೆಗೆ ಸಿದ್ಧತೆ.. 4ನೇ ಪತ್ನಿಯ ಮೇಲೆ ಹಲ್ಲೆ ಮಾಡಿ ಮನೆಯಿಂದ ಹೊರ ಹಾಕಿದ ಪತಿ

MUST WATCH

udayavani youtube

ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

ಹೊಸ ಸೇರ್ಪಡೆ

Aligarh: 14-year-old boy passed away of heart attack!

Aligarh: ಹೃದಯಾಘಾತದಿಂದ ಸಾವನ್ನಪ್ಪಿದ 14 ವರ್ಷದ ಬಾಲಕ!

ಬೆಳಗಾವಿ: ಸಾರಾಯಿ ಬಿಲ್‌ ಕೊಡದ್ದಕ್ಕೆ ಹ*ತ್ಯೆಗೈದ ಇಬ್ಬರು ಜೈಲಿಗೆ

ಬೆಳಗಾವಿ: ಸಾರಾಯಿ ಬಿಲ್‌ ಕೊಡದ್ದಕ್ಕೆ ಹ*ತ್ಯೆಗೈದ ಇಬ್ಬರು ಜೈಲಿಗೆ

Mangaluru: ಪಚ್ಚನಾಡಿಯ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಕರ್ನಾಟಕ ಉಪಲೋಕಾಯುಕ್ತ ಭೇಟಿ

ಪಚ್ಚನಾಡಿಯ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಕರ್ನಾಟಕ ಉಪಲೋಕಾಯುಕ್ತ ನ್ಯಾಯಮೂರ್ತಿ ಭೇಟಿ

Karma comes with interest..: Nayanthara gives a taunts to Dhanush

NayantharaVsDhanush: ಕರ್ಮ ಬಡ್ಡಿ ಸಮೇತ ಬರುತ್ತೆ..: ಧನುಷ್‌ ಗೆ ಟಾಂಗ್‌ ಕೊಟ್ಟ ನಯನತಾರಾ

ಬೆಳಗಾವಿ: ಕೋಟಿ ದಾಟಿದ ಯಲ್ಲಮ್ಮದೇವಿ ಭಕ್ತರ ಸಂಖ್ಯೆ

ಬೆಳಗಾವಿ: ಕೋಟಿ ದಾಟಿದ ಯಲ್ಲಮ್ಮದೇವಿ ಭಕ್ತರ ಸಂಖ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.