Moodbidri: ಡಿ.10 -15; “ಆಳ್ವಾಸ್‌ ವಿರಾಸತ್‌’ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ

ಹಿರಿಯ ಸಂಗೀತಗಾರ ಪದ್ಮಶ್ರೀ ಪಂಡಿತ್‌ ವೆಂಕಟೇಶ್‌ ಕುಮಾರ್‌ ಅವರಿಗೆ ಆಳ್ವಾಸ್‌ ವಿರಾಸತ್‌ ಪ್ರಶಸ್ತಿ ಪ್ರದಾನ

Team Udayavani, Dec 5, 2024, 7:05 AM IST

Moodbidri: ಡಿ.10 -15; “ಆಳ್ವಾಸ್‌ ವಿರಾಸತ್‌’ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ

ಮಂಗಳೂರು: ಮೂಡುಬಿದಿರೆಯ ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನದ ವತಿಯಿಂದ 30ನೇ ವರ್ಷದ “ಆಳ್ವಾಸ್‌ ವಿರಾಸತ್‌’ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವವು ಡಿ.10ರಿಂದ 15ರ ವರೆಗೆ ಮೂಡುಬಿದಿರೆಯ ಪುತ್ತಿಗೆ ವಿವೇಕಾನಂದ ನಗರದ ವನಜಾಕ್ಷಿ ಕೆ. ಶ್ರೀಪತಿ ಭಟ್‌ ಬಯಲು ರಂಗ ಮಂದಿರದಲ್ಲಿ ಜರಗಲಿದೆ ಎಂದು ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ|ಎಂ. ಮೋಹನ್‌ ಆಳ್ವ ತಿಳಿಸಿದ್ದಾರೆ.

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಡಿ. 10ರ ಸಂಜೆ 5.30ರಿಂದ 6.30ರ ವರೆಗೆ ಉದ್ಘಾಟನ ಕಾರ್ಯಕ್ರಮ ನಡೆಯಲಿದ್ದು, ಗಣ್ಯರ ಉಪಸ್ಥಿತಿಯಲ್ಲಿ ಡಾ| ಡಿ. ವೀರೇಂದ್ರ ಹೆಗ್ಗಡೆ ಉದ್ಘಾಟಿಸಲಿದ್ದಾರೆ. ಜಿ. ಶಂಕರ್‌ ಫ್ಯಾಮಿಲಿ ಟ್ರಸ್ಟ್‌ ಅಧ್ಯಕ್ಷ ಜಿ. ಶಂಕರ್‌ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಜೆ 6.35ರಿಂದ ರಾತ್ರಿ 8.30ರ ವರೆಗೆ 100ಕ್ಕೂ ಅಧಿಕ ದೇಶಿಯ ಜಾನಪದ ಕಲಾ ತಂಡ ಗಳಿಂದ ಕೂಡಿದ 3 ಸಾವಿರಕ್ಕೂ ಅಧಿಕ ಕಲಾವಿದರನ್ನು ಒಳಗೊಂಡ ಸಾಂಸ್ಕೃತಿಕ ಮೆರವಣಿಗೆ ನಡೆಯಲಿದೆ. ರಾತ್ರಿ 8.30ರಿಂದ 9.30ರ ವರೆಗೆ ವಿರಾಸತ್‌ ಸಾಂಸ್ಕೃತಿಕ ರಥ ಸಂಚಲನ ಹಾಗೂ ರಥಾರತಿ ನಡೆಯಲಿದೆ ಎಂದರು.

