Kasaragod ಅಡ್ಕತ್ತಬೈಲ್: ಮನೆಯ ಛಾವಣಿ ಸಂಪೂರ್ಣ ಕುಸಿತ
Team Udayavani, Dec 5, 2024, 12:31 AM IST
ಕಾಸರಗೋಡು: ಅಡ್ಕತ್ತಬೈಲು ಶಾಲೆಯ ಹಿಂದುಗಡೆ ಇರುವ ಹಳೆಯ ಹೆಂಚಿನ ಮನೆ ಯೊಂದು ಬುಧವಾರ ಬೆಳಗ್ಗೆ ಕುಸಿದು ಬಿದ್ದಿದ್ದು, ಕುಟುಂಬ ತತ್ತರಿಸಿದೆ.
ಕಿಶೋರ್ ಕುಮಾರ್ – ಶಶಿಕಲಾ ದಂಪತಿಯ ಹಳೆಯ ಮನೆ ಇದಾಗಿದ್ದು, ಬೆಳಗ್ಗೆ ಸುಮಾರು 6 ಗಂಟೆಗೆ ಮನೆಯ ಛಾವಣಿ ಸಂಪೂರ್ಣ ಕುಸಿದು ಬಿದ್ದಿದೆ. ಮನೆ ಈ ಮೊದಲೇ ಸೋರುತ್ತಿದ್ದ ಹಿನ್ನೆಲೆಯಲ್ಲಿ ಅದಕ್ಕೆ ಟರ್ಪಾಲ್ ಹಾಕಲಾಗಿತ್ತು. ಆದರೆ ಮಾಡು ದುರ್ಬಲವಾಗಿದ್ದ ಹಿನ್ನೆಲೆಯಲ್ಲಿ ಬಿದ್ದಿದೆ. ಹಳೆ ಮನೆಯಾದ್ದರಿಂದ ಅಟ್ಟ ಇದ್ದು, ಮಾಡು ಕುಸಿದರೂ ಒಳಗೆ ಬೀಳದ ಕಾರಣದಿಂದ ದಂಪತಿ ಅಪಾಯದಿಂದ ಪಾರಾಗಿದ್ದಾರೆ. ಅನಿರೀಕ್ಷಿತವಾಗಿ ಸುರಿದ ಭಾರೀ ಮಳೆಯಿಂದಾಗಿ ಮನೆಯ ಮೇಲ್ಛಾವಣಿ ಸಂಪೂರ್ಣವಾಗಿ ಕುಸಿಯಲು ಕಾರಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kitchen appliance: ಬಜಾಜ್ ನಿಂದ ಅಡುಗೆ ಮನೆಗೆ ಬಂತು ಮತ್ತೊಂದು ಸಾಧನ!
Bigg Boss: ಫಿನಾಲೆಗೂ ಮುನ್ನ ವಾರದ ಮಧ್ಯದಲ್ಲೇ ಎಲಿಮಿನೇಷನ್; ಹೊರಗೆ ಹೋದದ್ದು ಇವರೇ
Champions Trophy: ರಾಹುಲ್, ಶಮಿ, ಜಡೇಜಾ ಸ್ಥಾನ ಪಡೆಯುವುದು ಅನುಮಾನ
Kinnigoli: ಕೃತಕ ನೆರೆ ಸಮಸ್ಯೆಗೆ ಪರಿಹಾರ
Mangaluru: ಗುಜ್ಜರಕೆರೆ ನೀರು ಬಳಕೆ ಯೋಗ್ಯವಲ್ಲ; ಪ್ರಯೋಗಾಲಯ ವರದಿಯಿಂದ ಮತ್ತೆ ಸಾಬೀತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.