Disabilities Day: ಅಂಗವಿಕಲರ ಆರೈಕೆದಾರರಿಗೆ ಮಾಸಿಕ ಸಾವಿರ ರೂಪಾಯಿ ಭತ್ತೆ: ಸಿದ್ದರಾಮಯ್ಯ
ವಿಶೇಷ ಚೇತನರ ಶ್ರೇಯೋಭಿವೃದ್ಧಿಗಾಗಿ ಪ್ರಸಕ್ತ ಸಾಲಿನ ಪೂರಕ ಅಂದಾಜಿನಲ್ಲಿ 44 ಕೋಟಿ ರೂ.ಗಳನ್ನು ಮಂಜೂರು, ವಿಕಲಚೇತನರ ದಿನಾಚರಣೆಯಲ್ಲಿ ಸಿಎಂ ಘೋಷಣೆ
Team Udayavani, Dec 4, 2024, 7:10 AM IST
ಬೆಂಗಳೂರು: ದೇಶದಲ್ಲಿಯೇ ಮೊದಲ ಬಾರಿಗೆ ನಾಲ್ಕು ವಿಧವಾದ ಅಂಗವಿಕಲರ ಆರೈಕೆದಾರರಿಗೆ ಪ್ರತೀ ತಿಂಗಳು 1 ಸಾವಿರರೂ. “ಆರೈಕೆದಾರರ ಭತ್ತೆ’ ನೀಡುವ ಯೋಜನೆಯನ್ನು ರಾಜ್ಯ ಸರಕಾರ ಘೋಷಿಸಿದೆ. ಮಂಗಳವಾರ ನಡೆದ “ವಿಶ್ವ ವಿಕಲಚೇತನರ ದಿನಾಚರಣೆ-2024′ ಸಮಾರಂಭದಲ್ಲಿ ಐವರಿಗೆ ಸಾಂಕೇತಿಕವಾಗಿ ಈ ಭತ್ತೆಯನ್ನು ವಿತರಿಸಲಾಯಿತು.
ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಮಂಗಳವಾರ ಹಮ್ಮಿಕೊಂಡಿದ್ದ “ವಿಶ್ವ ವಿಕಲಚೇತನರ ದಿನಾಚರಣೆ-2024′ ಸಮಾರಂಭವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, 2023-24ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದಂತೆ 7 ಜಿಲ್ಲೆಗಳಲ್ಲಿ 2 ಕೋಟಿ ರೂ. ವೆಚ್ಚದಲ್ಲಿ 10 ಬುದ್ಧಿಮಾಂದ್ಯ ಮಕ್ಕಳ ವಸತಿ ಶಾಲೆಗಳನ್ನು ತೆರೆಯಲಾಗಿದ್ದು, ಇನ್ನೂ 13 ಹೊಸ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸಲಾಗಿದೆ. ಗ್ರಾಮೀಣ ಪುನರ್ವಸತಿ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಕಾರ್ಯಕರ್ತರ ಅವಲಂಬಿತರಿಗೆ ನೀಡಲಾಗುವ ಮರಣ ಪರಿಹಾರ ನಿಧಿಯನ್ನು 2023ನೇ ಸಾಲಿನಲ್ಲಿ 50 ಸಾವಿರದಿಂದ 1 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗಿದೆ ಎಂದು ವಿವರಿಸಿದರು.
ವಿಕಲಚೇತನರಿಗೆ ಸರಕಾರಿ ಉದ್ಯೋಗಗಳಲ್ಲಿ “ಸಿ’ ಮತ್ತು ಡಿ’ ಸಮೂಹದ ಹುದ್ದೆಗಳಲ್ಲಿ ಶೇ. 5 ಹಾಗೂ “ಎ’ ಮತ್ತು “ಬಿ’ ಹುದ್ದೆಗಳಲ್ಲಿ ಶೇ. 4ರಷ್ಟು ಮೀಸಲಾತಿ ನೀಡಲಾಗಿದೆ. ಅಲ್ಲದೆ ಇವರು ನಿರ್ವಹಿಸಬಹುದಾದಂತಹ ಹುದ್ದೆಗಳನ್ನು ಗುರುತಿಸಲು ರಾಜ್ಯ ಮಟ್ಟದಲ್ಲಿ ತಜ್ಞರ ಸಮಿತಿ ರಚಿಸಲಾಗಿದ್ದು, ಇಲಾಖೆಗಳಲ್ಲಿನ ಹುದ್ದೆಗಳನ್ನು ಗುರುತಿಸುವ ಕಾರ್ಯ ನಡೆಯುತ್ತಿದೆ. ವಿಕಲಚೇತನರ ಅನುಕೂಲಕ್ಕಾಗಿ ವಾಹನಗಳನ್ನು ನೀಡಲು ಈಗಾಗಲೇ ಸೂಚನೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು.
