Cyclone Fengal: ತಮಿಳುನಾಡಿನ 15 ಜಿಲ್ಲೆಯಲ್ಲಿ ಪ್ರವಾಹ: 721 ಮನೆ ನೆಲಸಮ
"ಫೈಂಜಾಲ್' ತೀವ್ರತೆ ಕುಗ್ಗಿದರೂ ಮುಂದುವರಿದ ಮಳೆ, ದೈನಂದಿನ ಅಗತ್ಯ ಪೂರೈಸಿಕೊಳ್ಳಲು ಪರದಾಟ
Team Udayavani, Dec 4, 2024, 7:35 AM IST
ಚೆನ್ನೈ: ಫೈಂಜಾಲ್ ಚಂಡಮಾರುತದ ತೀವ್ರತೆ ಕುಗ್ಗಿದ್ದರೂ ಸಹ ತಮಿಳುನಾಡು ಮತ್ತು ಪುದು ಚೆರಿಯಲ್ಲಿ ಮಳೆ ಮುಂದುವರಿದಿದೆ. ಸತತ 3 ದಿನದಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ದಿನನಿತ್ಯದ ಬಳಕೆಯ ವಸ್ತುಗಳನ್ನು ಪಡೆದುಕೊಳ್ಳಲು ಸಹ ಜನರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.
ತಮಿಳುನಾಡು ಮತ್ತು ಪುದುಚೆರಿಯಲ್ಲಿ ಇನ್ನೂ ಹಲವು ಪ್ರದೇಶಗಳು ಮುಳುಗಡೆಯಾಗಿದ್ದು, ರಸ್ತೆ ಸಂಪರ್ಕ ಕಳೆದುಕೊಂಡು ದ್ವೀಪದಂತಾಗಿವೆ. ತಮಿಳು ನಾಡಿ ನಲ್ಲಿ ಕನಿಷ್ಠ 15 ಜಿಲ್ಲೆಗಳು ಪ್ರವಾಹ ಪರಿಸ್ಥಿತಿಗೆ ತುತ್ತಾಗಿದ್ದು, ಈ ಜಿಲ್ಲೆಗಳಲ್ಲಿ ಬುಧವಾರವೂ ಎಲ್ಲೋ ಅಲರ್ಟ್ ಘೋಷಿಸಲಾಗಿದೆ. 2 ರಾಜ್ಯಗಳಲ್ಲಿ ಮಳೆ ಸಂಬಂಧಿತ ಅವಘಡಗಳಿಗೆ 12 ಮಂದಿ ಮೃತಪಟ್ಟಿದ್ದು, 2,416 ಗುಡಿಸಲು ಹಾಗೂ 721 ಮನೆಗಳು ನಾಶವಾ ಗಿವೆ. ಎನ್‌ಡಿಆರ್‌ಎಫ್ ಹಾಗೂ ರಾಜ್ಯ ವಿಪತ್ತು ಪರಿಹಾರ ತಂಡಗಳು ರಕ್ಷಣ ಕಾರ್ಯಾಚರಣೆ ನಡೆಸುತ್ತಿವೆ.
2000 ರೂ. ಪರಿಹಾರ:
ಫೈಂಜಾಲ್ ಚಂಡಮಾರುತದಿಂದ ಸಮಸ್ಯೆಗೆ ತುತ್ತಾಗಿರುವ ವಿಲ್ಲುಪುರಂ, ಕಡಲೂರು ಮತ್ತು ಕಲ್ಲಕುರಿಚಿ ಜಿಲ್ಲೆಗಳಲ್ಲಿ ಪ್ರವಾಹದಿಂದ ತೊಂದರೆಗೊಳಗಾದವರಿಗೆ ಸಿಎಂ ಎಂ.ಕೆ.ಸ್ಟಾಲಿನ್ 2,000 ರೂ. ತುರ್ತು ಪರಿಹಾರ ಘೋಷಣೆ ಮಾಡಿದ್ದಾರೆ.
ಕರೆ ಮಾಡಿ ಪರಿಹಾರದ ಭರವಸೆ ನೀಡಿದ ಮೋದಿ
ಪ್ರವಾಹ ಪರಿಸ್ಥಿತಿ ಸಂಬಂಧ ಎಂ.ಕೆ.ಸ್ಟಾಲಿನ್‌ಗೆ ಕರೆ ಮಾಡಿ ಮಾತನಾಡಿರುವ ಪ್ರಧಾನಿ ಮೋದಿ ಅವರು ಸೂಕ್ತ ಪರಿಹಾರದ ಭರವಸೆ ನೀಡಿದ್ದಾರೆ. ಕೇಂದ್ರ ತಂಡ ಕಳುಹಿಸಿ ಪರಿಶೀಲನೆ ನಡೆಸಬೇಕು ಎಂದು ಸ್ಟಾಲಿನ್ ಮನವಿ ಮಾಡಿದ್ದಾರೆ.