ಪ್ರಶಸ್ತಿ ಪ್ರದಾನ
ಡಿ. 11ರಂದು ಸಂಜೆ 5.45ರಿಂದ 6.30ರ ವರೆಗೆ ಆಳ್ವಾಸ್‌ ವಿರಾಸತ್‌ 2024 ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಖ್ಯಾತ ಹಿಂದೂಸ್ಥಾನಿ ಶಾಸ್ತ್ರೀಯ ಸಂಗೀತ ಗಾಯಕ ಪದ್ಮಶ್ರೀ ಪಂಡಿತ್‌ ವೆಂಕಟೇಶ್‌ ಕುಮಾರ್‌ ಅವರಿಗೆ ಆಳ್ವಾಸ್‌ ವಿರಾಸತ್‌ ಪ್ರಶಸ್ತಿ ಪ್ರದಾನಿಸಲಾಗುವುದು. ಬಳಿಕ ಹಿಂದೂಸ್ಥಾನಿ ಗಾಯನ, ಗುಜರಾತ್‌ನ “ರಂಗ್‌ ಮಲಹರ್‌ ದಿ ಫೋಕ್‌ ಆರ್ಟ್ಸ್’ ತಂಡದಿಂದ ಗುಜರಾತಿ ಜಾನಪದ ನೃತ್ಯ ಪ್ರದರ್ಶನ, 9 ಗಂಟೆಯಿಂದ ಆಳ್ವಾಸ್‌ ವೈವಿಧ್ಯಮಯ ಸಾಂಸ್ಕೃತಿಕ ವೈಭವ ನಡೆಯಲಿದೆ.

ಡಿ. 12ರಂದು ಸಂಜೆ 6ರಿಂದ 8ರ ವರೆಗೆ ಗುಜರಾತ್‌ನ ಒಸ್ಮಾನ್‌ ಮೀರ್‌ ಮತ್ತು ಬಳಗದಿಂದ ಸಂಗೀತ ಲಹರಿ ಹಾಗೂ ರಾತ್ರಿ 8.15ರಿಂದ ನೃತ್ಯ ವೈವಿಧ್ಯ, 9.15ರಿಂದ ಆಳ್ವಾಸ್‌ ವೈವಿಧ್ಯಮಯ ಸಾಂಸ್ಕೃತಿಕ ವೈಭವ ಪ್ರಸ್ತುತಗೊಳ್ಳಲಿದೆ.

ಡಿ.13ರಂದು ಸಂಜೆ 6ರಿಂದ 8ರವರೆಗೆ ನೀಲಾದ್ರಿ ಕುಮಾರ್‌ ಮತ್ತು ತಂಡದಿಂದ “ಸೌಂಡ್‌ ಆಫ್ ಇಂಡಿಯಾ’ ಹಾಗೂ 8.15ರಿಂದ 9ರ ವರೆಗೆ ಕೋಲ್ಕತ್ತಾದ ಆಶೀಮ್‌ ಬಂಧು ಭಟ್ಟಾಚಾರ್ಜಿ ಸಂಯೋಜನೆಯಲ್ಲಿ ಭರತನಾಟ್ಯ, ಒಡಿಸ್ಸಿ, ಕಥಕ್‌ ಸಂಗಮದ ತ್ರಿಪರ್ಣ ಪ್ರಸ್ತುತಗೊಳ್ಳಲಿದೆ.

ರಾತ್ರಿ 9ರಿಂದ ಬೆಂಗಳೂರು ಕಾರ್ತೀಸ್‌ ಫ‌ರ್‌ಫಾರ್ಮಿಂಗ್‌ ಆರ್ಟ್ಸ್ ನೃತ್ಯೋಲ್ಲಾಸ ಹಾಗೂ ಬೆಂಗಳೂರು ರಾಜರಾಜೇಶ್ವರಿ ಕಲಾನಿಕೇತನದಿಂದ ಕೂಚುಪುಡಿ ನೃತ್ಯ ಹಾಗೂ ಆಳ್ವಾಸ್‌ ಸಾಂಸ್ಕೃತಿಕ ವೈಭವ ಪ್ರದರ್ಶನಗೊಳ್ಳಲಿದೆ.

ಡಿ. 14ರಂದು ಸಂಜೆ 6ರಿಂದ 9ರ ವರೆಗೆ ಚೆನ್ನೈಯ ಸ್ಟೆಕೇಟೋದ 25 ಕಲಾವಿದರಿಂದ ಸಂಗೀತ ರಸದೌತಣ ಹಾಗೂ ರಾತ್ರಿ 9ಕ್ಕೆ ಸಾಂಸ್ಕೃತಿಕ ರಥ ಸ್ವಸ್ಥಾನ ಗಮನದೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ತೆರೆ ಬೀಳಲಿದೆ ಎಂದರು.

