ವಿಮಾನದಲ್ಲಿ ತಾಂತ್ರಿಕ ದೋಷ: ಅನ್ನ ಆಹಾರವಿಲ್ಲದೆ 13 ಗಂಟೆ ಕುವೈತ್‌ನಲ್ಲೇ ಪ್ರಯಾಣಿಕರು ಬಾಕಿ
Team Udayavani, Dec 2, 2024, 9:10 AM IST
ಕುವೈತ್: ಮುಂಬೈನಿಂದ ಮ್ಯಾಂಚೆಸ್ಟರ್‌ಗೆ ತೆರಳುತ್ತಿದ್ದ ವಿಮಾನವೊಂದು ತಾಂತ್ರಿಕ ದೋಷದಿಂದ ಕುವೈತ್ ಏರ್ ಪೋರ್ಟ್ ನಲ್ಲಿ ತುರ್ತು ಭೂಸ್ಪರ್ಶ ಮಾಡಿದ ಪರಿಣಾಮ ಭಾರತೀಯ ಪ್ರಯಾಣಿಕರು ಅನ್ನ ಆಹಾರ ಇಲ್ಲದೆ ಹದಿಮೂರು ಗಂಟೆಗಳ ಕಾಲ ಬಳಲುವಂತಾಗಿದೆ.
60 ಭಾರತೀಯ ಪ್ರಯಾಣಿಕರಿದ್ದ ಗಲ್ಫ್ ಏರ್ ವಿಮಾನ ಮುಂಬೈನಿಂದ ಮ್ಯಾಂಚೆಸ್ಟರ್‌ಗೆ ಹೊರಟಿತ್ತು ಈ ನಡುವೆ ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದ ಪರಿಣಾಮ ವಿಮಾನವನ್ನು ಕುವೈಟ್ ಇಂಟರ್ ನ್ಯಾಷನಲ್ ಏರ್ ಪೋರ್ಟ್ ನಲ್ಲಿ ತುರ್ತಾಗಿ ಇಳಿಸಲಾಯಿತು. ಅಲ್ಲದೆ ಈ ವೇಳೆ ವಿಮಾನದಲ್ಲಿದ್ದ ಭಾರತೀಯ ಪ್ರಯಾಣಿಕರಿಗೆ ಉಳಿದುಕೊಳ್ಳಲು ಯಾವುದೇ ವ್ಯವಸ್ಥೆಯನ್ನೂ ಮಾಡಿಲ್ಲ ಎಂದು ಪ್ರಯಾಣಿಕರು ಆಕ್ರೋಶ ಹೊರ ಹಾಕಿದ್ದಾರೆ ಅಲ್ಲದೆ ವಿಮಾನ ತಪಾಸಣೆ ನಡೆಸುವ ಸಮಯ ಸುಮಾರು ಹದಿಮೂರು ಗಂಟೆಗಳ ಕಾಲ ಪ್ರಯಾಣಿಕರು ವಿಮಾನ ನಿಲ್ದಾಣದಲ್ಲೇ ಅನ್ನ ಆಹಾರವಿಲ್ಲದೆ ಕಾಲ ಕಳೆಯಬೇಕಾಗಿ ಬಂತು ಎಂದು ವಿಮಾನ ಸಂಸ್ಥೆಯ ವಿರುದ್ಧ ಭಾರತೀಯ ಪ್ರಯಾಣಿಕರು ಕಿಡಿಕಾರಿದ್ದಾರೆ.
ಇದಾದ ಬಳಿಕ ಮುಂಜಾನೆ ಸುಮಾರು ೪.೩೦ ನಿಮಿಷಕ್ಕೆ ವಿಮಾನ ಮ್ಯಾಂಚೆಸ್ಟರ್‌ಗೆ ಪ್ರಯಾಣವನ್ನು ಮುಂದುವರೆಸಿದೆ ಎಂದು ಹೇಳಲಾಗಿದೆ.
ಇದನ್ನೂ ಓದಿ: Survival: ಜನಸಂಖ್ಯೆ ಕುಸಿತ ತಡೆಗೆ ಮೂರು ಮಕ್ಕಳನ್ನು ಪಡೆಯಿರಿ: ಮೋಹನ್ ಭಾಗವತ್
Indian Passengers Stranded at Kuwait Airport for Over 13 Hours After Emergency Landing
Passengers traveling from Mumbai to Manchester via Gulf Air faced a nightmare journey when their flight made an emergency landing at Kuwait International Airport due to an engine fire. Over 60… pic.twitter.com/vQyF1mge7p
— Kumaon Jagran (@KumaonJagran) December 1, 2024
ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ವಿಡಿಯೋದಲ್ಲಿ ಪ್ರಯಾಣಿಕರು ಕುವೈತ್ ವಿಮಾನ ನಿಲ್ದಾಣದ ಅಧಿಕಾರಿಗಳೊಂದಿಗೆ ವಾಗ್ವಾದ ನಡೆಸುತ್ತಿರುವುದು ಕಂಡು ಬಂದಿದೆ. ಭಾರತೀಯ ಪ್ರಯಾಣಿಕರನ್ನು ಉದ್ದೇಶಪೂರ್ವಕವಾಗಿ ನಿಂದಿಸಲಾಗುತ್ತಿದೆ ಎಂದು ಪ್ರಯಾಣಿಕರು ಆರೋಪಿಸಿದ್ದಾರೆ. ಆದರೆ ಭಾರತೀಯ ಪ್ರಯಾಣಿಕರ ದೂರಿಗೆ ಗಲ್ಫ್ ಏರ್ ನಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Illegal Gun Purchase case: ಬೈಡನ್ ಬೇಷರತ್ ಕ್ಷಮಾದಾನ-ಶಿಕ್ಷೆಯಿಂದ ಪುತ್ರ ಬಚಾವ್!
Football: ಫುಟ್ಬಾಲ್ ಪಂದ್ಯದ ವೇಳೆ ಅಭಿಮಾನಿಗಳ ನಡುವೆ ಘರ್ಷಣೆ… 100ಕ್ಕೂ ಹೆಚ್ಚು ಸಾ*ವು
Minority Attack: ಬಾಂಗ್ಲಾದಲ್ಲಿ ಭಾರತದ ಬಸ್ ಮೇಲೆ ದಾಳಿ, ದೇಶ ವಿರೋಧಿ ಘೋಷಣೆ!
America: ಡಾಲರ್‌ಗೆ ಪರ್ಯಾಯ ಕರೆನ್ಸಿ ಬಳಸಿದರೆ ಹುಷಾರ್: ಡೊನಾಲ್ಡ್ ಟ್ರಂಪ್
ಕರ್ನಾಟಕ ಸರ್ಕಾರದ ಜೊತೆ 11,000 ಕೋಟಿ ಬಂಡವಾಳ ಹೂಡಿಕೆಗೆ ಹೀರೊ ಫ್ಯೂಚರ್ ಎನರ್ಜಿಸ್ ಒಪ್ಪಂದ
MUST WATCH
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.