ಡಿಎಂಕೆ ಸಚಿವನಿಗೆ ಕೆಸರಿನ ಸ್ವಾಗತ
ಪ್ರವಾಹ ಪೀಡಿತ ಪ್ರದೇಶವೊಂದಕ್ಕೆ ಭೇಟಿ ನೀಡಿದ ಡಿಎಂಕೆ ಸಚಿವ ಕೆ.ಪೊನ್ಮುಡಿ ಅವರಿಗೆ ಕೆಸರು ಎರಚುವ ಮೂಲಕ ಜನ ಸ್ವಾಗತ ಕೋರಿದ ಘಟನೆ ವಿಲ್ಲುಪುರಂ ನಲ್ಲಿ ನಡೆದಿದೆ. ತತ್‌ಕ್ಷಣ ಮಧ್ಯಪ್ರವೇಶಿಸಿದ ಪೊಲೀಸರು ಸಚಿವರನ್ನು ರಕ್ಷಿಸಿ ಕಳುಹಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಅಣ್ಣಾಮಲೈ, ಇದು ತಮಿಳುನಾಡಿನ ಸದ್ಯದ ಸ್ಥಿತಿಯಾಗಿದೆ. ಚೆನ್ನೈ ನಗರದಾಚೆಗೆ ಏನಾಗುತ್ತಿದೆ ಎಂಬುದು ಸರಕಾರಕ್ಕೆ ತಿಳಿಯುತ್ತಿಲ್ಲ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lokasabha: ಸ್ಪೀಕರ್ ಅನುಮತಿ ಬಳಿಕ ಸಂಸದರ ಪ್ರಶ್ನೆಗೆ ಉತ್ತರಿಸಿ: ಕೇಂದ್ರ ಸಚಿವರಿಗೆ ಸೂಚನೆ
Happy Time: ಕೋತಿಯೊಂದಿಗೆ ಹೃದಯಸ್ಪರ್ಶಿ ಕ್ಷಣ ಕಳೆದ ಸಂಸದ ಶಶಿ ತರೂರ್
Earthquake Strikes: ತೆಲಂಗಾಣ, ಆಂಧ್ರಪ್ರದೇಶ, ಮಹಾರಾಷ್ಟ್ರದಲ್ಲಿ ಭೂಕಂಪ
Railway: ಎಸಿ ಬೋಗಿಗಳ ಬದಲು ಸಾಮಾನ್ಯ ಬೋಗಿ ಸೇರ್ಪಡೆ ಹೆಚ್ಚಳಕ್ಕೆ ಕ್ರಮ: ರೈಲ್ವೇ ಸಚಿವ
Mahayuti Claim: ಮಹಾರಾಷ್ಟ್ರಕ್ಕಾಗಿ ನಾವು ಮೂವರು ಒಟ್ಟಾಗಿ ಕೆಲಸ ಮಾಡುತ್ತೇವೆ: ಫಡ್ನವೀಸ್
MUST WATCH
ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ
ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ
60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಹೊಸ ಸೇರ್ಪಡೆ
Lokasabha: ಸ್ಪೀಕರ್ ಅನುಮತಿ ಬಳಿಕ ಸಂಸದರ ಪ್ರಶ್ನೆಗೆ ಉತ್ತರಿಸಿ: ಕೇಂದ್ರ ಸಚಿವರಿಗೆ ಸೂಚನೆ
Happy Time: ಕೋತಿಯೊಂದಿಗೆ ಹೃದಯಸ್ಪರ್ಶಿ ಕ್ಷಣ ಕಳೆದ ಸಂಸದ ಶಶಿ ತರೂರ್
Earthquake Strikes: ತೆಲಂಗಾಣ, ಆಂಧ್ರಪ್ರದೇಶ, ಮಹಾರಾಷ್ಟ್ರದಲ್ಲಿ ಭೂಕಂಪ
Railway: ಎಸಿ ಬೋಗಿಗಳ ಬದಲು ಸಾಮಾನ್ಯ ಬೋಗಿ ಸೇರ್ಪಡೆ ಹೆಚ್ಚಳಕ್ಕೆ ಕ್ರಮ: ರೈಲ್ವೇ ಸಚಿವ
Asia Cup Cricket: ಅಂಡರ್-19 ಏಷ್ಯಾ ಕಪ್ ಕ್ರಿಕೆಟ್: ಸೆಮಿಫೈನಲ್ ಪ್ರವೇಶಿಸಿದ ಭಾರತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.