Waqf ವಿರುದ್ಧ ವಿಜಯೇಂದ್ರ ನೇತೃತ್ವದ ಹೋರಾಟಕ್ಕೆ ಚಾಲನೆ
ನಮ್ಮ ಭೂಮಿ- ನಮ್ಮ ಹಕ್ಕು
Team Udayavani, Dec 4, 2024, 2:21 PM IST
ಬೀದರ್ : ವಕ್ಫ್ ಕಾನೂನು ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಾಜ್ಯದಲ್ಲಿ ಆರಂಭಿಸಿರುವ ‘ನಮ್ಮ ಭೂಮಿ- ನಮ್ಮ ಹಕ್ಕು’ ಹೋರಾಟಕ್ಕೆ ಬುಧವಾರ ಗಡಿ ಜಿಲ್ಲೆ ಬೀದರ್ ನಲ್ಲಿ ಚಾಲನೆ ನೀಡಲಾಯಿತು.
ನಗರದ ಗಾಂಧಿ ಗಂಜ್ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ವಕ್ಪ್ ವಿರುದ್ಧ ಕಳಹೆ ಮೊಳಗಿಸಿದ್ದಾರೆ. ಇತ್ತೀಚೆಗೆ ಬಿಜೆಪಿ ರೆಬೆಲ್ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ನೇತೃತ್ವದ ತಂಡ ಹೋರಾಟಕ್ಕೆ ಪರ್ಯಾಯವಾಗಿ ಹೋರಾಟ ಆಯೋಜಿಸಲಾಗಿದ್ದು, ವಿದ್ಯುಕ್ತವಾಗಿ ಆರಂಭಿಸಲಾಯಿತು. ಬಿಜೆಪಿಯ ಶಾಸಕರು, ಮಾಜಿ ಸಚಿವರು ಮತ್ತು ಹಿರಿಯ ನಾಯಕರು ವಿಜಯೇಂದ್ರ ಅವರಿಗೆ ಸಾಥ್ ನೀಡಿದ್ದಾರೆ.
ಗಾಂಧಿ ಗಂಜ್ ನಲ್ಲಿ ಸಾರ್ವಜನಿಕ ಸಭೆ ಬಳಿಕ ಪ್ರಮುಖ ರಸ್ತೆಗಳ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ರಾಷ್ಟ್ರಪತಿಗಳಿಗೆ ಬರೆದ ಮನವಿ ಪತ್ರವನ್ನು ಸಲ್ಲಿಸಲಿದ್ದಾರೆ. ಬಳಿಕ ವಕ್ಫ್ ಬೋರ್ಡ್ ನಿಂದ ಅನ್ಯಾಯಕ್ಕೆ ಒಳಗಾದ ಚಟ್ನಳ್ಳಿ ಗ್ರಾಮಕ್ಕೆ ಭೇಟಿ ನೀಡಿ, ಜನರ ಅಹವಾಲು ಆಲಿಸಲಿದ್ದಾರೆ.
ಮಾಜಿ ಡಿಸಿಎಂಗಳಾದ ಶ್ರೀರಾಮಲು, ಅಶ್ವತ್ಥನಾರಾಯಣ, ಮಾಜಿ ಕೇಂದ್ರ ಸಚಿವ ಭಗವಂತ ಖೂಬಾ, ಮಾಜಿ ಸಚಿವರಾದ ಭೈರತಿ ಬಸವರಾಜ, ರೇಣುಕಾಚಾರ್ಯ, ಶಾಸಕರಾದ ಪ್ರಭು ಚವ್ಹಾಣ, ಶರಣು ಸಲಗರ್, ಸಿದ್ದು ಪಾಟೀಲ, ಪಿ. ರಾಜಿಜವ್, ಶಶೀಲ್ ನಮೋಶಿ, ಎಂಜಿ ಮೂಳೆ, ಪ್ರಕಾಶ ಖಂಡ್ರೆ, ಬಸವರಾಜ ಮತ್ತಿಮುಡ ಮತ್ತು ಬಾಬು ವಾಲಿ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Electricity Price Hike: ಮೂರು ವರ್ಷದ ವಿದ್ಯುತ್ ದರ ಒಂದೇ ಬಾರಿ ಏರಿಕೆ?
Karnataka: ರಾಜ್ಯದ ಎಲ್ಲ ವಿ.ವಿ.ಗಳಲ್ಲೂ ರಾಜ್ಯಪಾಲರ ಅಧಿಕಾರಕ್ಕೆ ಕತ್ತರಿ?
Congress: ಹಾಸನದಲ್ಲಿ ಬೃಹತ್ ಸಮಾವೇಶ: ಗೌಡರ ತವರಲ್ಲಿ ಇಂದು ಕಾಂಗ್ರೆಸ್ ಶಕ್ತಿಪ್ರದರ್ಶನ
Karnataka Congress: ಯಾವುದೇ ಒಪ್ಪಂದ ಆಗಿಲ್ಲ: ಸಿಎಂ ಸಿದ್ದರಾಮಯ್ಯ
Pilikula Kambala: ಪಿಲಿಕುಳದಲ್ಲಿ ಕಂಬಳ… ವಿಚಾರಣೆ ಮುಂದಕ್ಕೆ
MUST WATCH
ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ
ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ
60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಹೊಸ ಸೇರ್ಪಡೆ
Electricity Price Hike: ಮೂರು ವರ್ಷದ ವಿದ್ಯುತ್ ದರ ಒಂದೇ ಬಾರಿ ಏರಿಕೆ?
Puttur: ಎಪ್ರಿಲ್, ಮೇ ಬಿಸಿಲ ತಾಪ: ಹಲವೆಡೆ ಅಡಿಕೆ ಮರ ಖಾಲಿ!
Karnataka: ರಾಜ್ಯದ ಎಲ್ಲ ವಿ.ವಿ.ಗಳಲ್ಲೂ ರಾಜ್ಯಪಾಲರ ಅಧಿಕಾರಕ್ಕೆ ಕತ್ತರಿ?
Mangaluru: ಜನಾಗ್ರಹವಿದ್ದರೂ ಇನ್ನೂ ದೊರೆಯದ ಪ್ರಾದೇಶಿಕ ಪಾಸ್‌ಪೋರ್ಟ್ ಕೇಂದ್ರ
E-Commerce: ಆಹಾರ ಪದಾರ್ಥ ಪ್ರತ್ಯೇಕ ಪ್ಯಾಕ್ ಕಡ್ಡಾಯ: ಪ್ರಾಧಿಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.