Punjab;ಸ್ವರ್ಣ ಮಂದಿರದ ಪ್ರವೇಶದ್ವಾರದಲ್ಲೇ ಮಾಜಿ ಡಿಸಿಎಂ ಬಾದಲ್ ಹ*ತ್ಯೆಗೆ ಯತ್ನ: ವಿಡಿಯೋ
ಗುಂಡು ಹಾರಿಸಿದ ದುಷ್ಕರ್ಮಿ.. ಉದ್ವಿಗ್ನ ವಾತಾವರಣ ..
Team Udayavani, Dec 4, 2024, 10:11 AM IST
ಅಮೃತಸರ: ಪಂಜಾಬ್‌ನ ಮಾಜಿ ಡಿಸಿಎಂ ಸುಖ್ಬೀರ್ ಸಿಂಗ್ ಬಾದಲ್ ಅವರನ್ನು ದುಷ್ಕರ್ಮಿಯೊಬ್ಬ ಗುಂಡಿಕ್ಕಿ ಹತ್ಯೆಗೈಯಲು ಯತ್ನಿಸಿದ ಘಟನೆ ಬುಧವಾರ(ಡಿ4) ನಡೆದಿದೆ.
ಸಿಕ್ಖ್ ಧಾರ್ಮಿಕ ಸಂಸ್ಥೆ ಅಕಾಲ್ ತಖ್ತ್‌ನಿಂದ ಧರ್ಮದ್ರೋಹಕ್ಕಾಗಿ ಶಿಕ್ಷಿತರಾಗಿರುವ ಸುಖ್ಬೀರ್ ಸಿಂಗ್ ಬಾದಲ್ ಅವರನ್ನು ಗುರಿಯಾಗಿರಿಸಿ ಖಲಿಸ್ಥಾನ್ ಬೆಂಬಲಿಗ ನಾರಾಯಣ ಸಿಂಗ್ ಎಂದು ಹೇಳಲಾದ ದುಷ್ಕರ್ಮಿ ಗುಂಡು ಹಾರಿಸಿ ಹತ್ಯೆ ಮಾಡಲು ಮುಂದಾಗಿದ್ದ. ಕೂದಲೆಳೆ ಅಂತರದಲ್ಲಿ ಬಾದಲ್ ಪಾರಾಗಿದ್ದು ಸ್ಥಳದಲ್ಲಿದ್ದವರು ದುಷ್ಕರ್ಮಿಯನ್ನು ತಡೆದಿದ್ದಾರೆ. ಈ ವೇಳೆ ಗಾಳಿಯಲ್ಲಿ ಗುಂಡು ಹಾರಿಸಲಾಗಿದೆ.
ಸುಖ್ಬೀರ್ ಸಿಂಗ್ ಬಾದಲ್ ತಮ್ಮ ಶಿಕ್ಷೆಯನ್ನು ಮಂಗಳವಾರದಿಂದ ಸ್ವೀಕರಿಸಲು ಪ್ರಾರಂಭಿಸಿದ್ದರು. ಕುತ್ತಿಗೆಗೆ ಫಲಕ, ಕೈಯಲ್ಲಿ ಈಟಿ ಹಿಡಿದ ಸುಖ್ಬೀರ್ ಸಿಂಗ್, ತಮ್ಮ ಗಾಲಿ ಕುರ್ಚಿಯಲ್ಲಿ ಕುಳಿತೇ ಅಮೃತಸರದ ಸ್ವರ್ಣ ಮಂದಿರದ ಪ್ರವೇಶದ್ವಾರದ ಸೇವಾದಾರನ ವೃತ್ತಿ ನಿಭಾಯಿಸುತ್ತಿದ್ದರು.
View this post on Instagram
ಸ್ಥಳಕ್ಕೆ ಹೆಚ್ಚುವರಿ ಪೊಲೀಸರು ದೌಡಾಯಿಸಿದ್ದು, ಆತಂಕಕಾರಿ ವಾತಾವರಣ ನಿರ್ಮಾಣವಾಗಿದೆ.ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.
ಮತ್ತೋರ್ವ ಅಕಾಲಿ ದಳ ನಾಯಕ ಬಿಕ್ರಮ್ ಸಿಂಗ್ ಮಜೀಠಿಯಾ ಕೂಡ ಗುರುದ್ವಾರದ ಪಾತ್ರೆಗಳನ್ನು ತೊಳೆಯುವ ಮೂಲಕ ಶಿಕ್ಷೆಯನ್ನು ಪ್ರಾರಂಭಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sabarimala: ಮೂರು ಅನ್ನದಾನ ಮಂಟಪ ಆರಂಭ
Lokasabha: ಸ್ಪೀಕರ್ ಅನುಮತಿ ಬಳಿಕ ಸಂಸದರ ಪ್ರಶ್ನೆಗೆ ಉತ್ತರಿಸಿ: ಕೇಂದ್ರ ಸಚಿವರಿಗೆ ಸೂಚನೆ
Happy Time: ಕೋತಿಯೊಂದಿಗೆ ಹೃದಯಸ್ಪರ್ಶಿ ಕ್ಷಣ ಕಳೆದ ಸಂಸದ ಶಶಿ ತರೂರ್
Earthquake Strikes: ತೆಲಂಗಾಣ, ಆಂಧ್ರಪ್ರದೇಶ, ಮಹಾರಾಷ್ಟ್ರದಲ್ಲಿ ಭೂಕಂಪ
Railway: ಎಸಿ ಬೋಗಿಗಳ ಬದಲು ಸಾಮಾನ್ಯ ಬೋಗಿ ಸೇರ್ಪಡೆ ಹೆಚ್ಚಳಕ್ಕೆ ಕ್ರಮ: ರೈಲ್ವೇ ಸಚಿವ
MUST WATCH
ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ
ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ
60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಹೊಸ ಸೇರ್ಪಡೆ
Moodbidri: ಡಿ.10 -15; “ಆಳ್ವಾಸ್ ವಿರಾಸತ್’ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ
Subrahmanya: ಅಂಗಡಿಗಳ ಮೇಲೆ ದಾಳಿ; ತಂಬಾಕು ಉತ್ಪನ್ನಗಳು ವಶಕ್ಕೆ
Karnataka Congress: ಯಾವುದೇ ಒಪ್ಪಂದ ಆಗಿಲ್ಲ: ಸಿಎಂ ಸಿದ್ದರಾಮಯ್ಯ
Pilikula Kambala: ಪಿಲಿಕುಳದಲ್ಲಿ ಕಂಬಳ… ವಿಚಾರಣೆ ಮುಂದಕ್ಕೆ
Udupi: ಬೈಲೂರು ಶ್ರೀ ಮಹಿಷಮರ್ದಿನಿ ದೇವಸ್ಥಾನ: ಡಿ. 14: ಶತಚಂಡಿಕಾ ಯಾಗ, ಬ್ರಹ್ಮಮಂಡಲ ಸೇವೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.