ಡಿ. 15ರಂದು ದಿನಪೂರ್ತಿ ವಿವಿಧ ಮೇಳಗಳು ನಡೆಯಲಿವೆ. ಪ್ರತಿನಿತ್ಯ ಅಂದಾಜು ತಲಾ 1 ಲಕ್ಷ ಜನ ಸೇರುವ ನಿರೀಕ್ಷೆ ಇದೆ. ಇದೇ ವೇಳೆ ರಾಜ್ಯಮಟ್ಟದ ಸ್ಕೌಟ್ಸ್‌-ಗೈಡ್ಸ್‌ ರೋವರ್ಸ್‌-ರೇಂಜರ್ಸ್‌ ಸಾಂಸ್ಕೃತಿಕ ಉತ್ಸವ, ತರಬೇತಿ ನಡೆಯಲಿದೆ ಎಂದವರು ಹೇಳಿದರು.
ಆಳ್ವಾಸ್‌ ಕಾಲೇಜಿನ ಪತ್ರಿಕೋದ್ಯಮ ವಿಭಾಗ ಮುಖ್ಯಸ್ಥ ಪ್ರಸಾದ್‌ ಶೆಟ್ಟಿ ಉಪಸ್ಥಿತರಿದ್ದರು.

ವಿರಾಸತ್‌ನ ಮನಸೆಳೆಯಲಿರುವ ಮಹಾಮೇಳಗಳು

ಕೈಮಗ್ಗ ಸೀರೆಗಳ ಉತ್ಸವ
ಭಾರತದ 30 ಪ್ರದೇಶವಾರು ಹಾಗೂ ಜಿಐ ಟ್ಯಾಗ್‌ ಹೊಂದಿದ ಕೈಮಗ್ಗ ಸೀರೆ, ಬಟ್ಟೆಗಳ ಉತ್ಸವ ವಿರಾಸತ್‌ನ ಈ ವರ್ಷದ ಪ್ರಮುಖ ಆಕರ್ಷಣೆ. ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ನೇಕಾರರಿಂದ ಗ್ರಾಹಕರಿಗೆ ನೇರ ಮಾರಾಟ ನಡೆಯಲಿದೆ.

ಇಂಡಿಯನ್‌ ಆರ್ಟಿಸಾನ್‌ ಬಝಾರ್‌
ಕಲೆ ಮತ್ತು ಕರಕುಶಲ ವಸ್ತುಗಳು, ಉಡುಪುಗಳು, ಆಭರಣಗಳು, ಗೃಹಾಲಂಕಾರಿಕ ವಸ್ತುಗಳು, ಅಪರೂಪದ ಹಾಗೂ ಸಮಕಾಲೀನ ವಸ್ತುಗಳ ಬಜಾರ್‌ ಈ ಬಾರಿಯ ವಿರಾಸತ್‌ನಲ್ಲಿರಲಿದೆ. ದಿಲ್ಲಿಯ ಮೀನಾ ಬಝಾರ್‌ ಮೇಳದಂತೆ ಈ ಮೇಳ ನಡೆಯಲಿದೆ.

ಕೃಷಿ ಮೇಳ
ಕೃಷಿ ಕುರಿತು ಯುವಜನತೆಯಲ್ಲಿ ಭರವಸೆ ಮೂಡಿಸುವ ನಿಟ್ಟಿನಲ್ಲಿ ಕೃಷಿ ಮೇಳ ನಡೆಯಲಿದೆ. 600 ವಿವಿಧ ಮಳಿಗೆಗಳು ಇರಲಿದೆ. ತರಕಾರಿ, ಹಣ್ಣಹಂಪಲು, ಅಲಂಕಾರಿಕ ಗಿಡಗಳು, ಕೃಷಿ ಉಪಕರಣ ಇಲ್ಲಿನ ವಿಶೇಷತೆ.