ಸಂವಿಧಾನದಲ್ಲಿ ಎಲ್ಲರೂ ಬದುಕುವ, ಉದ್ಯೋಗ ಪಡೆಯುವಂತಹ ಅವಕಾಶವನ್ನು ಕಲ್ಪಿಸಿದೆ. ವಿಕಲಚೇತನರು ಸಮಾಜಕ್ಕೆ ಹೊರೆಯಲ್ಲ. ಅವರು ಸಮಾಜದ ಆಸ್ತಿಯಾಗಿದ್ದು, ಎಲ್ಲ ಕ್ಷೇತ್ರಗಳಲ್ಲಿಯೂ ಸಾಧನೆ ಮಾಡುತ್ತಿದ್ದಾರೆ. ಈ ಬಾರಿ ವಿಶ್ವ ವಿಕಲಚೇತನರ ದಿನಾಚರಣೆಯನ್ನು “ಸಮಗ್ರ ಮತ್ತು ಸುಸ್ಥಿರ ಭವಿಷ್ಯಕ್ಕಾಗಿ ವಿಕಲಚೇತನ ವ್ಯಕ್ತಿಗಳಲ್ಲಿ ನಾಯಕತ್ವದ ಉತ್ತೇಜನ”… pic.twitter.com/YlcJbJzsgs
— CM of Karnataka (@CMofKarnataka) December 3, 2024
ಶ್ರೇಯೋಭಿವೃದ್ಧಿಗೆ 44 ಕೋಟಿ ರೂ. ಮಂಜೂರು ಭರವಸೆ
ವಿಕಲಚೇತನರು ಸಮಾಜಕ್ಕೆ ಹೊರೆಯಲ್ಲ, ಅವರು ಸಮಾಜದ ಆಸ್ತಿ. ವಿಶೇಷ ಚೇತನರ ಸಶಕ್ತೀಕರಣಕ್ಕೆ ಸರಕಾರ ಸದಾ ಬದ್ಧವಾಗಿದ್ದು, ಶ್ರೇಯೋಭಿವೃದ್ಧಿಗಾಗಿ ಪ್ರಸಕ್ತ ಸಾಲಿನ ಪೂರಕ ಅಂದಾಜಿನಲ್ಲಿ 44 ಕೋಟಿ ರೂ.ಗಳನ್ನು ಮಂಜೂರು ಮಾಡುವ ಭರವಸೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದರು.
ಸಂವಿಧಾನದಲ್ಲಿ ಪ್ರತಿಯೊಬ್ಬರಿಗೂ ಬದುಕುವ ಹಕ್ಕಿದೆ. ರಾಜ್ಯದಲ್ಲಿ ಸುಮಾರು 15 ಲಕ್ಷ ವಿಕಲಚೇತನರಿದ್ದಾರೆ. ಇವರೆಲ್ಲರ ಆರೈಕೆ ಮಾಡಿ ವಿಶೇಷ ಸೌಲಭ್ಯಗಳನ್ನು ನೀಡುವುದು ಸರಕಾರದ ಕರ್ತವ್ಯ ಎಂದರು.
