Show cause Notice: ಶಿಸ್ತು ಸಮಿತಿಯ ಮುಂದೆ ಇಂದು ಬಸನಗೌಡ ಪಾಟೀಲ್ ಯತ್ನಾಳ್ ಹಾಜರು
ಯತ್ನಾಳ್ ಅವರೊಬ್ಬರಿಂದಲೇ ವಿವರಣೆ
Team Udayavani, Dec 4, 2024, 7:15 AM IST
ಬೆಂಗಳೂರು: ಪಕ್ಷದಿಂದ ಶೋಕಾಸ್ ನೋಟಿಸ್ ಪಡೆದ ಅನಂತರವೂ ದಿಲ್ಲಿಯಲ್ಲಿಯೇ ಇರುವ “ಭಿನ್ನ ನಾಯಕ’ಯತ್ನಾಳ್ ಬುಧವಾರ ಪಕ್ಷದ ಕೇಂದ್ರೀಯ ಶಿಸ್ತು ಸಮಿತಿಯ ಮುಂದೆ ಹಾಜರಾಗಿ ವಿವರಣೆ ನೀಡಲಿದ್ದಾರೆ. ಈ ಮಧ್ಯೆ ಯತ್ನಾಳ್ ತಂಡವು ಸಂಸತ್ತಿನ ವಕ್ಫ್ ಜಂಟಿ ಸದನ ಸಮಿತಿಯ ಅಧ್ಯಕ್ಷ ಜಗದಂಬಿಕಾ ಪಾಲ್ ಅವರನ್ನು ಭೇಟಿ ಮಾಡಿ ವಿವರಣೆ ನೀಡಿದೆ.
ಶಾಸಕರಾದ ರಮೇಶ ಜಾರಕಿಹೊಳಿ, ಬಿ.ಪಿ. ಹರೀಶ್, ಮಾಜಿ ಸಚಿವರಾದ ಕುಮಾರ್ ಬಂಗಾರಪ್ಪ, ಅರವಿಂದ ಲಿಂಬಾವಳಿ ಮೊದಲಾದವರು ಯತ್ನಾಳ್ ನೇತೃತ್ವದಲ್ಲಿ ಮಂಗಳವಾರ ಸಭೆ ಸೇರಿ ಸಮಾಲೋಚನೆ ನಡೆಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರಮೇಶ ಜಾರಕಿಹೊಳಿ, ಬುಧವಾರ ಬೆಳಗ್ಗೆ 11.30ಕ್ಕೆ ಬರುವಂತೆ ಶಿಸ್ತು ಸಮಿತಿಯ ಸದಸ್ಯ ಕಾರ್ಯದರ್ಶಿ ಓಂ ಪಾಠಕ್ ಕರೆ ಮಾಡಿ ಸೂಚಿಸಿದ್ದಾರೆ. ಯತ್ನಾಳ್ ಅವರೊಬ್ಬರೇ ವಿವರಣೆ ನೀಡಲಿದ್ದಾರೆ. ನಾವು ಪಕ್ಷದ ಚೌಕಟ್ಟಿನಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ ಎಂದು ಸ್ಪಷ್ಟಪಡಿಸಿದರು.
ಯತ್ನಾಳ್ ಮೇಲೆ ಕ್ರಮ ಸಾಧ್ಯತೆ ಕ್ಷೀಣ?
ಇದೆಲ್ಲದರ ಮಧ್ಯೆ ರಾಜ್ಯವನ್ನು ಪ್ರತಿನಿಧಿಸುವ ಎನ್‌ಡಿಎ ಸಂಸದರ ನಿಯೋಗ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನಿವಾಸದಲ್ಲಿ ಸಭೆ ಸೇರಿ ವಿಜಯೇಂದ್ರ ಯತ್ನಾಳ್ ಬಣ ರಾಜಕಾರಣದಿಂದ ಸೃಷ್ಟಿಯಾಗಿರುವ ಬಿಕ್ಕಟ್ಟಿನ ಬಗ್ಗೆ ಸುದೀರ್ಘ ಚರ್ಚೆ ನಡೆಸಿದೆ. ಈ ತಂಡ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಜತೆಗೂ ಮಾತುಕತೆ ನಡೆಸಿದೆ ಎಂದು ಹೇಳಲಾಗುತ್ತಿದ್ದು, ಯತ್ನಾಳ್ ವಿರುದ್ಧ ತತ್‌ಕ್ಷಣ ಕ್ರಮ ತೆಗೆದುಕೊಳ್ಳುವ ಸಾಧ್ಯತೆ ಈಗ ಕ್ಷೀಣಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ankola: ಆಟವಾಡುವ ವೇಳೆ ಮೈ ಮೇಲೆ ಗೇಟ್ ಬಿದ್ದು 6 ವರ್ಷದ ಬಾಲಕ ಮೃತ್ಯು
Highcourt: ವಕೀಲೆ ಜೀವಾ ಆತ್ಮಹತ್ಯೆ ಕೇಸ್ ಸಿಬಿಐಗಿಲ್ಲ… ಎಸ್‌ಐಟಿ ರಚಿಸಿದ ಹೈಕೋರ್ಟ್
Notice: ಅಕ್ರಮ ಮದ್ಯ ಮಾರಾಟ… ರಾಜ್ಯ ಸರಕಾರಕ್ಕೆ ನೋಟಿಸ್
MUDA Case: ಲೋಕಾಯುಕ್ತಕ್ಕೆ ಇಡಿ ಬರೆದಿರುವ ಪತ್ರ ರಾಜಕೀಯ ಪ್ರೇರಿತ: ಸಿದ್ದರಾಮಯ್ಯ
ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳ ದತ್ತು ಪಡೆಯಲು ಅವಕಾಶ: ಸಚಿವ
MUST WATCH
ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ
ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ
60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಹೊಸ ಸೇರ್ಪಡೆ
Lokasabha: ಸ್ಪೀಕರ್ ಅನುಮತಿ ಬಳಿಕ ಸಂಸದರ ಪ್ರಶ್ನೆಗೆ ಉತ್ತರಿಸಿ: ಕೇಂದ್ರ ಸಚಿವರಿಗೆ ಸೂಚನೆ
Happy Time: ಕೋತಿಯೊಂದಿಗೆ ಹೃದಯಸ್ಪರ್ಶಿ ಕ್ಷಣ ಕಳೆದ ಸಂಸದ ಶಶಿ ತರೂರ್
Earthquake Strikes: ತೆಲಂಗಾಣ, ಆಂಧ್ರಪ್ರದೇಶ, ಮಹಾರಾಷ್ಟ್ರದಲ್ಲಿ ಭೂಕಂಪ
Railway: ಎಸಿ ಬೋಗಿಗಳ ಬದಲು ಸಾಮಾನ್ಯ ಬೋಗಿ ಸೇರ್ಪಡೆ ಹೆಚ್ಚಳಕ್ಕೆ ಕ್ರಮ: ರೈಲ್ವೇ ಸಚಿವ
Asia Cup Cricket: ಅಂಡರ್-19 ಏಷ್ಯಾ ಕಪ್ ಕ್ರಿಕೆಟ್: ಸೆಮಿಫೈನಲ್ ಪ್ರವೇಶಿಸಿದ ಭಾರತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.