Stampede: ಪುಷ್ಪ 2 ಸ್ಕ್ರೀನಿಂಗ್ ವೇಳೆ ಕಾಲ್ತುಳಿತ ತಾಯಿ ಮೃತ್ಯು, ಮಗ ಗಂಭೀರ
Team Udayavani, Dec 5, 2024, 9:15 AM IST
ಹೈದರಾಬಾದ್: ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಅಭಿನಯದ ಪುಷ್ಪ-2 ಸಿನಿಮಾದ ಹವಾ ಜೋರಾಗಿದ್ದು ಬುಧವಾರ ದೇಶದೆಲ್ಲೆಡೆ ಸಿನಿಮಾ ಬಿಡುಗಡೆಯಾಗಿದೆ, ಬುಧವಾರ ಪುಷ್ಪ 2 ಸಿನಿಮಾದ ಪ್ರೀಮಿಯರ್ ಶೋಗೆ ಅಭಿಮಾನಿಗಳ ದಂಡೇ ಹರಿದು ಬಂದಿದ್ದು ಈ ವೇಳೆ ಹೈದರಾಬಾದ್ ನ ಸಂಧ್ಯಾ ಥಿಯೇಟರ್ ಬಳಿ ಅಪಾರ ಪ್ರಮಾಣದಲ್ಲಿ ಅಭಿಮಾನಿಗಳು ಸೇರಿದ್ದರಿಂದ ಕಾಲ್ತುಳಿತ ಸಂಭವಿಸಿ ಓರ್ವ ಮಹಿಳೆ ಮೃತಪಟ್ಟು ಆಕೆಯ ಮಗ ಗಂಭೀರ ಗಾಯಗೊಂಡಿರುವ ಘಟನೆ ಸಂಭವಿಸಿದೆ.
ಹೈದರಾಬಾದ್‌ನ ಸಂಧ್ಯಾ ಥಿಯೇಟರ್‌ನಲ್ಲಿ ಈ ಘಟನೆ ನಡೆದಿದ್ದು, ದಿಲ್‌ಸುಖ್‌ನಗರದವರಾದ ರೇವತಿ ಅವರು ತಮ್ಮ ಪತಿ ಭಾಸ್ಕರ್ ಅವರು ಇಬ್ಬರು ಮಕ್ಕಳೊಂದಿಗೆ ಸಂಧ್ಯಾ ಥಿಯೇಟರ್ ಗೆ ಬಂದಿದ್ದರು ಈ ವೇಳೆ ಕಾಲ್ತುಳಿತಕ್ಕೆ ಸಿಲುಕಿ ರೇವತಿ ಮೃತಪಟ್ಟರೆ ಮಗ ಗಂಭೀರ ಗಾಯಗೊಂಡಿದ್ದು ಆತನನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಲಾಗಿದೆ.
ಚಿತ್ರದ ನಾಯಕ ನಟ ಅಲ್ಲು ಅರ್ಜುನ್ ಅವರನ್ನು ನೋಡಲು ಭಾರಿ ಜನಸ್ತೋಮ ಸೇರಿದ್ದರಿಂದ ಕಾಲ್ತುಳಿತ ಸಂಭವಿಸಿ ಈ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
#WATCH | Telangana: Fans of actor Allu Arjun thronged the Sandhya theatre in Hyderabad ahead of the premiere show of his film ‘Pushpa 2: The Rule’ tonight. Police resorted to mild lathicharge to control the crowd. pic.twitter.com/jhRvfB7D3m
— ANI (@ANI) December 4, 2024
ಸಂಗೀತ ನಿರ್ದೇಶಕ ದೇವಿ ಶ್ರೀ ಪ್ರಸಾದ್ ಅವರೊಂದಿಗೆ ಚಿತ್ರ ಮಂದಿರಕ್ಕೆ ಆಗಮಿಸಿದ ನಟನನ್ನು ನೋಡಲು ಅಭಿಮಾನಿಗಳು ಮುಗಿಬಿದ್ದಾಗ ಚಿತ್ರಮಂದಿರದ ಹೊರಗೆ ಗೊಂದಲದ ವಾತಾವರಣ ಉಂಟಾಯಿತು. ಅಲ್ಲದೆ ಈ ವೇಳೆ ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಬೇಕಾಯಿತು ಇದರಿಂದ ಗೊಂದಲ ಉಂಟಾಗಿ ಜನ ಓಡಲಾರಂಭಿಸಿದ ಪರಿಣಾಮ ಅವಘಡ ಸಂಭವಿಸಿದೆ ಅಲ್ಲದೆ ಘಟನೆಯಿಂದ ಥಿಯೇಟರ್‌ನ ಮುಖ್ಯ ಗೇಟ್ ಕುಸಿದಿದೆ ಎನ್ನಲಾಗಿದೆ.
ಚಿತ್ರಮಂದಿರದ ಬಳಿ ಅಪಾರ ಪ್ರಮಾಣದಲ್ಲಿ ಅಭಿಮಾನಿಗಳು ಸೇರಿದ್ದರಿಂದ ಅವರನ್ನು ನಿಯಂತ್ರಿಸಲು ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಯಿತು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೌಟುಂಬಿಕ ದೌರ್ಜನ್ಯ ಆರೋಪ: ʼಬಿಂದಾಸ್ʼ ನಟಿ ಹನ್ಸಿಕಾ, ಸಹೋದರ, ತಾಯಿ ವಿರುದ್ಧ FIR ದಾಖಲು
Oscars 2025: ಹೀನಾಯವಾಗಿ ಸೋತರೂ ʼಆಸ್ಕರ್ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ
Tamil actor ವಿಶಾಲ್‌ಗೆ ಅನಾರೋಗ್ಯ?: ಅಭಿಮಾನಿಗಳಿಗೆ ಆತಂಕ
Andhra: ʼಗೇಮ್ ಚೇಂಜರ್ʼ ಈವೆಂಟ್‌ನಿಂದ ಮರಳುತ್ತಿದ್ದ ಅಭಿಮಾನಿಗಳು ರಸ್ತೆ ಅಪಘಾತಕ್ಕೆ ಬಲಿ
Toxic: ಯಶ್ ಬರ್ತ್ ಡೇಗೆ ʼಟಾಕ್ಸಿಕ್ʼನಿಂದ ಸಿಗಲಿದೆ ಬಿಗ್ ಅಪ್ಡೇಟ್; ಫ್ಯಾನ್ಸ್ ಥ್ರಿಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.