ರಾಜಿ ಬೇಡ: ಡಿಸಿಎಂ
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾತನಾಡಿ, ಅಂಗವೈಕಲ್ಯ ವರವೂ ಅಲ್ಲ, ಶಾಪವೂ ಅಲ್ಲ. ದೇವರು ಜೀವನದಲ್ಲಿ ನೀಡಿರುವ ಪರೀಕ್ಷೆ. ಇದನ್ನು ಮೆಟ್ಟಿನಿಂತು ಸಾಧನೆಗೈದ ಪುಟ್ಟರಾಜ ಗವಾಯಿ, ಪಂಚಾಕ್ಷರಿ ಗವಾಯಿ ಮತ್ತಿತರ ಅನೇಕರು ಸಮಾಜಕ್ಕೆ ಪ್ರೇರಣೆಯಾಗಿದ್ದಾರೆ ಎಂದರು. ನಿಮಗೆಲ್ಲ ಗಣಪತಿ ಸ್ಫೂರ್ತಿ. ಆನೆಯ ತಲೆ, ಸೊಂಡಿಲು, ಮುರಿದ ದಂತವಿದ್ದರೂ ಆತನನ್ನು ವಿಘ್ನ ನಿವಾರಿಸುವ ನಾಯಕ ಎಂದು ಪೂಜಿಸುತ್ತೇವೆ. ಅದೇ ರೀತಿ ನಿಮ್ಮಲ್ಲಿ ಮನೋಬಲ ಹೆಚ್ಚಾಗಿರಬೇಕು. ನಿಮಗೆ ಎಲ್ಲ ರೀತಿಯ ಸಾಧನೆ ಮಾಡುವ ಶಕ್ತಿ ಇದೆ. ಸಾಧನೆಯ ಹಾದಿಯಲ್ಲಿ ಯಾವುದೇ ರಾಜಿ ಬೇಡ ಎಂದು ವಿಶೇಷ ಚೇತನ ಮಕ್ಕಳಲ್ಲಿ ವಿಶ್ವಾಸ ತುಂಬಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ankola: ಆಟವಾಡುವ ವೇಳೆ ಮೈ ಮೇಲೆ ಗೇಟ್ ಬಿದ್ದು 6 ವರ್ಷದ ಬಾಲಕ ಮೃತ್ಯು
Highcourt: ವಕೀಲೆ ಜೀವಾ ಆತ್ಮಹತ್ಯೆ ಕೇಸ್ ಸಿಬಿಐಗಿಲ್ಲ… ಎಸ್‌ಐಟಿ ರಚಿಸಿದ ಹೈಕೋರ್ಟ್
Notice: ಅಕ್ರಮ ಮದ್ಯ ಮಾರಾಟ… ರಾಜ್ಯ ಸರಕಾರಕ್ಕೆ ನೋಟಿಸ್
MUDA Case: ಲೋಕಾಯುಕ್ತಕ್ಕೆ ಇಡಿ ಬರೆದಿರುವ ಪತ್ರ ರಾಜಕೀಯ ಪ್ರೇರಿತ: ಸಿದ್ದರಾಮಯ್ಯ
ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳ ದತ್ತು ಪಡೆಯಲು ಅವಕಾಶ: ಸಚಿವ
MUST WATCH
ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ
ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ
60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಹೊಸ ಸೇರ್ಪಡೆ
Lokasabha: ಸ್ಪೀಕರ್ ಅನುಮತಿ ಬಳಿಕ ಸಂಸದರ ಪ್ರಶ್ನೆಗೆ ಉತ್ತರಿಸಿ: ಕೇಂದ್ರ ಸಚಿವರಿಗೆ ಸೂಚನೆ
Happy Time: ಕೋತಿಯೊಂದಿಗೆ ಹೃದಯಸ್ಪರ್ಶಿ ಕ್ಷಣ ಕಳೆದ ಸಂಸದ ಶಶಿ ತರೂರ್
Earthquake Strikes: ತೆಲಂಗಾಣ, ಆಂಧ್ರಪ್ರದೇಶ, ಮಹಾರಾಷ್ಟ್ರದಲ್ಲಿ ಭೂಕಂಪ
Railway: ಎಸಿ ಬೋಗಿಗಳ ಬದಲು ಸಾಮಾನ್ಯ ಬೋಗಿ ಸೇರ್ಪಡೆ ಹೆಚ್ಚಳಕ್ಕೆ ಕ್ರಮ: ರೈಲ್ವೇ ಸಚಿವ
Asia Cup Cricket: ಅಂಡರ್-19 ಏಷ್ಯಾ ಕಪ್ ಕ್ರಿಕೆಟ್: ಸೆಮಿಫೈನಲ್ ಪ್ರವೇಶಿಸಿದ ಭಾರತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.