Award: ರಾಜ್ಯದ ಕ್ರೀಡಾಪಟುಗಳಿಗೆ ಅಗತ್ಯ ಸವಲತ್ತು, ನೆರವು ನೀಡಲು ಸಿದ್ಧ: ಸಿಎಂ
ಕರ್ನಾಟಕ ಒಲಿಂಪಿಕ್ ಸಂಸ್ಥೆ ಆಯೋಜಿಸಿದ್ದ ಪ್ರಶಸ್ತಿ ಪ್ರದಾನ ಸಮಾರಂಭ
Team Udayavani, Dec 2, 2024, 12:41 AM IST
ಬೆಂಗಳೂರು: ರಾಜ್ಯದ ಕ್ರೀಡಾಪಟುಗಳಿಗೆ ಅಗತ್ಯ ಸವಲತ್ತು-ನೆರವು ನೀಡಲು ನಾವು ಸದಾ ಸಿದ್ದ. ರಾಜ್ಯ ಬಜೆಟ್‌ನಲ್ಲಿ ಕ್ರೀಡಾ ಕ್ಷೇತ್ರಕ್ಕೆ ನಿರಂತರ ಅನುದಾನ ನೀಡಲಾಗಿದೆ. ಒಲಿಂಪಿಕ್ಸ್‌ನಲ್ಲಿ ಚಿನ್ನ ಗೆದ್ದ ರಾಜ್ಯದ ಕ್ರೀಡಾಪಟುವಿಗೆ 6 ಕೋಟಿ ರೂ., ಬೆಳ್ಳಿ ಗೆದ್ದವರಿಗೆ 4 ಕೋಟಿ ರೂ. ಮೀಸಲಿಟ್ಟಿದ್ದೇವೆ. ದೇಶಕ್ಕೆ ಒಂದು ಚಿನ್ನದ ಪದಕ ತನ್ನಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕ್ರೀಡಾಪಟುಗಳಿಗೆ ಕರೆ ನೀಡಿದರು.
ಕರ್ನಾಟಕ ಒಲಿಂಪಿಕ್ ಸಂಸ್ಥೆ ಯವನಿಕಾದಲ್ಲಿ ಆಯೋಜಿಸಿದ್ದ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ, ಕ್ರೀಡಾಪಟುಗಳಿಗೆ ಪ್ರಶಸ್ತಿಗಳನ್ನು ವಿತರಿಸಿ ಮಾತನಾಡಿದರು. ಕ್ರೀಡಾಪಟುಗಳು ರಾಜ್ಯ, ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಬೇಕು ಎನ್ನುವ ಪೋತ್ಸಾಹದಾಯಕ ಉದ್ದೇಶದಿಂದ ಕರ್ನಾಟಕ ಒಲಿಂಪಿಕ್ ಸಂಸ್ಥೆ 22 ವರ್ಷಗಳಿಂದ ಈ ಪ್ರಶಸ್ತಿಗಳನ್ನು ನೀಡುತ್ತಿದೆ ಎಂದು ಸಿದ್ದರಾಮಯ್ಯ ಹೇಳಿದರು.
ಕಾರ್ಯಕ್ರಮದಲ್ಲಿ ಗೃಹ ಸಚಿವ ಜಿ. ಪರಮೇಶ್ವರ್, ಕರ್ನಾಟಕ ಒಲಿಂಪಿಕ್ ಸಂಸ್ಥೆಯ ಅಧ್ಯಕ್ಷ ಗೋವಿಂದರಾಜು ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Badminton: ಪಿ.ವಿ.ಸಿಂಧು, ಲಕ್ಷ್ಯಸೇನ್, ಟ್ರೀಸಾ-ಗಾಯತ್ರಿ ಚಾಂಪಿಯನ್ಸ್
Pro Kabbaddi: ದಬಾಂಗ್ ಡೆಲ್ಲಿಗೆ ಶರಣಾದ ತಮಿಳ್ ತಲೈವಾಸ್
Day-Night Test: ಪ್ರೈಮ್ ಮಿನಿಸ್ಟರ್ ಇಲೆವೆನ್ ವಿರುದ್ಧ ಅಭ್ಯಾಸ ಪಂದ್ಯ ಗೆದ್ದ ಭಾರತ
T-20 Cricket: ಬೌಲಿಂಗ್ ಸೈಕ್ಲೋನ್; ತಮಿಳುನಾಡು ತಂಡ ತತ್ತರ, ಕರ್ನಾಟಕಕ್ಕೆ ಸುಲಭ ಗೆಲುವು
ENGvsNZ: ಸಚಿನ್ ತೆಂಡೂಲ್ಕರ್ ಟೆಸ್ಟ್ ದಾಖಲೆ ಮುರಿದ ಜೋ ರೂಟ್
MUST WATCH
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಹೊಸ ಸೇರ್ಪಡೆ
Adjustment Politcs: ಬಿವೈವಿ ಹೊಂದಾಣಿಕೆ ದಾಖಲೆ ಬಿಡುಗಡೆ ಮಾಡಲೇ: ಶಾಸಕ ಯತ್ನಾಳ್
Daily Horosocpe: ವ್ಯಾಪಾರಿಗಳಿಗೆ ಅದೃಷ್ಟ, ಮಹಿಳಾ ಉದ್ಯಮಿಗಳಿಗೆ ಯಶಸ್ಸು
Local Body Election: ಫೆಬ್ರವರಿಯಲ್ಲಿ ಜಿ.ಪಂ., ತಾ.ಪಂ. ಚುನಾವಣೆ: ಡಿಸಿಎಂ ಡಿಕೆಶಿ ಸುಳಿವು
Cyclone Fengal: ಫೈಂಜಾಲ್‌ಗೆ 3 ಬಲಿ: ಪುದುಚೇರಿಯಲ್ಲಿ 30 ವರ್ಷದಲ್ಲೇ ಗರಿಷ್ಠ ಮಳೆ!
Adjustment Evidence: ಏಕೆ ಕಾಯುತ್ತೀರಿ, ಈಗಲೇ ಬಿಡುಗಡೆ ಮಾಡಿ: ಬಿ.ವೈ.ವಿಜಯೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.