Pilikula Kambala: ಪಿಲಿಕುಳದಲ್ಲಿ ಕಂಬಳ… ವಿಚಾರಣೆ ಮುಂದಕ್ಕೆ
Team Udayavani, Dec 5, 2024, 7:00 AM IST
ಬೆಂಗಳೂರು: ಮಂಗಳೂರಿನ ನಿಸರ್ಗಧಾಮ ಪಿಲಿಕುಳದಲ್ಲಿ ಡಿಸೆಂಬರ್ನಲ್ಲಿ ಕಂಬಳ ಆಯೋಜನೆ ಮಾಡುವುದಿಲ್ಲ ಎಂದು ರಾಜ್ಯ ಸರಕಾರ ಹೈಕೋರ್ಟ್ಗೆ ಮಾಹಿತಿ ನೀಡಿದೆ.
ಪಿಲಿಕುಳ ಜೈವಿಕ ಉದ್ಯಾನವನ (ನಿಸರ್ಗಧಾಮ)ದ ಬಳಿ ಕಂಬಳ ಆಯೋಜನೆಗೆ ಆಕ್ಷೇಪ ವ್ಯಕ್ತಪಡಿಸಿ ಪೀಪಲ್ ಫಾರ್ ದಿ ಎಥಿಕಲ್ ಟ್ರೀಟ್ಮೆಂಟ್ ಆಫ್ ಎನಿಮಲ್’ (ಪೆಟಾ) ಸಂಸ್ಥೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಹಾಗೂ ನ್ಯಾ| ಕೆ.ವಿ. ಅರವಿಂದ್ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಬುಧವಾರ ವಿಚಾರಣೆಗೆ ಬಂದಿತ್ತು.
ವಿಚಾರಣೆ ವೇಳೆ ಸರಕಾರದ ಪರ ವಕೀಲರಾದ ನಿಲೋಫರ್ ಅಕ್ಬರ್, ಪಿಲಿಕುಳದಲ್ಲಿ ಕಂಬಳ ಆಯೋಜನೆಯಿಂದ ಅಲ್ಲಿಯ ನಿಸರ್ಗಧಾಮದಲ್ಲಿನ ಪ್ರಾಣಿಗಳಿಗೆ ತೊಂದರೆಯಾಗಲಿದೆಯೇ ಎಂಬುದರ ಕುರಿತು ಪರಿಶೀಲನೆಗೆ ಸಮಿತಿ ರಚನೆ ಮಾಡಲಾಗಿದೆ. ಈ ಸಮಿತಿ ಇನ್ನೂ ವರದಿಯನ್ನು ಸಲ್ಲಿಸಬೇಕಾಗಿದೆ. ಅಲ್ಲದೆ, ಡಿಸೆಂಬರ್ನಲ್ಲಿ ಅಲ್ಲಿ ಕಂಬಳ ಆಯೋಜಿಸಲಾಗುತ್ತಿಲ್ಲ ಎಂದು ಮಾಹಿತಿ ನೀಡಿದರು. ಇದನ್ನು ದಾಖಲಿಸಿಕೊಂಡ ನ್ಯಾಯಪೀಠ ವಿಚಾರಣೆಯನ್ನು ಜನವರಿ 10ಕ್ಕೆ ಮುಂದೂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಶಸ್ತ್ರಾಸ್ತ್ರ ತ್ಯಜಿಸಿ ಸಿಎಂ ಮುಂದೆ ಶರಣಾದ 6 ನಕ್ಸಲರು…
Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ
ಹೈಕಮಾಂಡ್ ಸೂಚನೆಗೆ ಔತಣಕೂಟ ಮುಂದಕ್ಕೆ ಹಾಕಿದ್ದೇವೆ, ರದ್ದು ಮಾಡಿಲ್ಲ: ಜಿ.ಪರಮೇಶ್ವರ್
ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ
Protest: ಮುಳಗುಂದ: ಕಡಲೆ ಖರೀದಿ ಹಣ ಬಿಡುಗಡೆಗೆ ಆಗ್ರಹಿಸಿ ಪಾದಯಾತ್ರೆ… ಅಹೋರಾತ್ರಿ ಧರಣಿ
MUST WATCH
ಹೊಸ ಸೇರ್ಪಡೆ
Udupi ಪರ್ಯಾಯ ಶ್ರೀಪಾದರಿಂದ ಭಗವದ್ಗೀತಾ ಲೇಖನ ಯಜ್ಞದ ದೀಕ್ಷೆ ಪಡೆದ ಅಭಿಘ್ಯಾ ಆನಂದ್
Maharashtra: ಒಂದೇ ವಾರದಲ್ಲಿ ತಲೆ ಬೋಳು.. 3 ಗ್ರಾಮಗಳ ಜನರಿಗೆ ತಲೆ ಕೂದಲು ಉದುರುವ ಸಮಸ್ಯೆ!
Bengaluru: ಶಸ್ತ್ರಾಸ್ತ್ರ ತ್ಯಜಿಸಿ ಸಿಎಂ ಮುಂದೆ ಶರಣಾದ 6 ನಕ್ಸಲರು…
Cricket; ಮಹಿಳಾ ಅಂಡರ್-19 ಏಕದಿನ ಟ್ರೋಫಿ: ಅಸ್ಸಾಂ ವಿರುದ್ಧ ಕರ್ನಾಟಕಕ್ಕೆ ಜಯ
Kollywood: ಸೂರ್ಯ – ಕಾರ್ತಿಕ್ ಸುಬ್ಬರಾಜ್ ʼರೆಟ್ರೋʼ ರಿಲೀಸ್ಗೆ ಡೇಟ್ ಫಿಕ್ಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.