ಪ್ರವಾಸಿಗರೇ ಗಮನಿಸಿ.. ಈ ನಾಲ್ಕು ದಿನ ಚಿಕ್ಕಮಗಳೂರಿನ ಪ್ರವಾಸಿ ತಾಣಗಳಿಗೆ ನಿರ್ಬಂಧ
Team Udayavani, Dec 4, 2024, 5:35 PM IST
ಚಿಕ್ಕಮಗಳೂರು: ದತ್ತಪೀಠದಲ್ಲಿ ದತ್ತಜಯಂತಿ ಹಿನ್ನೆಲೆ 4 ದಿನ ಪ್ರವಾಸಿಗರಿಗೆ ನಿರ್ಬಂಧ ಹೇರಿ ಜಿಲ್ಲಾಡಳಿತ ಆದೇಶಿಸಿದೆ.
ಡಿಸೆಂಬರ್ 11-14 ವರೆಗೆ ನಾಲ್ಕು ದಿನಗಳ ಕಾಲ ಪಶ್ಚಿಮ ಘಟ್ಟಗಳ ಸಾಲು ಬಂದ್ ಆಗಲಿವೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಪ್ರವಾಸಿಗರಿಗೆ ನಿರ್ಬಂಧ ಹೇರಿ ಆದೇಶ ಹೊರಡಿಸಿದ್ದಾರೆ.
ಡಿಸೆಂಬರ್ 12,13,14 ರಂದು ದತ್ತಪೀಠದಲ್ಲಿ ದತ್ತಜಯಂತಿ ಸಂಭ್ರಮದ ಹಿನ್ನೆಲೆ ಮುಳ್ಳಯ್ಯನಗಿರಿ, ದತ್ತಪೀಠ, ಮಾಣಿಕ್ಯಧಾರ ಮುಂತಾದ ಪ್ರವಾಸಿ ತಾಣಗಳಿಗೆ ಪ್ರವಾಸಿಗರಿಗೆ ನಿರ್ಬಂಧ ಹೇರಿ ಆದೇಶ ಹೊರಡಿಸಲಾಗಿದೆ.
ದತ್ತಪೀಠದಲ್ಲಿ ವಿಶ್ವಹಿಂದೂ ಪರಿಷದ್, ಬಜರಂಗದಳದ ನೇತೃತ್ವದಲ್ಲಿ ನಡೆಯುವ ದತ್ತಜಯಂತಿ ಹಿನ್ನೆಲೆ 4 ದಿನ ಮುಳ್ಳಯ್ಯನಗಿರಿ ಭಾಗಕ್ಕೆ ಟೂರಿಸ್ಟ್ ಬ್ಯಾನ್ ಮಾಡಬೇಕೆಂದು ಜಿಲ್ಲಾಡಳಿತ ಆದೇಶ ನೀಡಿದೆ.
ಡಿಸೆಂಬರ್ 11 ರಿಂದ 14 ವರೆಗೆ ನಾಲ್ಕು ದಿನಗಳ ಕಾಲ ಚಿಕ್ಕಮಗಳೂರು ತಾಲೂಕಿನ ಪಶ್ಚಿಮಘಟ್ಟಗಳ ಸಾಲುಗಳಾದ ಮುಳ್ಳಯ್ಯನಗಿರಿ, ದತ್ತಪೀಠಕ್ಕೆ 4 ದಿನ ನಿರ್ಬಂಧ ಹೇರಿ ಡಿಸೆಂಬರ್ 15ರ ರವಿವಾರ ಬೆಳಗ್ಗೆ 10 ಗಂಟೆಯ ಬಳಿಕ ಪ್ರವಾಸಿಗರಿಗೆ ಮುಕ್ತವಾಗಲಿದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Border Security: ಗಡಿ ರಕ್ಷಣೆಗೆ ಶೀಘ್ರ ಸಮಗ್ರ ಡ್ರೋನ್ ನಿಗ್ರಹ ಘಟಕ: ಅಮಿತ್ ಶಾ
Maha Vikas Agadi: ಬಹಿಷ್ಕಾರ ಕೈಬಿಟ್ಟು ಪ್ರಮಾಣ ಸ್ವೀಕರಿಸಿದ ಎಂವಿಎ ಶಾಸಕರು!
Weather: ಉತ್ತರ ಭಾರತದ ಬಹುತೇಕ ರಾಜ್ಯಗಳಲ್ಲಿ ಇಂದಿನಿಂದ ಶೀತಗಾಳಿ: ಐಎಂಡಿ
Bangla Visit: ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಇಂದು ಬಾಂಗ್ಲಾದೇಶಕ್ಕೆ ಭೇಟಿ
Waqf Property: ಮಹಾರಾಷ್ಟ್ರದಲ್ಲೂ ರೈತರ ಆಸ್ತಿಗೆ ವಕ್ಫ್ ಮಂಡಳಿ ನೋಟಿಸ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.