ಫಲಪುಷ್ಪ ಮೇಳ
ದೇಶ ವಿದೇಶಗಳಿಂದ ತಂದ ತಳಿಗಳು, ನಮ್ಮದೇ ಮಣ್ಣಿನ ದೇಸೀಯ ತಳಿಗಳು, ಕಸಿ ಮಾಡಿದ ವೈವಿಧ್ಯ ಫಲಗಳು ಇಲ್ಲಿರಲಿವೆ. ಹೂ ಹಣ್ಣುಗಳಿಂದ ಮಾಡಿದ ಕಲಾಕೃತಿಗಳು ಇರಲಿವೆ.

ಆಹಾರ ಮೇಳ
ತುಳುನಾಡಿನ ಪರಂಪರೆಯಿಂದ ಆರಂಭಿಸಿ ಅಪ್ಪಟ ದೇಸೀಯ ತಿನಿಸುಗಳು ಆಹಾರ ಮೇಳದಲ್ಲಿರಲಿದೆ. ಆಹಾರೋತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟ ಕರಕುಶಲ, ಪ್ರಾಚ್ಯವಸ್ತು ಪ್ರದರ್ಶನ ಮೇಳ ಈಶಾನ್ಯ, ಉತ್ತರ, ಪೂರ್ವ ಸಹಿತವಿವಿಧ ರಾಜ್ಯಗಳ 100ಕ್ಕೂ ಹೆಚ್ಚು ಮಳಿಗೆಗಳಲ್ಲಿ ಗುಡಿ ಕೈಗಾರಿಕೆ, ಕರಕುಶಲ, ಪ್ರಾಚ್ಯವಸ್ತುಗಳ ಪ್ರದರ್ಶನ ಹಾಗೂ ಮಾರಾಟ.

ಲಲಿತ ಕಲಾ ಮೇಳ, ಚಿತ್ರ ಪ್ರದರ್ಶನ
ಬಣ್ಣ ಕುಂಚದ ಮೂಲಕ ರಂಗು ಮೂಡಿಸುವ ಚಿತ್ರಕಲಾವಿದರ ಕಲಾಕೃತಿಗಳ ಪ್ರದರ್ಶನ, ಮಾರಾಟ. 600ಕ್ಕೂ ಅಧಿಕ ಛಾಯಾಚಿತ್ರಗಳ ಪ್ರದರ್ಶನ, ವಿವಿಧ ಕಲಾಕೃತಿಗಳ ಬೃಹತ್‌ ಪ್ರದರ್ಶನ.

