Subrahmanya: ಅಂಗಡಿಗಳ ಮೇಲೆ ದಾಳಿ; ತಂಬಾಕು ಉತ್ಪನ್ನಗಳು ವಶಕ್ಕೆ
Team Udayavani, Dec 5, 2024, 7:00 AM IST
ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದ ಅಂಗಡಿಗಳಲ್ಲಿ ತಂಬಾಕು ಉತ್ಪನ್ನಗಳಾದ ಸಿಗರೇಟ್, ಪಾನ್ ಪರಾಗ್, ಮಧು, ಮಾರುತಿ, ಕೂಲ್ ಲಿಪ್ ಬೇರೆ ಬೇರೆ ರೀತಿಯ ತಂಬಾಕು ಉತ್ಪನ್ನಗಳನ್ನು ಹಾಗೂ ನಿಷೇಧಿತ ಪ್ಲಾಸ್ಟಿಕ್‌ಗಳನ್ನು ಮಾರಾಟ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಅಂಗಡಿಗಳ ಮೇಲೆ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಸುಬ್ರಹ್ಮಣ್ಯ ಗ್ರಾ.ಪಂ. ಅಧ್ಯಕ್ಷರು, ಸದಸ್ಯರು, ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ, ಸಿಬಂದಿ, ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು, ದೇವಸ್ಥಾನದ ಸಿಬಂದಿ, ಸುಬ್ರಹ್ಮಣ್ಯ ಪೊಲೀಸರು ಅಂಗಡಿಗಳ ಮೇಲೆ ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿದರು. ಈ ವೇಳೆ ತಂಬಾಕು ಉತ್ಪನ್ನಗಳ ದಾಸ್ತಾನು, ಮಾರಾಟ ಪತ್ತೆಯಾಗಿದೆ. ತಂಬಾಕು ಪದಾರ್ಥಗಳನ್ನು ವಶಪಡಿಸಿಕೊಂಡು ಅಂಗಡಿಯವರಿಗೆ ದಂಡ ವಿಧಿಸಿದರು. ದೇವಳದ ಪರಿಸರದಲ್ಲಿ ಎಲ್ಲಿಯೂ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡಬಾರದು. ಮಾಡಿದಲ್ಲಿ ಮುಂದಿನ ದಿನಗಳಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ವರ್ತಕರಿಗೆ ಈ ಸಂದರ್ಭ ಅಧಿಕಾರಿಗಳು ಸೂಚನೆ ನೀಡಿದರು.
ಗ್ರಾ.ಪಂ. ಅಧ್ಯಕ್ಷೆ ಸುಜಾತಾ ಕಲ್ಲಾಜೆ, ತಾಲೂಕು ಆರೋಗ್ಯಾಧಿಕಾರಿ ಡಾ| ನಂದಕುಮಾರ್, ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ತ್ರಿಮೂರ್ತಿ, ಗ್ರಾಮ ಪಂಚಾಯತ್ ಪಿಡಿಒ ಮಹೇಶ್, ಕಾರ್ಯದರ್ಶಿ ಮೋನಪ್ಪ ಡಿ., ಗ್ರಾ.ಪಂ. ಮಾಜಿ ಅಧ್ಯಕ್ಷೆ ಲಲಿತಾ ಗುಂಡಡ್ಕ, ಸದಸ್ಯೆ ಭಾರತಿ ದಿನೇಶ್, ಗ್ರಾ.ಪಂ. ಸಿಬಂದಿ, ಸಂಜೀವಿನಿ ಒಕ್ಕೂಟ ಸದಸ್ಯರು ದಾಳಿಯಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.