ಟಾಪ್ ನ್ಯೂಸ್

Bengaluru: ಶಸ್ತ್ರಾಸ್ತ್ರ ತ್ಯಜಿಸಿ ಸಿಎಂ ಮುಂದೆ ಶರಣಾದ 6 ನಕ್ಸಲರು…

Bengaluru: ಶಸ್ತ್ರಾಸ್ತ್ರ ತ್ಯಜಿಸಿ ಸಿಎಂ ಮುಂದೆ ಶರಣಾದ 6 ನಕ್ಸಲರು…

Kollywood: ಸೂರ್ಯ – ಕಾರ್ತಿಕ್‌ ಸುಬ್ಬರಾಜ್ ʼರೆಟ್ರೋʼ ರಿಲೀಸ್‌ಗೆ ಡೇಟ್‌ ಫಿಕ್ಸ್

Kollywood: ಸೂರ್ಯ – ಕಾರ್ತಿಕ್‌ ಸುಬ್ಬರಾಜ್ ʼರೆಟ್ರೋʼ ರಿಲೀಸ್‌ಗೆ ಡೇಟ್‌ ಫಿಕ್ಸ್

Naxal Movement End:1990 To 2025:ಕರ್ನಾಟಕ ನಕ್ಸಲೀಯರ ಶಸ್ತ್ರಾಸ್ತ್ರ ಹೋರಾಟದ ಯುಗಾಂತ್ಯ…

Naxal Movement End:1990 To 2025:ಕರ್ನಾಟಕ ನಕ್ಸಲೀಯರ ಶಸ್ತ್ರಾಸ್ತ್ರ ಹೋರಾಟದ ಯುಗಾಂತ್ಯ…

Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ

Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ

GParameshwar

ಹೈಕಮಾಂಡ್‌ ಸೂಚನೆಗೆ ಔತಣಕೂಟ ಮುಂದಕ್ಕೆ ಹಾಕಿದ್ದೇವೆ, ರದ್ದು ಮಾಡಿಲ್ಲ: ಜಿ.ಪರಮೇಶ್ವರ್‌

Retirement: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಸ್ಫೋಟಕ ಆಟಗಾರ

Retirement: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಸ್ಫೋಟಕ ಆಟಗಾರ

ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ

ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-surathkal

Surathkal: ಈಜಾಡಲು ತೆರಳಿದ್ದ ನಾಲ್ವರ ಪೈಕಿ ಮೂವರು ಸಮುದ್ರಪಾಲು

10(1

Mangaluru: ನಿರ್ವಹಣೆ ಇಲ್ಲದೆ ಆಕರ್ಷಣೆ ಕಳೆದುಕೊಂಡ ಜಿಂಕೆ ವನ

9(1

Mangaluru: 10ಕ್ಕೂ ಅಧಿಕ ಅಪಾಯಕಾರಿ ಕ್ರಾಸಿಂಗ್‌

5

Bajpe: ಕೆಂಜಾರು ಹಾಸ್ಟೆಲ್‌  ಕೊಳಚೆ ನೀರು ಖಾಸಗಿ ಜಾಗಕ್ಕೆ; ಸುತ್ತಮುತ್ತ ದುರ್ವಾಸನೆ

4

Kaikamba: ದೊಡ್ಡಳಿಕೆ ಅಣೆಕಟ್ಟಿನಿಂದ ಎಡನಾಲೆಗೆ ನೀರು

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Bengaluru: ಶಸ್ತ್ರಾಸ್ತ್ರ ತ್ಯಜಿಸಿ ಸಿಎಂ ಮುಂದೆ ಶರಣಾದ 6 ನಕ್ಸಲರು…

Bengaluru: ಶಸ್ತ್ರಾಸ್ತ್ರ ತ್ಯಜಿಸಿ ಸಿಎಂ ಮುಂದೆ ಶರಣಾದ 6 ನಕ್ಸಲರು…

ಮಹಿಳಾ ಅಂಡರ್‌-19 ಏಕದಿನ ಟ್ರೋಫಿ: ಅಸ್ಸಾಂ ವಿರುದ್ಧ ಕರ್ನಾಟಕಕ್ಕೆ ಜಯ

Cricket; ಮಹಿಳಾ ಅಂಡರ್‌-19 ಏಕದಿನ ಟ್ರೋಫಿ: ಅಸ್ಸಾಂ ವಿರುದ್ಧ ಕರ್ನಾಟಕಕ್ಕೆ ಜಯ

Kollywood: ಸೂರ್ಯ – ಕಾರ್ತಿಕ್‌ ಸುಬ್ಬರಾಜ್ ʼರೆಟ್ರೋʼ ರಿಲೀಸ್‌ಗೆ ಡೇಟ್‌ ಫಿಕ್ಸ್

Kollywood: ಸೂರ್ಯ – ಕಾರ್ತಿಕ್‌ ಸುಬ್ಬರಾಜ್ ʼರೆಟ್ರೋʼ ರಿಲೀಸ್‌ಗೆ ಡೇಟ್‌ ಫಿಕ್ಸ್

Naxal Movement End:1990 To 2025:ಕರ್ನಾಟಕ ನಕ್ಸಲೀಯರ ಶಸ್ತ್ರಾಸ್ತ್ರ ಹೋರಾಟದ ಯುಗಾಂತ್ಯ…

Naxal Movement End:1990 To 2025:ಕರ್ನಾಟಕ ನಕ್ಸಲೀಯರ ಶಸ್ತ್ರಾಸ್ತ್ರ ಹೋರಾಟದ ಯುಗಾಂತ್ಯ…

Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ

Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.